ಬಸವಕಲ್ಯಾಣ | ಕನ್ನಡಕ್ಕೆ ಜಯದೇವಿತಾಯಿ ಲಿಗಾಡೆ ಕೊಡುಗೆ ಅನನ್ಯ

Date:

ಕನ್ನಡ ಸಾಹಿತ್ಯ, ಕನ್ನಡ ನಾಡು-ನುಡಿ ಹಾಗೂ ಬಸವತತ್ವದ ಪ್ರಸಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಡಾ.ಜಯದೇವಿತಾಯಿ ಲಿಗಾಡೆ ಅವರ ಕೊಡುಗೆ ಅಪಾರವಾಗಿದ್ದು, ಅವರ ಸೇವೆ ಕನ್ನಡಿಗರಿಗೆ ಸದಾ ಸ್ಫೂರ್ತಿದಾಯಕವಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಬಸವಲಿಂಗ ಪಟ್ಟದ್ದೇವರು ಹೇಳಿದರು.

- Advertisement -

ಬಸವಕಲ್ಯಾಣದ ಅನುಭವ ಮಂಟಪದ ಭಕ್ತಿಭವನದಲ್ಲಿ ಜಯದೇವಿತಾಯಿ ಲಿಗಾಡೆ ಅವರ 115ನೇ ಜಯಂತಿ ಹಾಗೂ ಡಾ.ಜಯದೇವಿತಾಯಿ ಲಿಗಾಡೆ ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, “ಇಂದಿನ ಮಹಾರಾಷ್ಟ್ರದ ಸೋಲಾಪುರದಲ್ಲಿ ಜನಿಸಿದ್ದರೂ ಜಯದೇವಿತಾಯಿ ಲಿಗಾಡೆ ಅವರು ತಮ್ಮ ಸಂಪೂರ್ಣ ಜೀವನವನ್ನು ಕನ್ನಡ ಮತ್ತು ಕರ್ನಾಟಕದ ಸೇವೆಗೆ ಸಮರ್ಪಿಸಿದ್ದರು” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

“ಕರ್ನಾಟಕ ಏಕೀಕರಣ ಚಳವಳಿಯ ಸಂದರ್ಭದಲ್ಲಿ ಕನ್ನಡದ ಕೋಟೆ ಭದ್ರಗೊಳಿಸುವ ಕಾರ್ಯದಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು. ಬಸವಾದಿ ಶರಣರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಕನ್ನಡತ್ವ ಮತ್ತು ಬಸವತತ್ವವನ್ನು ಉಸಿರಾಗಿಸಿಕೊಂಡಿದ್ದರು. ಕನ್ನಡ ಶರಣರ ವಿಚಾರಧಾರೆಯನ್ನು ಮರಾಠಿ ಭಾಷಿಕರಿಗೆ ಪರಿಚಯಿಸುವ ಮೂಲಕ ಭಾಷಾ-ಸಾಂಸ್ಕೃತಿಕ ಸೇತುವೆ ನಿರ್ಮಿಸಿದ ಕೀರ್ತಿ ಅವರದ್ದಾಗಿದೆ. ಅಲ್ಲದೆ, ಚನ್ನಬಸವ ಪಟ್ಟದ್ದೇವರೊಂದಿಗೆ ಆತ್ಮೀಯ ಭಕ್ತಿ ಸಂಬಂಧ ಹೊಂದಿದ್ದರು” ಎಂದು ಹೇಳಿದರು.

“ಪ್ರತಿವರ್ಷ ನೀಡಲಾಗುವ ಡಾ.ಜಯದೇವಿತಾಯಿ ಲಿಗಾಡೆ ರಾಷ್ಟ್ರೀಯ ಪುರಸ್ಕಾರವನ್ನು ಈ ಬಾರಿ ಸಮಾಜ ಸೇವಕಿ ಡಾ.ಗುರಮ್ಮ ಸಿದ್ಧಾರೆಡ್ಡಿ ಅವರಿಗೆ ಪ್ರದಾನ ಮಾಡಲಾಗಿದ್ದು, ಅವರ ಸೇವೆ ಸಮಾಜಕ್ಕೆ ಮಾದರಿಯಾಗಿದೆ” ಎಂದರು.

ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದ್ದೇವರು ಮಾತನಾಡಿ, “ಡಾ.ಜಯದೇವಿತಾಯಿ ಲಿಗಾಡೆ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಡಾ. ಪಲ್ಲವಿ ಪಾಟೀಲ ಅವರು ಜಯದೇವಿತಾಯಿ ಲಿಗಾಡೆ ಅವರ ಬದುಕು, ಸಾಹಿತ್ಯ ಮತ್ತು ಕನ್ನಡ ಸೇವೆಯನ್ನು ಸವಿಸ್ತಾರವಾಗಿ ಪರಿಚಯಿಸಿದರು. ಪ್ರಾಸ್ತಾವಿಕವಾಗಿ ಸವಿತಾ ನಿರಂಜನ ದೇಶಮುಖ ಮಾತನಾಡಿದರು.

ಪೂಜ್ಯ ಶಿವಾನಂದ ಮಹಾಸ್ವಾಮಿಗಳು ದಿವ್ಯ ಸಮ್ಮುಖ ವಹಿಸಿದ್ದರು. ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ ಅವರು ಪುರಸ್ಕಾರ ಪ್ರದಾನ ಮಾಡಿದರು.

ಸಮಾರಂಭ ಉದ್ಘಾಟಿಸಿದ ಬಸವರಾಜ ಪಾಟೀಲ ಸೇಡಂ ಮಾತನಾಡಿ, ಜಯದೇವಿತಾಯಿ ಲಿಗಾಡೆಯವರ ನಾಡು-ನುಡಿಯ ಮೇಲಿನ ಅಪಾರ ಪ್ರೀತಿಯನ್ನು ನೆನಪಿಸಿಕೊಂಡರು.

ಇದನ್ನೂ ಓದಿ : ಬೀದರ್ | ಅಪರಾಧ ಕೃತ್ಯದಲ್ಲಿ ಭಾಗಿ : ಮತ್ತೆ ಇಬ್ಬರಿಗೆ ಗಡಿಪಾರು

ಕಾರ್ಯಕ್ರಮದಲ್ಲಿ ಡಾ.ಎಸ್.ಬಿ. ದುರ್ಗೆ, ಎಸ್.ಎಸ್. ಹಿರೇಮಠ, ಡಾ. ರಾಜೇಶ್ವರಿ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಸಂಗೀತಾ ಮಂಠಾಳೆ, ಚೇತನಾ ವೀರಶೆಟ್ಟಿ ಪಾಟೀಲ, ರಾಜಕುಮಾರ ಹೂಗಾರ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...