ಬಸವಕಲ್ಯಾಣ | ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅಕ್ಕಪಡೆ

Date:

ಅಕ್ಷರ ಜಗತ್ತಿಗೆ ತೆರೆದುಕೊಳ್ಳುವ ಮೂಲಕ ಸ್ತ್ರೀಲೋಕ ಸಬಲೀಕರಣಗೊಳ್ಳುತ್ತದೆ. ಶೈಕ್ಷಣಿಕ ಸಾಧನೆಯಿಂದ ಮಹಿಳೆಯರಿಗೆ ವಿಶೇಷ ಅಸ್ಮಿತೆ ಕಂಡುಕೊಳ್ಳಲು ಸಾಧ್ಯ ಎಂದು ಅಕ್ಕಪಡೆ ರಾಜ್ಯ ಸಂಯೋಜಕಿ ಶೈನಿ ಪ್ರದೀಪ್ ಗುಂಟಿ ಹೇಳಿದರು.

- Advertisement -

ಬಸವಕಲ್ಯಾಣ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಹಾಗೂ ಬೀದರ ಅಕ್ಕಪಡೆ ವತಿಯಿಂದ ನಗರದ ಶ್ರೀ ಬಸವೇಶ್ವರ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಅಕ್ಕಪಡೆ ಕ್ಯೂಆರ್ ಕೋಡ್ ತಾಂತ್ರಜ್ಞಾನದ ಪ್ರಾಯೋಗಿಕ ಪರೀಕ್ಷೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ’ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಶಿಕ್ಷಣ ಮತ್ತು ಅರಿವಿನಿಂದ ಜಾಗೃತ ಸಮಾಜ ನಿರ್ಮಾಣವಾಗುತ್ತದೆ. ಅನೇಕ ಮಹಿಳೆಯರು ಅಕ್ಷರಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ ದೊರೆತ ಕಾಲೇಜು ಶಿಕ್ಷಣ ಪಡೆಯುವ ಅವಕಾಶ ಪೂರ್ಣಗೊಳಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಿ, ಯಾವುದೇ ಆಕರ್ಷಣೆಗಳಿಗೆ ಒಳಗಾಗದೆ ಓದು ಅಧ್ಯಯನದಿಂದ ಬದುಕು ಕಟ್ಟಿಕೊಳ್ಳಿ” ಎಂದು ಸಲಹೆ ನೀಡಿದರು.

“ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ ಕುರಿತು ಜಾಗೃತಿ ಮೂಡಿಸಿ ಬಾಲ್ಯ ವಿವಾಹ ತಡೆಯುವುದು, ಮಹಿಳೆಯರಿಗೆ ರಕ್ಷಣೆ ಮತ್ತು ಸುರಕ್ಷತೆ ಒದಗಿಸುವ ಉದ್ದೇಶದಿಂದ ಅಕ್ಕಪಡೆ ಸಕ್ರಿಯವಾಗಿದೆ. ಸಾರ್ವಜನಿಕ ಮತ್ತು ವೈಯಕ್ತಿಕ ವಲಯದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ಮತ್ತು ದೌರ್ಜನ್ಯದಿಂದ ಪಾರಾಗಲು ಪೋಲಿಸ್ ಇಲಾಖೆಗೆ ತಿಳಿಸುವ ದಾರಿಯಾಗಿ ಕ್ಯೂಆರ್ ಕೋಡ್ ನ ಹೊಸ ತಂತ್ರಜ್ಞಾನ ಪರಿಚಯಿಸಲಾಗುತ್ತಿದೆ” ಎಂದರು.‌

WhatsApp Image 2026 07 15 at 9.11.36 PM
ಅಕ್ಕಪಡೆಯ ಕರ್ನಾಟಕ ರಾಜ್ಯ ಸಂಯೋಜಕಿ ಶೈನಿ ಪ್ರದೀಪ್ ಗುಂಟಿ ಅವರನ್ನು ಗೌರವಿಸಲಾಯಿತು.

ಬಸವಕಲ್ಯಾಣ ಸಿಪಿಐ ಅಲಿಸಾಬ್ ಅವರು ಮಾತನಾಡಿ, “ಮಹಿಳೆಯರ ಮೇಲಿನ ಯಾವುದೇ ಬಗೆಯ ಹಿಂಸೆಯನ್ನು ಅತ್ಯಂತ ಗೌಪ್ಯವಾಗಿ ಪೊಲೀಸ್ ಇಲಾಖೆಗೆ ಸಲ್ಲಿಸಲು ಅಕ್ಕಪಡೆಯಿಂದ ಕ್ಯೂಆರ್ ತಾಂತ್ರಿಕವಾಗಿ ನಿರ್ಮಿಸಲಾಗಿದೆ. ಇದರ ಪರೀಕ್ಷಾರ್ಥ ಪ್ರಾಯೋಗಿಕವಾಗಿ ಉಪಯೋಗಿಸಲಾಗುತ್ತಿದ್ದು, ಅದರ ಉಪಯುಕ್ತತೆ ಎಲ್ಲರೂ ಪಡೆಯಲಿ. ಅದಕ್ಕೂ ಮೊದಲು ತಾಂತ್ರಿಕ ಅನುಕೂಲತೆ ಮತ್ತು ಅನಾನುಕೂಲ ಕುರಿತು ಮಾಹಿತಿ ನೀಡಿ” ಎಂದರು.

ಬಸವೇಶ್ವರ ಪಿಯು ಕಾಲೇಜು ಪ್ರಾಚಾರ್ಯ ರುದ್ರಮಣಿ ಮಠಪತಿ ಮಾತನಾಡಿ, “ಶೈನಿ ಪ್ರದೀಪ್ ಗುಂಟಿ ಅವರು ಕರ್ನಾಟಕದಲ್ಲಿ ಅದರಲ್ಲೂ ಬೀದರ ಜಿಲ್ಲೆಯಲ್ಲಿ ಅಕ್ಕಪಡೆಯನ್ನು ಹೆಚ್ಚು ಶಕ್ತಗೊಳಿಸಿದ್ದಾರೆ” ಎಂದರು.

ಶ್ರೀ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ ಭೀಮಾಶಂಕರ ಬಿರಾದಾರ ಮಾತನಾಡಿ, “ಬೀದರ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ಮಾರ್ಗದರ್ಶನ ಮತ್ತು ಸತತ ಪ್ರಯತ್ನದ ಫಲವಾಗಿ ಅಕ್ಕಪಡೆಯವರ ಶ್ರಮ ಮತ್ತು ಚಾಕಚಕ್ಯತೆ ರಾಜ್ಯದ ಗಮನ ಸೆಳೆದಿದೆ.
ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಅಪರಾಧದ ಸ್ವರೂಪದ ಬಗ್ಗೆ ಅರಿವು ಮೂಡಿಸುವ ಅಕ್ಕಪಡೆ ಮತ್ತು ಪೊಲೀಸ್ ಇಲಾಖೆಯವರ ಕೆಲಸ ಶ್ಲಾಘನೀಯ. ಅತ್ಯಂತ ಸೂಕ್ಷ್ಮವಾಗಿ ನಡೆಯುವ ಮಹಿಳೆಯರ ಮೇಲಿನ ದೌರ್ಜನ್ಯದ ಬಗೆಗಳು ಮತ್ತು ಪೋಕ್ಸೋ ಕಾಯ್ದೆಯ ಪ್ರಾಮುಖ್ಯತೆ ಕುರಿತು ಪ್ರಜ್ಞೆ ಮೂಡಿಸುವ ಕೆಲಸ ಅಗತ್ಯವಾಗಿದೆ” ಎಂದರು.

ಅಕ್ಕಪಡೆಯ ಕರ್ನಾಟಕ ರಾಜ್ಯ ಸಂಯೋಜಕಿ ಶೈನಿ ಪ್ರದೀಪ್ ಗುಂಟಿ, ಸಿಪಿಐ ಅಲಿಸಾಬ್ ಅವರು ಅಕ್ಕಪಡೆ ಕ್ಯೂ ಆರ್ ಕೋಡ್ ಪ್ರಾಯೋಗಿಕ ಪರೀಕ್ಷೆ ಮಾಡಿ ವಿದ್ಯಾರ್ಥಿನಿಗಳೊಂದಿಗೆ ಸಂವಾದ ನಡೆಸಿದರು.

ಇದನ್ನೂ ಓದಿ : ಬೀದರ್‌ | SIR : ಜು.14ರವರೆಗೆ 14,52,254 ಗಣತಿ ಅರ್ಜಿ ವಿತರಣೆ; 5,20,602 ಅರ್ಜಿ ಸ್ವೀಕೃತ

ಎಎಸ್ಐ ಕನ್ಯಾಕುಮಾರಿ, ಬೀದರ ಅಕ್ಕಪಡೆಯ ಸಂಗೀತಾ, ತಾಂತ್ರಿಕ ವಿಭಾಗದ ವೈಭವ, ಮಂಜುಳಾ, ಅಕ್ಕಮಹಾದೇವಿ ಕಾಲೇಜು ಪ್ರಾಚಾರ್ಯೆ ಮಾಯಾ ಮುರಾಳೆ, ಬಸವೇಶ್ವರ ಪಿಜಿ ಕಾಲೇಜು ಪ್ರಾಚಾರ್ಯೆ ಡಾ.ಶಾಂತಲಾ ಪಾಟೀಲ ಸೇರಿದಂತೆ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಬೌದ್ಧ ಧರ್ಮ ಚಾರಿಕಾ ಕಾರ್ಯಕ್ರಮ

ಮಾತಾ ರಮಾಬಾಯಿ ಅಂಬೇಡ್ಕರ್ ಮಹಿಳಾ ಟ್ರಸ್ಟ್ ಹಾಗೂ ಸರ್ವೋದಯ ಸಿದ್ಧಾರ್ಥ ಕ್ಲಬ್...

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....