ಬಸವಕಲ್ಯಾಣ | ವಿವಿಧೆಡೆ ಸಿಇಒ ಗಿತ್ತೆ ಮಾಧವ್ ಭೇಟಿ: ಕಾರ್ಮಿಕರೊಂದಿಗೆ ಸಂವಾದ, ಮಕ್ಕಳೊಂದಿಗೆ ಊಟ

Date:

ಬಸವಕಲ್ಯಾಣ ತಾಲ್ಲೂಕಿನ ಮಂಠಾಳ ಗ್ರಾಮ ಸೇರಿದಂತೆ ವಿವಿಧೆಡೆ ಜಿಲ್ಲಾ ಪಂಚಾಯತ್‌ ಸಿಇಒ ಗಿತ್ತೆ ಮಾಧವ್‌ ವಿಠಲರಾವ್‌ ಅವರು ಭೇಟಿ ನೀಡಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು, ವಿಬಿ-ಜಿ-ರಾಮ್-ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ತೆರಳಿ ಕೂಲಿ ಕಾರ್ಮಿಕರೊಂದಿಗೆ ಮುಕ್ತ ಸಂವಾದ ನಡೆಸಿದರು.

- Advertisement -

ಈ ವೇಳೆ ಸಿಇಒ ಗಿತ್ತೆ ಮಾಧವ್‌ ಮಾತನಾಡಿ, “ಬಡವರು ಶ್ರೀಮಂತರಾಗಬೇಕಾದರೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತಾಗ ಮಾತ್ರ ಅವರ ಜೀವನದಲ್ಲಿ ಬದಲಾವಣೆ ತರಲು ಸಾಧ್ಯ. ನಿಮ್ಮ ಮಕ್ಕಳು ನಿಮ್ಮಂತೆ ಕೂಲಿ ಕೆಲಸ ಮಾಡಬಾರದು ಎನ್ನುವುದಾದರೆ ಅವರಿಗೆ ಉತ್ತಮ ಶಿಕ್ಷಣ ಕೊಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಶಿಕ್ಷಣದ ಮೂಲಕವೇ ಮಕ್ಕಳ ಭವಿಷ್ಯವನ್ನು ರೂಪಿಸಲು ಸಾಧ್ಯ. ಇದರಿಂದ ಮುಂದಿನ ದಿನಗಳಲ್ಲಿ ನಿಮ್ಮ ಕುಟುಂಬವೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ. ನಾನು ಕೂಡ ಬಡ ಕುಟುಂಬದಲ್ಲಿ ಜನಿಸಿದ್ದೇನೆ. ನಮ್ಮ ತಂದೆ-ತಾಯಿ ಪಟ್ಟ ಪರಿಶ್ರಮದಿಂದಲೇ ಈ ಹಂತಕ್ಕೆ ಬರಲು ಸಾಧ್ಯವಾಗಿದೆ. ಪ್ರತಿಯೊಬ್ಬರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸಿಇಒ ತಮ್ಮ ಅನುಭವ ಹಂಚಿಕೊಂಡರು.

WhatsApp Image 2026 09 10 at 6.03.59 PM

ಕೂಲಿ ಕಾರ್ಮಿಕರೊಂದಿಗೆ ಕೆಲಸದಲ್ಲಿ ಭಾಗಿಯಾದ ಅವರು ಕಾರ್ಮಿಕರು ಕೇಳಿದ ವಿವಿಧ ಪ್ರಶ್ನೆಗಳಿಗೆ ಆತ್ಮೀಯವಾಗಿ ಉತ್ತರಿಸಿದರು. ನೀವು ಮಾಡಿದ ಕೆಲಸಕ್ಕೆ ಕೂಲಿ ಹಣ ಸಿಗುತ್ತದೆ. ಈ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಬಸವಕಲ್ಯಾಣ ತಾಲ್ಲೂಕಿನಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯ ಕಾಮಗಾರಿಗಳು ಉತ್ತಮವಾಗಿ ನಡೆಯುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ವಿಬಿ-ಜಿ ರಾಮ್‌ ಜಿ ಯೋಜನೆಯಡಿ ನೋಂದಾಯಿಸಿಕೊಂಡ ಕೂಲಿ ಕಾರ್ಮಿಕರಿಗೆ ನೂತನ ಜಾಬ್ ಕಾರ್ಡ್‌ಗಳನ್ನು ವಿತರಿಸಿದರು.

ವಸತಿ ನಿಲಯ, ಆಸ್ಪತ್ರೆಗೆ ಭೇಟಿ, ಪರಿಶೀಲನೆ

ಮಂಠಾಳ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ, ಜೆಜೆಎಂ ಕಾಮಗಾರಿ, ಅರಿವು ಕೇಂದ್ರ, ಅಂಗನವಾಡಿ ಕೇಂದ್ರ, ಸರ್ಕಾರಿ ಶಾಲೆ, ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಹಾಗೂ ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ಪಡೆದರು.

ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರಿಗೆ ವಿತರಿಸಲಾಗುತ್ತಿರುವ ಔಷಧಿಗಳ ಲಭ್ಯತೆ ಹಾಗೂ ಆಸ್ಪತ್ರೆಯಲ್ಲಿನ ವಿವಿಧ ವ್ಯವಸ್ಥೆಗಳ ಕುರಿತು ಪರಿಶೀಲಿಸಿದರು. ಚಿಕಿತ್ಸಾ ಸೌಲಭ್ಯಗಳ ಕುರಿತು ರೋಗಿಗಳಿಂದ ಮಾಹಿತಿ ಪಡೆದರು. ನಂತರ ಗ್ರಾಮದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಜೆಜೆಎಂ ಯೋಜನೆಯಡಿ ಮನೆ-ಮನೆಗೆ ಕಲ್ಪಿಸಿರುವ ನಲ್ಲಿ ಸಂಪರ್ಕಗಳನ್ನು ಪರಿಶೀಲಿಸಿದರು. ಗ್ರಾಮಸ್ಥರೊಂದಿಗೆ ಮಾತನಾಡಿ ಕುಡಿಯುವ ನೀರಿನ ಪೂರೈಕೆಯ ಕುರಿತು ಮಾಹಿತಿ ಪಡೆದರು.

ಸರ್ಕಾರಿ ಶಾಲೆಗೆ ಭೇಟಿ ನೀಡಿದ ಅವರು, ಅರ್ಧಕ್ಕೆ ನಿಂತಿರುವ ಶೌಚಾಲಯ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಶಾಲೆಯಲ್ಲಿ ಲಭ್ಯವಿರುವ ಸ್ಥಳಾವಕಾಶವನ್ನು ಬಳಸಿಕೊಂಡು ಉತ್ತಮ ಕ್ರೀಡಾಂಗಣ ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಸತಿ ಶಾಲೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳಿಗೆ ಸರ್ಕಾರದಿಂದ ದೊರೆಯುವ ಪ್ರತಿಯೊಂದು ಸೌಲಭ್ಯವನ್ನು ಸಮಯಕ್ಕೆ ಸರಿಯಾಗಿ ಒದಗಿಸಿ ಉತ್ತಮ ಕಲಿಕಾ ವಾತಾವರಣ ನಿರ್ಮಿಸಬೇಕು ಎಂದು ಸೂಚಿಸಿದರು. ಇದೇ ವೇಳೆ ವಸತಿ ಶಾಲೆಯಲ್ಲಿಯೇ ಮಕ್ಕಳೊಂದಿಗೆ ಕುಳಿತು ಊಟ ಮಾಡಿದರು. ಅರಿವು ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಕೇಂದ್ರಗಳನ್ನು ನಿಗದಿತ ಸಮಯಕ್ಕೆ ತೆರೆಯುವ ಹಾಗೂ ಮುಚ್ಚುವ ಮೂಲಕ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

WhatsApp Image 2026 09 10 at 6.03.26 PM

ಬಸವಕಲ್ಯಾಣ ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಿಇಒ ಅವರು ರಕ್ತ ಪರೀಕ್ಷಾ ವಿಭಾಗ, ಐಸಿಟಿಸಿ, ಸ್ಕ್ಯಾನಿಂಗ್, ತಾಯಿ ಮತ್ತು ಮಗು ಆರೈಕೆ ವಿಭಾಗ ಸೇರಿದಂತೆ ವಿವಿಧ ವಿಭಾಗಗಳನ್ನು ಪರಿಶೀಲಿಸಿದರು. ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಗುಣಮಟ್ಟದ ಚಿಕಿತ್ಸೆ ಹಾಗೂ ಅಗತ್ಯ ಸೇವೆಗಳನ್ನು ಒದಗಿಸಬೇಕು ಎಂದು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಸೂಚಿಸಿದರು.

ಇದನ್ನೂ ಓದಿ : ಬೀದರ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಅಬ್ದುಲ್‌ ಮನ್ನಾನ್‌ ಸೇಠ್‌ ನೇಮಕ

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಸುಲ್ಪಿ, ಸಹಾಯಕ ನಿರ್ದೇಶಕ ಮಹ್ಮದ್ ಸಲೀಂ, ಅರುಣಕುಮಾರ ಪಾಟೀಲ್, ಆಡಳಿತಾಧಿಕಾರಿ ಡಾ.ಮಂಜುನಾಥ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹಾಂತೇಶ ಸಲಗರ, ತಾಂತ್ರಿಕ ಸಂಯೋಜಕ ಶಿವರಾಜ ಪಾಟೀಲ್, ಐಇಸಿ ಸಂಯೋಜಕ ವೀರಾರೆಡ್ಡಿ, ತಾಂತ್ರಿಕ ಸಹಾಯಕರಾದ ಮಾಣಿಕ, ಜಲೀಲ ಸಾಬ್, ಸುಭಾಷ, ಮಲ್ಲಿಕಾರ್ಜುನ ಜಾಧವ, ತಾಲ್ಲೂಕು ವೈದ್ಯಾಧಿಕಾರಿಗಳು ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...