ಔರಾದ ತಾಲೂಕು ʼಬರʼ ಘೋಷಿಸಿ : ಸಿಎಂಗೆ ಶಾಸಕ ಪ್ರಭು ಚವ್ಹಾಣ ಮನವಿ

Date:

ಔರಾದ(ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಸರ್ಕಾರದ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸುವಂತೆ ಔರಾದ್‌ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಭು ಬಿ.ಚವ್ಹಾಣ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

- Advertisement -

ವಿಧಾನಸೌಧದಲ್ಲಿ ಸೆ.23ರಂದು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ, ಔರಾದ್ ತಾಲ್ಲೂಕಿನಲ್ಲಿ ಉಂಟಾಗಿರುವ ಮಳೆ ಕೊರತೆ ಹಾಗೂ ರೈತರು ಎದುರಿಸುತ್ತಿರುವ ಗಂಭೀರ ಪರಿಸ್ಥಿತಿಯ ಕುರಿತು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

“ಬೀದರ್ ಜಿಲ್ಲೆಯಲ್ಲಿ ಔರಾದ ತಾಲ್ಲೂಕನ್ನು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ತಾಲ್ಲೂಕಿನಲ್ಲಿ ಬಹುತೇಕ ಕೃಷಿ ಮಳೆಯಾಧಾರಿತವಾಗಿದ್ದು, ಈ ಬಾರಿ ಮುಂಗಾರು ಮಳೆ ತಡವಾಗಿ ಆರಂಭವಾಗಿದ್ದು, ಅಲ್ಲದೆ ಬೆಳೆಗಳ ಹೂ ಮತ್ತು ಕಾಯಿ ಬಿಡುವ ಹಂತದಲ್ಲಿ ಮಳೆ ಕೈಕೊಟ್ಟಿದೆ. ಇದರಿಂದ ಉದ್ದು, ಹೆಸರು, ಸೋಯಾಬೀನ್, ತೊಗರಿ ಸೇರಿದಂತೆ ವಿವಿಧ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ಮನವರಿಕೆ ಮಾಡಿದರು.

ತಾಲ್ಲೂಕಿನ ಬರ ಪರಿಸ್ಥಿತಿಯನ್ನು ಈ ಹಿಂದೆಯೂ ಹಲವು ಬಾರಿ ಸಿಎಂ, ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಿ ಔರಾದ ಪಟ್ಟಣದಲ್ಲಿ ರೈತರೊಂದಿಗೆ ಬೃಹತ್ ಪ್ರತಿಭಟನೆಯನ್ನೂ ನಡೆಸಲಾಗಿದೆ. ಆದರೂ ಔರಾದ(ಬಿ) ತಾಲ್ಲೂಕು ಬರಪೀಡಿತ ಪಟ್ಟಿಯಿಂದ ಹೊರಗುಳಿದಿರುವುದು ರೈತರಿಗೆ ಅನ್ಯಾಯವಾಗಿದೆ ಎಂದರು.

ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿನ ವಾಸ್ತವ ಪರಿಸ್ಥಿತಿ ಗಂಭೀರವಾಗಿದ್ದು, ಬರದ ತೀವ್ರತೆಯನ್ನು ಮರುಪರಿಶೀಲಿಸಿ ಎರಡು ತಾಲ್ಲೂಕುಗಳನ್ನು ತೀವ್ರ ಸ್ವರೂಪದ ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಬೇಕು ಎಂದು ಮನವಿ ಮಾಡಿದರು.

ಮನವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಔರಾದ(ಬಿ) ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಪ್ರಭು ಚವ್ಹಾಣ ತಿಳಿಸಿದ್ದಾರೆ.

ಇದನ್ನೂ ಓದಿ : ಕೊಪ್ಪಳ | ಡಿಜೆ, ಪಟಾಕಿಗೆ ಗುಡ್‌ ಬೈ: ರಸ್ತೆ, ಬಾವಿ, ಶಾಲೆ ಅಂದಗೊಳಿಸಿದ ಗಣೇಶ ಮಂಡಳಿ ಯುವಕರು!

“ರೈತರ ಸಂಕಷ್ಟದ ಸಂದರ್ಭದಲ್ಲಿ ಸದಾ ಅವರೊಂದಿಗೆ ನಿಲ್ಲುತ್ತೇನೆ. ಔರಾದ(ಬಿ) ತಾಲ್ಲೂಕಿನ ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗಲು ಬಿಡುವುದಿಲ್ಲ. ತಾಲ್ಲೂಕನ್ನು ಬರಪೀಡಿತವೆಂದು ಘೋಷಿಸಿ, ರೈತರಿಗೆ ಸರ್ಕಾರದ ನೆರವು ದೊರೆಯುವವರೆಗೆ ನಿರಂತರವಾಗಿ ಪ್ರಯತ್ನಿಸುತ್ತೇನೆ” ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ ಹಾಕಿದ ಮಾಧ್ಯಮಗಳು

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ...

ಕಲಬುರಗಿಯಲ್ಲಿ ಸೆ.27ರಂದು ಬಸವಾದಿ ಶರಣರ ಹಿಂದೂ ಸಮಾವೇಶ : ಕನೇರಿ ಸ್ವಾಮೀಜಿಗೆ ಅನುಮತಿ ಬೇಡ

ಕಲಬುರಗಿಯಲ್ಲಿ ಸೆ. 27ರಂದು ಹಮ್ಮಿಕೊಳ್ಳಲಾಗಿರುವ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಕೆ, ಪಟ್ಟಿಯಲ್ಲಿಲ್ಲ ಚಂಪತ್ ರಾಯ್ ಹೆಸರು

ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ದೇಣಿಗೆ ಹಣ ಹಾಗೂ ಕಾಣಿಕೆಗಳ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ ಬಿಜೆಪಿಯ ಮತ ಹುಂಡಿ ಖಾಲಿ ಮಾಡುವುದೇ?

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು...