ಬಸವಕಲ್ಯಾಣ | ಬಸವಾದಿ ಶಿವಶರಣರ ಹಿಂದೂ ಸಮಾವೇಶಕ್ಕೆ ಅನುಮತಿ ನಿರಾಕರಣೆ

Date:

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ಜೂನ್ 28ರಂದು ಕನೇರಿ ಮಠದ ಅದೃಶ್ಯ ಕಾಡ ಸಿದ್ದೇಶ್ವರ ಸ್ವಾಮಿಗಳ ನೇತ್ರತ್ವದಲ್ಲಿ ನಡೆಯಲಿರುವ ಬಸವಾದಿ ಶಿವಶರಣರ ಹಿಂದೂ ಸಮಾವೇಶಕ್ಕೆ ಬಸವಕಲ್ಯಾಣ ತಾಲೂಕು ಆಡಳಿತ ಅನುಮತಿ ನಿರಾಕರಿಸಿದೆ.

- Advertisement -

ಬಸವಕಲ್ಯಾಣ ನಗರದ ಅಕ್ಕಮಹಾದೇವಿ ಕಾಲೇಜು ಆವರಣ ಅಥವಾ ಬಸವೇಶ್ವರ ಕೈಗಾರಿಕಾ ತರಬೇತಿ ಕಾಲೇಜಿನಲ್ಲಿ (ಸಭಾಭವನ) ಬಸವಾದಿ ಶಿವ ಶರಣರ ಬೃಹತ್‌ ಹಿಂದೂ ಸಮಾವೇಶ ನಡೆಸಲು ಅನುಮತಿ ನೀಡುವಂತೆ ಸಮಾವೇಶದ ಅಧ್ಯಕ್ಷ ಗುಂಡುರೆಡ್ಡಿ ಕಮಲಾಪುರ ಅವರು ಜೂ.5ರಂದು ಬಸವಕಲ್ಯಾಣ ತಹಸೀಲ್ದಾರ್‌ ಅವರಿಗೆ ಕೋರಿದ್ದರು. ಆದರೆ ಪೊಲೀಸ್‌ ಇಲಾಖೆಯಿಂದ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಅನುಮತಿ ನಿರಾಕರಿಸಿ ತಾಲೂಕು ಆಡಳಿತ ಹಿಂಬರಹ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

“ಕನೇರಿ ಸ್ವಾಮೀಜಿ ಅವರು ಸುಮಾರು ಸಲ ಬಸವಣ್ಣನವರ ಅನುಯಾಯಿಗಳ ಬಗ್ಗೆ ಮತ್ತು ಬಸವತತ್ವ ಪ್ರಚಾರ ಮಾಡುತ್ತಿರುವ ಮಠಾಧೀಶರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಅಥವಾ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದಕ್ಕೆ ಕರ್ನಾಟಕ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಮತ್ತು ಬಸವಪರ ಸಂಘಟನೆಗಳು ಈ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹೀಗಾಗಿ ಸದರಿ ಕಾರ್ಯಕ್ರಮಕ್ಕೆ ಅನುಮತಿ ನೀಡಿದರೆ ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವ ಇರುತ್ತದೆ ಎಂದು ಪೊಲೀಸ್‌ ಇಲಾಖೆ ನೀಡಿದ ವರದಿ ಆಧರಿಸಿ ಬಸವಕಲ್ಯಾಣದಲ್ಲಿ ನಡೆಯಲಿರುವ ಸದರಿ ಸಮಾವೇಶಕ್ಕೆ ಅನುಮತಿ ನಿರಾಕರಿಸಿದೆ ಎಂದು ಜೂ.11ರಂದು ತಹಸೀಲ್ದಾರ್‌ ಅವರು ನೀಡಿದ ಹಿಂಬರಹದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಕನೇರಿ ಶ್ರೀ ಪ್ರವೇಶ ನಿಷೇಧಿಸದಿದ್ದರೆ ಬಸವಕಲ್ಯಾಣ ಬಂದ್ : ಎಚ್ಚರಿಕೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಳೇದಗುಡ್ಡ | ಎರಡು ತಿಂಗಳಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕು ಕೇಂದ್ರವಾಗಿರುವ ಗುಳೇದಗುಡ್ಡದಲ್ಲಿ ತುರ್ತು ಚಿಕಿತ್ಸೆಗೆ ಪ್ರಮುಖ...

ಐಹೊಳೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು; ಆರು ಮಂದಿ ಗಾಯ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಐಹೊಳೆ ಗ್ರಾಮದಲ್ಲಿ ಗುರುವಾರ ಸಂಜೆ ಕೃಷಿ...

ಮಿಜೋರಾಂ ಹೋಟೆಲ್‌ಗೆ ಎನ್‌ಐಎ ದಾಳಿ: ಮಣಿಪುರದ ಇಬ್ಬರು ಕುಕಿ ವಿದ್ಯಾರ್ಥಿ ನಾಯಕರ ಬಂಧನ

ಮಣಿಪುರ ಮೂಲದ ಇಬ್ಬರು ಕುಕಿ ವಿದ್ಯಾರ್ಥಿ ನಾಯಕರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ...