ಬಸವಕಲ್ಯಾಣ | ವಿದ್ಯಾರ್ಥಿಗಳಿಗೆ ಹೊಸ ತಂತ್ರಜ್ಞಾನ ಕಲಿಕೆ ಅಗತ್ಯ : ದಿಲೀಪಕುಮಾರ ತಾಳಂಪಳ್ಳಿ

Date:

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪದವಿ ಪಡೆದರೆ ಸಾಕಾಗುವುದಿಲ್ಲ. ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳ ಬಗ್ಗೆ ನಿರಂತರ ಅಧ್ಯಯನ ಹಾಗೂ ಸಂಶೋಧನೆ ನಡೆಸಬೇಕು. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕು” ಎಂದು ಬಸವಕಲ್ಯಾಣ ಎಜ್ಯೂಕೇಶನಲ್ ಟ್ರಸ್ಟ್ ಉಪಾಧಕ್ಷ ದಿಲೀಪಕುಮಾರ ಎಸ್. ತಾಳಂಪಳ್ಳಿ ಅವರು ಹೇಳಿದರು.

- Advertisement -

ಬೀದರ್‌ ಜಿಲ್ಲೆಯ ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ 2025-26ನೇ ಸಾಲಿನ ಪದವಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಭಾರತೀಯ ಸಂಸ್ಕಾರ ಮತ್ತು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಶ್ರಮ, ಪ್ರಾಮಾಣಿಕತೆ ಹಾಗೂ ಆತ್ಮವಿಶ್ವಾಸದಿಂದ ಜೀವನದಲ್ಲಿ ಮುನ್ನಡೆಯಬೇಕು. ತಮ್ಮ ಜ್ಞಾನವನ್ನು ಸಮಾಜದ ಒಳಿತಿಗೆ ಹಾಗೂ ದೇಶದ ಅಭಿವೃದ್ಧಿಗೆ ಬಳಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಎಂ.ಬಿ.ಎ. ವಿಭಾಗದ ಸಂಯೋಜಕ ಡಾ. ಸುಷ್ಮಾ ಹೆಚ್. ಮಾತನಾಡಿ, “ಇಂದಿನ ಯುವಕರು ತಾಂತ್ರಿಕ ಕೌಶಲ್ಯದೊಂದಿಗೆ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ನೀಡುವುದು ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಸಹೋದ್ಯೋಗಿಗಳು ಹಾಗೂ ಅಧೀನ ಸಿಬ್ಬಂದಿಯೊಂದಿಗೆ ವಿನಯದಿಂದ ವರ್ತಿಸಿ, ಕರ್ತವ್ಯನಿಷ್ಠೆಯಿಂದ ಕಾರ್ಯನಿರ್ವಹಿಸುವುದು ಯಶಸ್ಸಿನ ಮೂಲ” ಎಂದು ಸಲಹೆ ನೀಡಿದರು.

ಕಾಲೇಜಿನ ನಿರ್ದೇಶಕ ಹಾಗೂ ಪ್ರಾಚಾರ್ಯ ಡಾ.ಅಶೋಕಕುಮಾರ ವಣಗೇರಿ ಪ್ರಾಸ್ತಾವಿಕವಾಗಿ ಮಾತನಾಡಿ, “ವಿದ್ಯಾರ್ಥಿ ಜೀವನ ಮುಗಿದು ಹೊಸ ಜಗತ್ತಿನತ್ತ ಹೆಜ್ಜೆಯಿಡುತ್ತಿರುವ ಈ ಸಂದರ್ಭದಲ್ಲಿ ಸವಾಲುಗಳನ್ನು ಅವಕಾಶಗಳಾಗಿ ಪರಿವರ್ತಿಸಿಕೊಳ್ಳಬೇಕು. ಹೊಸ ಕೌಶಲ್ಯಗಳನ್ನು ಬೆಳೆಸಿಕೊಂಡು ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು. ಜೀವನದಲ್ಲಿ ಎತ್ತರಕ್ಕೆ ಬೆಳೆಯುವಾಗ ವಿನಯವನ್ನು ಎಂದಿಗೂ ಕಳೆದುಕೊಳ್ಳಬಾರದು” ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ : ಬೀದರ್‌ | ತೇವಾಂಶ ಸಂರಕ್ಷಣೆಯಿಂದ ಬೆಳೆ ಉಳಿಸಿಕೊಳ್ಳಿ: ರೈತರಿಗೆ ಕೃಷಿ ವಿಜ್ಞಾನಿಗಳ ಸಲಹೆ

ಕಾರ್ಯಕ್ರಮದಲ್ಲಿ ಉಪಪ್ರಾಚಾರ್ಯ ಡಾ.ಅರುಣಕುಮಾರ ಯಲಾಲ, ಕಾಲೇಜಿನ ಕುಲಸಚಿವ ಪ್ರೇಮಸಾಗರ ಪಾಟೀಲ, ವಿಭಾಗ ಮುಖ್ಯಸ್ಥರಾದ ಸುವರ್ಣಲತಾ, ಡಾ.ಸಂಜೀವಕುಮಾರ ಜಲ್ದೇ, ಡಾ.ಅನೀಲ ಪಾಟೀಲ, ರಾಹುಲ ರೆಡ್ಡಿ, ವಿದ್ಯಾಸಾಗರ ಮೂಲಗೆ ಹಾಗೂ ಗುರುರಾಜ ಪಟವಾರಿ ಉಪಸ್ಥಿತರಿದ್ದರು. ಪ್ರೀತಿ ಬಿರಾದರ್ ನಿರೂಪಿಸಿದರು. ಪದವಿ ಪ್ರದಾನ ಸಮಾರಂಭದ ನಿರ್ವಹಣೆಯನ್ನು ಹರೀಕಾ ಕಲ್ಲೂರ ನಡೆಸಿಕೊಟ್ಟರು. ಡಾ.ಅನೀಲ ಪಾಟೀಲ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...