ಬೀದರ್ | ಗಡಿಭಾಗದ ತಾಂಡಾಗಳಲ್ಲಿ ಉದ್ಯೋಗ ಸೃಷ್ಟಿಸಿ : ಜಿಪಂ ಸಿಇಒ

Date:

ತೆಲಂಗಾಣ ಹಾಗೂ ಮಹಾರಾಷ್ಟ್ರ ಗಡಿಯಲ್ಲಿನ ತಾಂಡಾಗಳ ಕೂಲಿಕಾರ್ಮಿಕರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಯಲು ವಿಬಿ-ಜಿ ರಾಮ್ ಜಿ ಯೋಜನೆಯಡಿ ಹೆಚ್ಚು ಉದ್ಯೋಗ ಸೃಷ್ಟಿಸಿ ಕೂಲಿಕಾರ್ಮಿಕರಿಗೆ ಕೆಲಸ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ದಿಲೀಪ್ ಬದೋಲೆ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಔರಾದ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗಡಿ ಭಾಗದ ತಾಂಡಾಗಳಲ್ಲಿ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯ ಕೂಲಿಕಾರ್ಮಿಕರಿಗೆ ಕೆಲಸ ದೊರೆಯುವಂತೆ ಕಾಮಗಾರಿಗಳನ್ನು ಕೈಗೊಳ್ಳಬೇಕು. ಗ್ರಾಮದಲ್ಲಿಯೇ ನಿರಂತರ ಉದ್ಯೋಗ ಲಭ್ಯವಾದರೆ ಕಾರ್ಮಿಕರ ವಲಸೆಯನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಮುದಾಯ ಕಾಮಗಾರಿಗಳನ್ನು ಗುರುತಿಸಿ ಅನುಷ್ಠಾನಗೊಳಿಸುವ ಮೂಲಕ ಹೆಚ್ಚು ಮಾನವ ದಿನಗಳನ್ನು ಸೃಜಿಸಬೇಕು. ಕಾಮಗಾರಿಗಳ ಬೇಡಿಕೆ ಇರುವ ಕಡೆ ತಕ್ಷಣ ಕೆಲಸ ಆರಂಭಿಸಿ, ಕೂಲಿಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸುವಂತೆ ತಾಕೀತು ಮಾಡಿದರು.

ನಿಷ್ಕ್ರಿಯ ಜಾಬ್ ಕಾರ್ಡ್ಗಳನ್ನು ಪರಿಶೀಲಿಸಿ, ಅರ್ಹ ಫಲಾನುಭವಿಗಳ ಜಾಬ್ ಕಾರ್ಡ್‌ಗಳನ್ನು ಸಕ್ರಿಯವಾಗಿ ಮಾಡಿಸಬೇಕು. ಅರ್ಹ ಕೂಲಿಕಾರ್ಮಿಕರಿಂದ ಉದ್ಯೋಗದ ಬೇಡಿಕೆ ಪಡೆದು, ಅವರಿಗೆ ಸಮಯಕ್ಕೆ ಸರಿಯಾಗಿ ಕೆಲಸ ಒದಗಿಸುವ ಮೂಲಕ ಯೋಜನೆಯ ಪ್ರಯೋಜನವನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಹೇಳಿದರು.

ಬೀದರ್‌ | ಭಾರತ ಜೋಡೊ ಯುವ ಸಂಘಗಳ ನೋಂದಣಿ ಪ್ರಾರಂಭ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ನಿರ್ದೇಶಕ ಜಯಪ್ರಕಾಶ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಎಡಿಪಿಸಿ ದೀಪಕ ಕಡಿಮನಿ, ತಾಲೂಕಿನ ಎಲ್ಲ ಪಿಡಿಒ ಅವರು, ತಾಂತ್ರಿಕ ಸಂಯೋಜಕ ಆನಂದ‌ ಕಾಳಗಾಪೂರೆ, ತಾಂತ್ರಿಕ ಸಹಾಯಕರು, ಐಇಸಿ ಸಂಯೋಜಕ, ಎನ್ಆರ್ ಎಲ್ಎಂ ಸಿಬ್ಬಂದಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಔರಾದ್ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ರವಿ ಡೋಳೆ ಆಯ್ಕೆ

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ‌ (6ರಿಂದ 8ನೇ) ಸಂಘದ ಔರಾದ್...

ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಬೀದರ್ ತಾಲೂಕು ಅಧ್ಯಕ್ಷರಾಗಿ ವೀರೇಂದ್ರಕುಮಾರ್

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ (6ರಿಂದ 8ನೇ ತರಗತಿ) ಶಿಕ್ಷಕರ ಸಂಘದ...

ಭಾಲ್ಕಿ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಶಿಂಧೆ ಪುನರಾಯ್ಕೆ

ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು...