ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

Date:

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು, ಇಲ್ಲಿ ಪ್ರವೇಶಿಸುವ ಪ್ರತಿಯೊಬ್ಬರೂ ಅಹಂಕಾರ ತೊರೆದು ವಿನಯ, ಶುದ್ಧ ಮನಸ್ಸು ಹಾಗೂ ಶರಣರ ತತ್ವಗಳ ಪಾಲನೆಯೊಂದಿಗೆ ಬರಬೇಕು ಎಂದು ತುಮಕೂರಿನ ಶ್ರೀ ಸಿದ್ಧಗಂಗಾ ಸಂಸ್ಥಾನದ ಪರಮಪೂಜ್ಯ ಶ್ರೀ ಮ.ನಿ.ಪ್ರ. ಶಿವಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು.

- Advertisement -

ಬಸವಕಲ್ಯಾಣದ ಅನುಭವಮಂಟಪದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ 47ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ ಉತ್ಸವ-2026ರ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಅನುಭವಮಂಟಪ ಜಗತ್ತಿನ ಮೊದಲ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಲ್ಯಾಣ ಕ್ರಾಂತಿಯ ಕೇಂದ್ರಬಿಂದುವಾಗಿದ್ದ ಈ ವೇದಿಕೆ ಜಾತಿ, ಮತ, ಲಿಂಗ ಹಾಗೂ ವರ್ಗಭೇದವಿಲ್ಲದೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿತ್ತು. ಶರಣರ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲು ಮೊದಲು ನಮ್ಮಲ್ಲಿರುವ ಅಹಂಕಾರವನ್ನು ತೊರೆಯಬೇಕು. ‘ಎನಗಿಂತ ಕಿರಿಯರಿಲ್ಲ, ಶಿವಭಕ್ತರಿಗಿಂತ ಹಿರಿಯರಿಲ್ಲ’ ಎಂಬ ಬಸವಣ್ಣನವರ ವಚನದಂತೆ ವಿನಯ ಮತ್ತು ದಾಸೋಹ ಭಾವ ಬೆಳೆಸಿಕೊಳ್ಳಬೇಕು ಎಂದರು.

ಅಂತರಂಗ ಮತ್ತು ಬಹಿರಂಗದ ಶುದ್ಧಿ ಬಹಳ ಮುಖ್ಯ. ಮನಸ್ಸಿನಲ್ಲಿ ಅಸೂಯೆ, ದ್ವೇಷ ಹಾಗೂ ಕಲ್ಮಶಗಳನ್ನು ಇಟ್ಟುಕೊಂಡು ಕಲ್ಯಾಣದ ದರ್ಶನ ಮಾಡಿದರೆ ಪ್ರಯೋಜನವಿಲ್ಲ. ‘ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ’ ಎಂಬ ಶರಣರ ಸಂದೇಶದಂತೆ ಶುದ್ಧ ಆಚರಣೆ ರೂಢಿಸಿಕೊಳ್ಳಬೇಕು. ಕಾಯಕದಲ್ಲಿ ನಿಷ್ಠೆ ಹೊಂದುವುದರ ಜತೆಗೆ ಗಳಿಸಿದ್ದನ್ನು ಹಂಚಿ ತಿನ್ನುವ ದಾಸೋಹ ಗುಣ ಬೆಳೆಸಿಕೊಳ್ಳಬೇಕು. ಕಲ್ಯಾಣವೆಂಬುದು ಕೇವಲ ಒಂದು ಊರಲ್ಲ; ಅದು ಸಮಾನತೆ ಮತ್ತು ಶ್ರಮದ ಸಂಕೇತವಾಗಿದೆ ಎಂದು ಹೇಳಿದರು.

WhatsApp Image 2026 11 28 at 6.34.06 PM

ಸಮಾರಂಭದ ಸಮ್ಮುಖ ವಹಿಸಿದ್ದ ಇಳಕಲ್ ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಪೂಜ್ಯ ಡಾ.ಗುರುಮಹಾಂತ ಮಹಾಸ್ವಾಮಿಗಳು ಇಷ್ಟಲಿಂಗ ಪೂಜೆಯ ಮಹತ್ವ ಕುರಿತು ಆಶೀರ್ವಚನ ನೀಡಿದರು. ಹಾರಕೂಡ ಸಂಸ್ಥಾನ ಹಿರೇಮಠದ ಪೂಜ್ಯ ಚನ್ನವೀರ ಶಿವಾಚಾರ್ಯರು ಸಮ್ಮುಖ ವಹಿಸಿದ್ದರು. ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಅನುಭವಮಂಟಪ ಉತ್ಸವದ ಆಶಯ ನುಡಿಗಳನ್ನಾಡಿದರು.

ವಿಜಯೇಂದ್ರ ಹೇಳಿಕೆಗೆ ಬಸವ ಭಕ್ತರ ಆಕ್ರೋಶ

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, “ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ರವಿ ಹಂಜ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಆದರೆ, ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದ ಕುರಿತು ಮಾತನಾಡುತ್ತಾ, ‘ಸರ್ಕಾರಿ ಸೌಲಭ್ಯಕ್ಕಾಗಿ ಪ್ರತ್ಯೇಕ ಧರ್ಮದ ಹೋರಾಟ ನಡೆಸದೆ, ನಾವೆಲ್ಲ ಹಿಂದೂಗಳು ಎಂಬ ಭಾವನೆಯಿಂದ ಒಗ್ಗಟ್ಟಾಗಿರಬೇಕು’ ಎಂದು ಅಭಿಪ್ರಾಯಪಟ್ಟರು.

ಇದಕ್ಕೆ ಸಭಿಕರಲ್ಲಿದ್ದ ಬಸವ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿ, ‘ಲಿಂಗಾಯತ ಧರ್ಮಕ್ಕೆ ವಿರೋಧ ಸಲ್ಲದು’ ಎಂದು ಘೋಷಣೆ ಕೂಗಿದರು. ಬಡವರ ಮಕ್ಕಳಿಗೆ ಧಾರ್ಮಿಕ ಅಲ್ಪಸಂಖ್ಯಾತರ ಸೌಲಭ್ಯ ಅಗತ್ಯವಿದೆ ಎಂದು ಪ್ರತಿಪಾದಿಸಿದ ಕಾರ್ಯಕರ್ತರು ವೇದಿಕೆಯತ್ತ ತೆರಳಲು ಯತ್ನಿಸಿದರು. ಈ ವೇಳೆ ಶಾಸಕ ಶರಣು ಸಲಗರ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಹಾಗೂ ಪೊಲೀಸರು ಅವರನ್ನು ತಡೆದರು.

ಈ ವೇಳೆ ಲಿಂಗಾಯತ ಮಠಾಧೀಶರ ಒಕ್ಕೂಟದ ರಾಜ್ಯಾಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮಾತನಾಡಿ, “ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರಿಂದ ಘೋಷಣೆಗಳನ್ನು ಕೂಗದಂತೆ ಮನವಿ ಮಾಡಿದರು. ಲಿಂಗಾಯತ ಧರ್ಮದ ಮಾನ್ಯತೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಒಕ್ಕೂಟ ಬದ್ಧವಾಗಿದೆ” ಎಂದು ಸ್ಪಷ್ಟಪಡಿಸಿದರು.

ಆದರೂ ಗದ್ದಲ ಮುಂದುವರಿದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಮುಖಂಡರ ಸಲಹೆಯಂತೆ ವಿಜಯೇಂದ್ರ ವೇದಿಕೆಯಿಂದ ನಿರ್ಗಮಿಸಿದರು. ಈ ವೇಳೆ ಪರ-ವಿರೋಧ ಘೋಷಣೆಗಳು ಮೊಳಗಿದವು. ಬಳಿಕ ಉತ್ಸವದ ಕಾರ್ಯಕ್ರಮ ಮುಂದುವರಿಯಿತು.

ಇದೇ ಸಂದರ್ಭದಲ್ಲಿ ಶಿವಮೊಗ್ಗದ ಶರಣ ನವಲಿಂಗ ಶರಣರಿಗೆ ಬಸವಭಾಸ್ಕರ ಪ್ರಶಸ್ತಿ, ಡಾ.ಸಿ.ಆರ್.ಚಂದ್ರಶೇಖರ ಅವರಿಗೆ ಅನುಭವ ಮಂಟಪ ರಾಷ್ಟ್ರೀಯ ಪ್ರಶಸ್ತಿ ಹಾಗೂ ಶರಣ ಡಾ.ಬಿ.ವಿ.ಪಟೇಲ್ ಸ್ಮರಣಾರ್ಥ ನೀಡುವ ಹರ್ಡೇಕರ ಮಂಜಪ್ಪ ಪ್ರಶಸ್ತಿಯನ್ನು ಶರಣ ಬಸವರಾಜ ಧನ್ನೂರು ಅವರಿಗೆ ಪ್ರದಾನ ಮಾಡಲಾಯಿತು.

ಬೀದರ್ ಸಂಸದ ಸಾಗರ ಖಂಡ್ರೆ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಶರಣು ಸಲಗರ, ಮಾರುತಿರಾವ ಮುಳೆ, ಡಾ.ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ಧಲಿಂಗಪ್ಪ ಪಾಟೀಲ, ಮಾಜಿ ಶಾಸಕರಾದ ಮಲ್ಲಿಕಾರ್ಜುನ ಖೂಬಾ, ವಿಜಯಸಿಂಗ್ ಮುಖಂಡರಾದ ಧನರಾಜ ತಾಳಂಪಳ್ಳಿ, ಬಾಬು ವಾಲಿ, ಗುರುನಾಥ ಕೊಳ್ಳೂರು, ಸೋಮನಾಥ ಪಾಟೀಲ, ಚನ್ನಬಸವಣ್ಣ ಬಳತೆ, ಡಿ.ಕೆ.ಸಿದ್ರಾಮ, ಶಿವರಾಜ ನರಶೆಟ್ಟೆ, ಶಶಿಧರ ಕೋಸಂಬೆ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | 107 ಗ್ರಾಮಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಲ್ಲ; ಮಕ್ಕಳಿಗೆ ಮರಾಠಿ ಶಿಕ್ಷಣವೇ ಗತಿ!

ವೈಜಿನಾಥ ಸಜ್ಜನಶೆಟ್ಟಿ ಹಾಗೂ ಸಂಗಯ್ಯ ಸ್ವಾಮಿ ವಚನ ಸಂಗೀತ ನಡೆಸಿಕೊಟ್ಟರು. ಅನುಭವಮಂಟಪ ಸಂಸ್ಕೃತಿ ವಿದ್ಯಾಲಯದ ಮಕ್ಕಳಿಂದ ಬಸವಗೀತೆ ಹಾಗೂ ಚನ್ನಬಸವೇಶ್ವರ ಗುರುಕುಲ ಕರಡ್ಯಾಳದ ಮಕ್ಕಳಿಂದ ವಚನ ನೃತ್ಯ ಪ್ರದರ್ಶನ ನಡೆಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ಫ್ಯಾಸಿಸಂ ಯಾವತ್ತೂ ನಮ್ಮ ಆಯ್ಕೆ ಆಗಬಾರದು: ಶಿವಸುಂದರ್

"ಫ್ಯಾಸಿಸಂನಲ್ಲಿ ಉಗ್ರ ರೂಪವೂ ಇದೆ, ಮಂದ ರೂಪವೂ ಇದೆ. ಉಗ್ರ...

ಬೆಂಗಳೂರು-ಮೈಸೂರು ಹೈವೆಯಲ್ಲಿ ಭೀಕರ ಅಪಘಾತ : ಮೂವರ ಸಾವು

ಬೆಂಗಳೂರು-ಮೈಸೂರು ಹೆದ್ಧಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಟಿಪ್ಪರ್‌ಗೆ ಡಿಕ್ಕಿ ಹೊಡೆದ...

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು ಮಹಿಳೆಯರ ಆರೋಗ್ಯಕ್ಕೆ ಸವಾಲು

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ...

ಜನನುಡಿ 2026 | ಶಿಕ್ಷಣಕ್ಕಾಗಿ ನಡೆದ ಹೋರಾಟವನ್ನು ಕೇವಲ ಜೆನ್-ಜಿ ಚಳವಳಿಯೆಂದು ಕರೆಯಬಾರದು: ಶರಣ್ಯ ವರ್ಮ

ಜನನುಡಿ 2026ರ ಉದ್ಘಾಟನಾ ಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ವಿದ್ಯಾರ್ಥಿ ಚಳವಳಿಯ ಪ್ರತಿನಿಧಿ...