ಬಸವಕಲ್ಯಾಣ | ಆವಿಷ್ಕಾರ, ಸಂಶೋಧನೆಗಳಿಂದಲೇ ಮಾನವ ಪ್ರಗತಿ ಸಾಧ್ಯ: ಡಾ.ರಾಮನಗೌಡ

Date:

ಆವಿಷ್ಕಾರ ಮತ್ತು ವೈಜ್ಞಾನಿಕ ಸಂಶೋಧನೆಗಳಿಲ್ಲದಿದ್ದರೆ ಮಾನವ ಜನಾಂಗದ ಪ್ರಗತಿ ಕುಂಠಿತವಾಗಿ, ಜೀವನ ಕ್ರಮವೇ ವಿನಾಶದತ್ತ ಸಾಗುವ ಅಪಾಯವಿದೆ. ಯುವಕರು ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಬೆಂಗಳೂರಿನ ಯು.ಆರ್.ರಾವ್ ಉಪಗ್ರಹ ಕೇಂದ್ರದ ಮಾಜಿ ಸಹಾಯಕ ನಿರ್ದೇಶಕ ಡಾ. ರಾಮನಗೌಡ ನಾಡಗೌಡ ಹೇಳಿದರು.

- Advertisement -

ನಗರದ ಹರಳಯ್ಯನವರ ಗವಿಯಲ್ಲಿ ನಡೆಯುತ್ತಿರುವ ಶರಣ ವಿಜಯೋತ್ಸವ, ನಾಡಹಬ್ಬ ಹಾಗೂ ಹುತಾತ್ಮ ದಿನಾಚರಣೆ ಅಂಗವಾಗಿ ಅಂತರರಾಷ್ಟ್ರೀಯ ಲಿಂಗಾಯತ ಧರ್ಮ ಕೇಂದ್ರ ಮತ್ತು ಅಖಿಲ ಭಾರತ ಲಿಂಗವಂತ ಹರಳಯ್ಯ ಪೀಠದ ವತಿಯಿಂದ ಆಯೋಜಿಸಿದ್ದ ಯುವ ವೈಜ್ಞಾನಿಕ ಸಮಾವೇಶ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಬಸವಕಲ್ಯಾಣವು ಸಮಾನತೆ ಮತ್ತು ಅಗಾಧ ಜ್ಞಾನದ ನೆಲೆಯಾಗಿದೆ. ಬಸವಾದಿ ಶರಣರ ತತ್ವಗಳು ಇಂದು ಜಗತ್ತಿನ ಹಲವು ಕಡೆಗಳಲ್ಲಿ ಚರ್ಚೆಯಾಗುತ್ತಿವೆ. ಶರಣರ ವಿಚಾರಧಾರೆಗಳು ವೈಚಾರಿಕತೆ ಮತ್ತು ಮಾನವೀಯ ಮೌಲ್ಯಗಳಿಗೆ ಪ್ರೇರಣೆಯಾಗಿವೆ” ಎಂದು ತಿಳಿಸಿದರು.

WhatsApp Image 2026 10 10 at 7.46.08 PM 8
ಜಾಹೀರಾತು

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದೇಶದ ಪ್ರಗತಿಗಾಗಿ ಅನೇಕ ಮಹತ್ವದ ಕಾರ್ಯಗಳನ್ನು ಕೈಗೊಂಡಿದೆ. ಜಾಗತಿಕ ಮಟ್ಟದಲ್ಲಿ ಪ್ರಮುಖ ಬಾಹ್ಯಾಕಾಶ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಇಸ್ರೋದೊಂದಿಗೆ ಕೆಲಸ ಮಾಡಲು ವಿಶ್ವದ ಹಲವು ಸಂಸ್ಥೆಗಳು ಆಸಕ್ತಿ ತೋರುತ್ತಿವೆ. ಬಾಹ್ಯಾಕಾಶ ತಂತ್ರಜ್ಞಾನವನ್ನು ದೇಶದ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ಬಳಸುವುದು ಇಸ್ರೋದ ಮುಖ್ಯ ಉದ್ದೇಶವಾಗಿದೆ. ದೇಶದಲ್ಲಿ ಯುವಕರಿಗೆ ಸಾಕಷ್ಟು ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಆಸಕ್ತಿಯಿಂದ ಕಾರ್ಯನಿರ್ವಹಿಸುವ ಮೂಲಕ ಭಾರತವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದು ಕರೆ ನೀಡಿದರು.

ಹೈದರಾಬಾದ್‌ನ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ)ಯ ಸೈಂಟಿಸ್ಟ್-ಎಫ್ ಡಾ. ತೆಜಸ್ವಿ ಕೆ. ಮಾತನಾಡಿ, “ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ವೈಜ್ಞಾನಿಕ ಸಂಶೋಧನಾ ಕ್ಷೇತ್ರದತ್ತ ಹೆಜ್ಜೆ ಇಡಬೇಕು. ಸಂಶೋಧನೆಗೆ ಕುತೂಹಲ, ತಾಳ್ಮೆ, ಶ್ರದ್ಧೆ ಹಾಗೂ ನಿರಂತರ ಪರಿಶ್ರಮ ಅಗತ್ಯ” ಎಂದು ಹೇಳಿದರು.

“ವಿವಿಧ ಕ್ಷೇತ್ರಗಳ ಜ್ಞಾನವನ್ನು ಗೌರವಿಸಿ, ಆಯಾ ಕ್ಷೇತ್ರಗಳಲ್ಲಿನ ವಿಷಯಗಳನ್ನು ಆಳವಾಗಿ ಅರಿತುಕೊಳ್ಳಬೇಕು. ವೈಜ್ಞಾನಿಕ ಸಂಶೋಧನೆ ಹಲವು ಜ್ಞಾನಶಾಖೆಗಳ ಸಹಯೋಗದಿಂದ ನಡೆಯುತ್ತದೆ. ಆತ್ಮನಿರ್ಭರ ಭಾರತದ ಪರಿಕಲ್ಪನೆಯಡಿ ಡಿಆರ್‌ಡಿಓ ಕಾರ್ಯನಿರ್ವಹಿಸುತ್ತಿದ್ದು, ತಂತ್ರಜ್ಞಾನದ ವಿನ್ಯಾಸ, ಉತ್ಪಾದನೆ ಮತ್ತು ಪರೀಕ್ಷೆ ಸೇರಿದಂತೆ ಪ್ರತಿಯೊಂದು ಹಂತದ ಬಗ್ಗೆಯೂ ಸಮಗ್ರ ಜ್ಞಾನ ಹೊಂದಿರುವುದು ಮುಖ್ಯ. ಜ್ಞಾನ, ಅರ್ಹತೆ ಮತ್ತು ಪರಿಶ್ರಮವನ್ನು ಬಯಸುವ ಕ್ಷೇತ್ರವೇ ವೈಜ್ಞಾನಿಕ ಸಂಶೋಧನೆಯಾಗಿದೆ” ಎಂದು ತಿಳಿಸಿದರು.

ಸಾನ್ನಿಧ್ಯ ವಹಿಸಿದ್ದ ಪೂಜ್ಯ ಡಾ. ಗಂಗಾಂಬಿಕಾ ಅಕ್ಕ ಮಾತನಾಡಿ, “ವಚನಗಳು ಕೇವಲ ಭಕ್ತಿಯ ಅಭಿವ್ಯಕ್ತಿಗಳಲ್ಲ. ಅವುಗಳಲ್ಲಿ ಪ್ರಶ್ನಿಸುವ ಮನೋಭಾವ, ವಿಚಾರಶೀಲತೆ, ಅನುಭವ, ಮಾನವೀಯತೆ ಮತ್ತು ಸಾಮಾಜಿಕ ಸುಧಾರಣೆಯ ಆಶಯಗಳು ಅಡಕವಾಗಿವೆ. ಮನುಷ್ಯ ತನ್ನ ವಿವೇಕದ ಮೂಲಕ ಸತ್ಯವನ್ನು ಅರಿಯಬೇಕು ಎಂಬ ಚಿಂತನೆಗೆ ವಚನ ಸಾಹಿತ್ಯದಲ್ಲಿ ಮಹತ್ವದ ಸ್ಥಾನವಿದೆ” ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಬೀದರ್ ಪಶುವೈದ್ಯಕೀಯ ಮಹಾವಿದ್ಯಾಲಯದ ಕುಲಪತಿ ಡಾ. ಸಿ.ವೀರಣ್ಣ ಮಾತನಾಡಿ, “ವಚನ ಸಾಹಿತ್ಯವು ವೈಜ್ಞಾನಿಕ ಹಾಗೂ ವೈಚಾರಿಕ ನೆಲೆಗಟ್ಟನ್ನು ಹೊಂದಿದೆ. ಪ್ರತಿಯೊಂದು ವಚನದಲ್ಲಿಯೂ ವೈಚಾರಿಕ ಜ್ಞಾನದ ಅಂಶಗಳಿದ್ದು, ಅವುಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ತಿಳಿಸಿದರು.

WhatsApp Image 2026 10 10 at 6.59.42 PM 4
ಜಾಹೀರಾತು

ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಡೀನ್ ಡಾ.ಅಮರನಾಥ ಸೋಲಪುರೆ ಮಾತನಾಡಿದರು. ನಿವೃತ್ತ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಿ.ಎಸ್. ರಗಟೆ, ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ನಿರ್ದೇಶಕ ಡಾ. ಬಸವರಾಜ ಯವಳೆ, ರಾಷ್ಟ್ರೀಯ ಬಸವದಳದ ಅಧ್ಯಕ್ಷ ರವೀಂದ್ರ ಕೊಳಕೂರ ಹಾಗೂ ಶಿವಕುಮಾರ ಬಿರಾದಾರ ಉಪಸ್ಥಿತರಿದ್ದರು. ಆಕಾಶ ಖಂಡಾಳೆ ಸ್ವಾಗತಿಸಿದರು. ಅಂಬ್ರೀಷ ಭಿಮಾಣೆ ನಿರೂಪಿಸಿದರು.

ವಿಜ್ಞಾನಿಗಳೊಂದಿಗೆ ವಿದ್ಯಾರ್ಥಿಗಳ ಸಂವಾದ

ಸಮಾವೇಶದ ಅಂಗವಾಗಿ ವಿದ್ಯಾರ್ಥಿಗಳು ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿನಿಯರಾದ ವೈಶಾಲಿ, ನೀಲಾಂಬಿಕಾ, ಶ್ವೇತಾ ಮಹಾಗಾಂವೆ ಹಾಗೂ ದೀಪಿಕಾ ವಿಜ್ಞಾನಿಗಳಿಗೆ ಪ್ರಶ್ನೆಗಳನ್ನು ಕೇಳಿ ಸಂಶೋಧನೆ, ತಂತ್ರಜ್ಞಾನ ಮತ್ತು ವಿಜ್ಞಾನ ಕ್ಷೇತ್ರದಲ್ಲಿನ ಅವಕಾಶಗಳ ಕುರಿತು ಮಾಹಿತಿ ಪಡೆದರು.

WhatsApp Image 2026 10 14 at 10.22.35 PM

ಎಸ್‌ಎಸ್‌ಕೆಬಿ ಬಸವೇಶ್ವರ ಮಹಾವಿದ್ಯಾಲಯ, ಸರಸ್ವತಿ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಂಕಲ್ಪ ಕಾಲೇಜು, ಡೈಮಂಡ್ ಕಾಲೇಜು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ಓದಿ :

ಇಬ್ಬರು ವಿಜ್ಞಾನಿಗಳಿಗೆ ‘ಶರಣ ವಿಜ್ಞಾನಿ’ ಪುರಸ್ಕಾರ

ಇಸ್ರೋದ ವಿವಿಧ ಯೋಜನೆಗಳ ಯಶಸ್ಸಿಗೆ ಶ್ರಮಿಸಿದ ಡಾ. ರಾಮನಗೌಡ ನಾಡಗೌಡ ಹಾಗೂ ಡಿಆರ್‌ಡಿಓದ ವಿವಿಧ ಯೋಜನೆಗಳ ಯಶಸ್ಸಿಗೆ ಕೊಡುಗೆ ನೀಡಿದ ಡಾ. ತೆಜಸ್ವಿ ಕೆ. ಅವರಿಗೆ ‘ಶರಣ ವಿಜ್ಞಾನಿ’ ಪುರಸ್ಕಾರ ನೀಡಿ ಗೌರವಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...