ಬರ ಘೋಷಣೆ ವಿಷಯದಲ್ಲಿ ಔರಾದ್ ಕ್ಷೇತ್ರಕ್ಕೆ ಅನ್ಯಾಯ : ಶಾಸಕ ಪ್ರಭು ಚವ್ಹಾಣ

Date:

ರಾಜ್ಯ ಸರ್ಕಾರ ಬರ ಘೋಷಣೆ ವಿಷಯದಲ್ಲಿ ಔರಾದ್ ಮತಕ್ಷೇತ್ರದ ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ರೈತರಿಗೆ ವಂಚಿಸುತ್ತಿದೆ ಎಂದು ಶಾಸಕ ಪ್ರಭು ಚವ್ಹಾಣ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

- Advertisement -

“ಕ್ಷೇತ್ರದ ವಾಸ್ತವ ಪರಿಸ್ಥಿತಿಯನ್ನು ಅರಿಯದೆ ಅಧಿಕಾರಿಗಳು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಸಮರ್ಪಕವಾಗಿ ಬೆಳೆ ಸಮೀಕ್ಷೆ ನಡೆಸದೆ ಕಚೇರಿಯಲ್ಲಿ ಕುಳಿತು ಸಿದ್ಧಪಡಿಸಿದ ವರದಿಯನ್ನೇ ಆಧಾರವಾಗಿಸಿಕೊಂಡು ಸರ್ಕಾರ ನಿರ್ಧಾರ ಕೈಗೊಂಡಿರುವುದು ರೈತರಿಗೆ ಮಾಡುತ್ತಿರುವ ದ್ರೋಹ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಮುಂಗಾರು ಆರಂಭವಾದ ಬಳಿಕ ಸುಮಾರು ಎರಡು ತಿಂಗಳ ಕಾಲ ಸಮರ್ಪಕ ಮಳೆಯಾಗದೆ ಬಿತ್ತನೆ ಕಾರ್ಯ ವಿಳಂಬವಾಯಿತು. ಮಳೆಗಾಗಿ ಕಾದು ನಂತರ ತಡವಾಗಿ ಬಿತ್ತನೆ ಮಾಡಿದ ರೈತರಿಗೆ ಮತ್ತೆ ಮಳೆ ಕೈಕೊಟ್ಟ ಪರಿಣಾಮ ಹಲವು ಗ್ರಾಮಗಳಲ್ಲಿ ಒಂದೇ ಬೆಳೆಗೆ ಎರಡ್ಮೂರು ಬಾರಿ ಮರುಬಿತ್ತನೆ ಮಾಡುವ ಪರಿಸ್ಥಿತಿ ನಿರ್ಮಾಣವಾಯಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ : ವಚನ ಕಲ್ಯಾಣ | ಮಾಡುವ ಮಾಟವಿಲ್ಲದೆ ಮಾತಿಂಗೆ ಮಾತಾಡುವುದು ಅದೇತರ ಪೂಜೆ?

ಕ್ಷೇತ್ರದ ಕೆಲ ಕಡೆ ಬಿತ್ತನೆಯೇ ಆಗಿಲ್ಲ. ಇದನ್ನೆಲ್ಲ ಪರಿಗಣಿಸದೆ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಲಾಗಿದೆ. ಬರ ಘೋಷಣೆ ವಿಷಯದಲ್ಲಿ ಸರ್ಕಾರ ತಾರತಮ್ಯ ಮಾಡಿದರೆ ರೈತರ ಜತೆ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಶಾಸಕ ಚವ್ಹಾಣ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು...

ಬೀದರ್‌ | ಐತಿಹಾಸಿಕ ಕರೇಜ್ ಅಭಿವೃದ್ಧಿಗೆ ಬುಡಾ ಕೈಜೋಡಿಸಲಿ

ಬೀದರ್‌ ನಗರದಲ್ಲಿರುವ ಐತಿಹಾಸಿಕ ಕರೇಜ್ ಜಲವ್ಯವಸ್ಥೆಯನ್ನು ಸಂರಕ್ಷಿಸಿ, ಅಂತರ್ಜಲ ಮರುಪೂರಣ ಹಾಗೂ...

ಬೀದರ್‌ | ʼಯುವ ಸೌರಭʼ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭೆ ಅನಾವರಣ

ವಿದ್ಯಾರ್ಥಿಗಳಲ್ಲಿರುವ  ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ....

ಬಸವಕಲ್ಯಾಣ | ಕಿಟ್ಟಾ ಗ್ರಾಮದ 20 ಬಡ ಕುಟುಂಬಗಳಿಗೆ ನಿವೇಶನ ನೀಡಲು ಆಗ್ರಹ

ಬಸವಕಲ್ಯಾಣ ತಾಲ್ಲೂಕಿನ ಕಿಟ್ಟಾ ಗ್ರಾಮದ ಸರ್ವೆ ನಂ. 249ರಲ್ಲಿ ಸುಮಾರು 20...