ಬೀದರ್‌ | ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ : ಕಿರಿಯ ಮೇಲ್ವಿಚಾರಕಿ ಅಮಾನತು

Date:

ವಸತಿ ನಿಲಯದ ಆಡಳಿತಾತ್ಮಕ ನಿರ್ವಹಣೆಯಲ್ಲಿ ಹಲವು ಅವ್ಯವಸ್ಥೆಗಳು ಕಂಡು ಬಂದ ಹಿನ್ನೆಲೆಯಲ್ಲಿ, ಕರ್ತವ್ಯಲೋಪ, ನಿರ್ಲಕ್ಷ್ಯ ಹಾಗೂ ಮೇಲ್ವಿಚಾರಣೆಯಲ್ಲಿ ವಿಫಲರಾದ ಆರೋಪದ ಮೇರೆಗೆ ವಸತಿ ನಿಲಯದ ಕಿರಿಯ ಮೇಲ್ವಿಚಾರಕಿಯೊಬ್ಬರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್‌ ಸಿಇಒ ಗಿತ್ತೆ ಮಾಧವ್‌ ವಿಠಲರಾವ್‌ ಆದೇಶಿಸಿದ್ದಾರೆ.

- Advertisement -

ಔರಾದ್‌ ತಾಲೂಕಿನ ಧೂಪತಮಹಾಗಾಂವ್‌ ಗ್ರಾಮದಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಕಿರಿಯ ಮೇಲ್ವಿಚಾರಕಿ ಶೋಭಾ ಅಮಾನತುಗೊಂಡವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಶೋಭಾ ಅವರು ಬೀದರ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ಔರಾದ (ಬಿ) ತಾಲೂಕಿನ ಧೂಪತಮಹಾಗಾಂವ ವಸತಿ ನಿಲಯಕ್ಕೆ ನಿಯೋಜನೆಗೊಂಡು, ಜಂಬಗಿ ಹಾಗೂ ವಡಗಾಂವ (ದೆ) ವಸತಿ ನಿಲಯಗಳ ಹೆಚ್ಚುವರಿ ಪ್ರಭಾರ ವಹಿಸಿಕೊಂಡಿದ್ದರು.

ಸೆ.3ರಂದು ಜಿಲ್ಲಾ ಪಂಚಾಯತ್‌ ಸಿಇಒ ಗಿತ್ತೆ ಮಾಧವ್‌ ಅವರು ವಸತಿ ನಿಲಯಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ ವೇಳೆ ವಿದ್ಯಾರ್ಥಿಗಳ ಸುರಕ್ಷತೆ, ಆರೋಗ್ಯ ಮತ್ತು ಶೈಕ್ಷಣಿಕ ಹಿತಾಸಕ್ತಿಗೆ ಸಂಬಂಧಿಸಿದಂತೆ ನಿರ್ವಹಣೆಯಲ್ಲಿ ಹಲವು ಅವ್ಯವಸ್ಥೆಗಳು ಕಂಡುಬಂದಿರುವುದು ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಶೋಭಾ ಅವರಿಗೆ ಕಾರಣ ಕೇಳುವ ನೋಟಿಸ್ ಜಾರಿ ಮಾಡಲಾಗಿತ್ತು. ಅದಕ್ಕೆ ಅವರು ಲಿಖಿತವಾಗಿ ಉತ್ತರ ಸಲ್ಲಿಸಿದ್ದರು. ಆದರೆ, ವಾರ್ಡನ್‌ ಅವರು ಲಿಖಿತ ಹೇಳಿಕೆ ಸಮಂಜಸವಾಗಿಲ್ಲ ಎಂದು ಕ್ರಮ ಜರುಗಿಸಲಾಗಿದೆ.

ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು, 1957ರ ನಿಯಮ 10(1)(ಡಿ)ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಶೋಭಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅಮಾನತು ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ. ಅಲ್ಲದೆ, ಕೆ.ಸಿ.ಎಸ್.ಆರ್. ನಿಯಮ 98ರನ್ವಯ ಜೀವನಾಧಾರ ಭತ್ಯೆ ಪಡೆಯಲು ಅವರು ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಬಸವಕಲ್ಯಾಣ | ವಿವಿಧೆಡೆ ಸಿಇಒ ಗಿತ್ತೆ ಮಾಧವ್ ಭೇಟಿ: ಕಾರ್ಮಿಕರೊಂದಿಗೆ ಸಂವಾದ, ಮಕ್ಕಳೊಂದಿಗೆ ಊಟ

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...