ಬಸವಕಲ್ಯಾಣ | ನೀಟ್‌ ಪರೀಕ್ಷಾ ಅಕ್ರಮ ಖಂಡಿಸಿ ಪ್ರತಿಭಟನೆ: ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಲಿ

Date:

ನೀಟ್‌ ಪರೀಕ್ಷೆಯಲ್ಲಿ ಪದೇ ಪದೇ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು, ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳು ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ) ಹಾಗೂ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ನೇತ್ರತ್ವದಲ್ಲಿ ಗುರುವಾರ ಬಸವಕಲ್ಯಾಣ ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು.

- Advertisement -

ನಗರದ ಮಹಾತ್ಮ ಗಾಂಧಿ ವೃತ್ತದಿಂದ ಆರಂಭವಾದ ಪ್ರತಿಭಟನಾ ರ‍್ಯಾಲಿ ಬಸವೇಶ್ವರ ವೃತ್ತದ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ವೃತ್ತದಲ್ಲಿ ಸಮಾವೇಶಗೊಂಡಿತು. ಬಳಿಕ ರಾಷ್ಟ್ರಪತಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್‌ ದತ್ತಾತ್ರೇಯ ಗಾದಾ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಅಧ್ಯಕ್ಷ ಜಬಿಯುಲ್ಲಾ ಖಾನ್ ಮಾತನಾಡಿ, “ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮ ಖಂಡನೀಯ. ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಯಿಂದ ಕೆಲವರು ಶಾಶ್ವತವಾಗಿ ಅಂಗವಿಕಲರು, ಕಿವುಡರು ಹಾಗೂ ದೃಷ್ಟಿಹೀನರಾಗಿದ್ದಾರೆ. ಇದು ಕೇವಲ ವಿದ್ಯಾರ್ಥಿಗಳ ಮೇಲಿನ ದಾಳಿಯಲ್ಲ, ದೇಶದ ಭವಿಷ್ಯದ ಮೇಲಿನ ದಾಳಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ವಿದ್ಯಾರ್ಥಿಗಳ ಧ್ವನಿಯನ್ನು ಲಾಠಿಯಿಂದ ಮೌನಗೊಳಿಸುವ ಬದಲು ಅವರ ಸಮಸ್ಯೆಗಳಿಗೆ ನ್ಯಾಯ ಒದಗಿಸಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ರದ್ದುಪಡಿಸಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಎಸ್‌ಐಒ ಅಧ್ಯಕ್ಷ ಮುಜ್ತಾಹಿದ್ ಓಮರ್ ಮಾತನಾಡಿ, “ಶಿಕ್ಷಣ ಎಲ್ಲರಿಗೂ ಸಮಾನವಾಗಿ ದೊರೆಯಬೇಕಾದ ಹಕ್ಕಾಗಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವ ಯಾವುದೇ ವ್ಯವಸ್ಥೆಯನ್ನು ದೇಶದ ಯುವ ಜನತೆ ಒಪ್ಪುವುದಿಲ್ಲ. ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯ ನೆಲಸಮಗೊಳಿಸುವ ಆದೇಶವು ಶಿಕ್ಷಣ, ನ್ಯಾಯ ಹಾಗೂ ಸಂವಿಧಾನದ ಮೇಲಿನ ದಾಳಿಯಾಗಿದೆ” ಎಂದು ಹೇಳಿದರು.

ವಕೀಲೆ ರಾಜಶ್ರೀ ಮಾತನಾಡಿ, “ಶಿಕ್ಷಣವು ಸಂವಿಧಾನ ನೀಡಿರುವ ಮೂಲಭೂತ ಹಕ್ಕಾಗಿದ್ದು, ಯಾವುದೇ ವಿದ್ಯಾರ್ಥಿಯ ಶಿಕ್ಷಣದ ಹಕ್ಕಿಗೆ ಧಕ್ಕೆಯಾಗದಂತೆ ಸರ್ಕಾರ ನಡೆದುಕೊಳ್ಳಬೇಕು” ಎಂದು ಹೇಳಿದರು.

ವಿದ್ಯಾರ್ಥಿ ಮುಖಂಡರು ಮಾತನಾಡಿ, “ಶಿಕ್ಷಣವು ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಭೂತ ಹಕ್ಕಾಗಿದೆ. ಆದರೆ ಶಿಕ್ಷಣ ಕ್ಷೇತ್ರದಲ್ಲಿನ ಅಕ್ರಮಗಳು ಮತ್ತು ವಿದ್ಯಾರ್ಥಿಗಳ ಮೇಲಿನ ಅನ್ಯಾಯದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಪಾಯದಲ್ಲಿದೆ. ಸರ್ಕಾರ ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸಿ ಶಿಕ್ಷಣ ವ್ಯವಸ್ಥೆಯಲ್ಲಿ ವಿಶ್ವಾಸವನ್ನು ಮರುಸ್ಥಾಪಿಸಬೇಕು” ಎಂದು ಆಗ್ರಹಿಸಿದರು.

“ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ರದ್ದುಪಡಿಸುವುದು, ನೀಟ್ ಪರೀಕ್ಷೆಯ ಅಕ್ರಮಗಳ ಕುರಿತು ನ್ಯಾಯಾಂಗ ತನಿಖೆ ನಡೆಸುವುದು, ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೊಳಿಸುವುದು, ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ ವಿರುದ್ಧದ ಕ್ರಮವನ್ನು ಹಿಂತೆಗೆದುಕೊಳ್ಳುವುದು ಹಾಗೂ ವಿದ್ಯಾರ್ಥಿಗಳ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರಕ್ಕೆ ಖಂಡನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಕೆವಿಎಸ್‌ ಮುಖಂಡ ಸಂದೀಪ್‌ ಮುಕಿಂದೆ, ಜೋಹಾ, ಜುಲ್ಫಿಕಾರ್ ಚಬುಕಸ್ವಾರ್, ಅಸದ್ ಉಲ್ಲಾ ಖಾನ್, ರಿಯಾಝ್‌ ಪಟೇಲ್‌ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...