ಬಸವಕಲ್ಯಾಣ | ಪರಿಸರ ಸಮತೋಲನಕ್ಕೆ ಗಿಡ-ಮರಗಳ ಪೋಷಣೆ ಅತ್ಯಗತ್ಯ: ಶೈಲೇಂದ್ರ ಕಾವಡಿ

Date:

ಪರಿಸರ ಸಮತೋಲನವನ್ನು ಕಾಪಾಡಲು ಪ್ರತಿಯೊಬ್ಬರೂ ಗಿಡ-ಮರಗಳನ್ನು ಬೆಳೆಸುವ ಮೂಲಕ ಭೂಮಿಯ ತಾಪಮಾನ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಪರಿಸರವಾದಿ ಶೈಲೇಂದ್ರ ಕಾವಡಿ ಹೇಳಿದರು.

- Advertisement -

ಬಸವಕಲ್ಯಾಣ ​ತಾಲೂಕಿನ ರಾಂಪುರವಾಡಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಯೋಜನೆಯಡಿ ಹಮ್ಮಿಕೊಳ್ಳಲಾಗಿದ್ದ ಪರಿಸರ ಸಂರಕ್ಷಣೆ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಪರಿಸರ ಅಸಮತೋಲನದಿಂದಾಗಿ ಜಾಗತಿಕ ತಾಪಮಾನ ಹೆಚ್ಚಳವಾಗಿ ನಿರಂತರ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಭೂತಾಪಮಾನ ತಗ್ಗಿಸಲು ಮತ್ತು ನೈಸರ್ಗಿಕ ಸಮತೋಲನ ಕಾಪಾಡಲು ವ್ಯಾಪಕ ಪ್ರಮಾಣದಲ್ಲಿ ಮರ-ಗಿಡಗಳನ್ನು ನೆಟ್ಟು ಪೋಷಿಸುವುದು ಇಂದಿನ ತುರ್ತು ಅಗತ್ಯವಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

​ರಾಜೇಶ್ವರ ವಲಯದ ಸಿಆರ್‌ಪಿ ರಾಜಕುಮಾರ ಮಾತನಾಡಿ, “ರೈತರಿಗೆ ಮಣ್ಣೇ ಬಂಗಾರ. ಮಣ್ಣಿನ ಸಂರಕ್ಷಣೆಗಾಗಿ ಪ್ರತಿಯೊಬ್ಬ ರೈತರು ತಮ್ಮ ಹೊಲಗಳ ಸುತ್ತಮುತ್ತ ಗಿಡ-ಮರಗಳನ್ನು ಬೆಳೆಸಬೇಕು. ಮರಗಳು ಭೂಮಿಯಲ್ಲಿ ಅಂತರ್ಜಲ ವೃದ್ಧಿಗೆ ನೆರವಾಗುವುದರ ಜೊತೆಗೆ ಫಲವತ್ತಾದ ಮಣ್ಣು ಕೊಚ್ಚಿ ಹೋಗದಂತೆ ತಡೆಯುತ್ತವೆ. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಸಂಕಲ್ಪದೊಂದಿಗೆ ‘ತಾಯಿಯ ಹೆಸರಿನಲ್ಲಿ ಒಂದು ಗಿಡ’ ನೆಟ್ಟು ಬೆಳೆಸಬೇಕು,” ಎಂದು ಕಿವಿಮಾತು ಹೇಳಿದರು.

ಪರಿಸರ ಪ್ರೇಮಿ ಶಿವರಾಜ್ ಮಾತನಾಡಿ, “ಗ್ರಾಮದಲ್ಲಿ ಮಣ್ಣು ಮತ್ತು ನೀರು ಮಾಲಿನ್ಯವಾಗದಂತೆ ತಡೆಗಟ್ಟಲು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ನಮ್ಮ ಗ್ರಾಮವನ್ನು ಸ್ವಚ್ಛ ಹಾಗೂ ಸುಂದರ ಗ್ರಾಮವಾಗಿ ಮಾರ್ಪಡಿಸಲು ಪ್ರತಿಯೊಬ್ಬರೂ ಹಸಿರು ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ರೈತರು ತಮ್ಮ ಹೊಲಗಳ ಸುತ್ತಮುತ್ತ ಹಣ್ಣಿನ ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು,” ಎಂದು ಮನವಿ ಮಾಡಿದರು.

ಶಾಲೆಯ ಮುಖ್ಯಗುರು ರಾಜಪ್ಪ ಮಾತನಾಡಿ, “ರಾಷ್ಟ್ರೀಯ ಹಸಿರು ಪಡೆ ಯೋಜನೆಯು ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಮತ್ತು ಪ್ರಜ್ಞೆ ಮೂಡಿಸಲು ಅತ್ಯಂತ ಸಹಕಾರಿಯಾಗಿದೆ” ಎಂದರು.

ಇದನ್ನೂ ಓದಿ : ವಚನ ಕಲ್ಯಾಣ | ಗಂಡು ಮೋಹಿಸಿ ಹೆಣ್ಣ ಹಿಡಿದಡೆ ಅದು ಒಬ್ಬರಒಡವೆ ಎಂದು ಅರಿಯಬೇಕು!

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಕಾಂತ ಬೊಳಸೂರೆ ವಹಿಸಿದ್ದರು. ​ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ನರಸಮ್ಮಾ ಬೊಳಸೂರೆ, ನಿವೃತ್ತ ಎ.ಎಸ್.ಐ. ಬಾಬುರಾವ, ಗುಂಡಪ್ಪಾ ಗೋರ್ಟಾ, ವಿಶ್ವನಾಥ ಕಾಂಬಳೆ, ಸುಭಾಷ ಸೇರಿದಂತೆ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

WhatsApp Image 2026 08 14 at 11.58.13 AM 3
ಜಾಹೀರಾತು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...