ಬಸವಕಲ್ಯಾಣ | ಜನರಲ್ಲಿ ಸಂವೇದನಾಶೀಲತೆ ಬೆಳೆಸುವ ಶಕ್ತಿ ಸಂವಿಧಾನಕ್ಕಿದೆ : ಭೀಮಾಶಂಕರ ಬಿರಾದರ್

Date:

ದೇಶದ ಪ್ರತಿಯೊಬ್ಬ ಪ್ರಜೆಯಲ್ಲೂ ನ್ಯಾಯಪರತೆ, ಸೂಕ್ಷ್ಮತೆ ಹಾಗೂ ಸಂವೇದನಾಶೀಲತೆಯನ್ನು ಬೆಳೆಸುವ ಶಕ್ತಿ ಸಂವಿಧಾನಕ್ಕಿದೆ ಎಂದು ಶ್ರೀ ಬಸವೇಶ್ವರ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು.

- Advertisement -

ನಗರದ ಶ್ರೀ ಬಸವೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ 76ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಕಟ್ಟಕಡೆಯ ವ್ಯಕ್ತಿಗೂ ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕ ಸಮಾನತೆಯ ಹಕ್ಕುಗಳನ್ನು ಸಂವಿಧಾನ ಒದಗಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನಕ್ಕೆ 77 ವರ್ಷ | ಸಂವಿಧಾನ ಸೋತಿದೆಯೇ?, ಅನುಷ್ಠಾನದಲ್ಲಿ...

26 ನವೆಂಬರ್ 1949. ಭಾರತದ ಇತಿಹಾಸದಲ್ಲಿ ಇದೊಂದು ಮಹತ್ವದ ಐತಿಹಾಸಿಕ ದಿನ. ಶತಮಾನಗಳ ಸಾಮಾಜಿಕ ಅಸಮಾನತೆ, ಶೋಷಣೆ, ದಮನ ಮತ್ತು ಅನ್ಯಾಯದ ವಿರುದ್ಧ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಆಧಾರದಲ್ಲಿ ಹೊಸ...

ಪಂಜಾಬ್ ಚುನಾವಣೆ  | ‘ಎಎಪಿ’ಗೆ ಅಳಿವು-ಉಳಿವಿನ ಕದನ; ಹಳೆಯ...

ಮುಂದಿನ ವರ್ಷದ ಆರಂಭದಲ್ಲಿ, ಅಂದರೆ 2027ರ ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ ) ಪಾಲಿಗೆ ಅಕ್ಷರಶಃ 'ಸಾವು-ಬದುಕಿನ' ಪ್ರಶ್ನೆಯಾಗಿ ಪರಿಣಮಿಸಿದೆ. ರಾಷ್ಟ್ರ ರಾಜಕಾರಣದಲ್ಲಿ ತನ್ನ...

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಪ್ರತಿಯೊಬ್ಬ ವ್ಯಕ್ತಿಗೂ ಅಗತ್ಯವಾದ ಆಹಾರ, ಆರೋಗ್ಯ, ಆಸರೆ, ಶಿಕ್ಷಣ ಮತ್ತು ಉದ್ಯೋಗ ದೊರೆಯುವ ಮೂಲಕ ಘನತೆಯಿಂದ ಬದುಕುವಂತಾಗಲು ಸರ್ಕಾರಗಳಿಗೆ ಸಂವಿಧಾನ ಮಾರ್ಗದರ್ಶನ ನೀಡುತ್ತದೆ. ಬಹುತ್ವ ಮತ್ತು ಬಹುಸಂಸ್ಕೃತಿಯ ನೆಲೆಗಟ್ಟಿನಲ್ಲಿ ಸಮಾಜವನ್ನು ಮುನ್ನಡೆಸಲು ಸಂವಿಧಾನ ನಿರ್ದೇಶನ ನೀಡಿದೆ ಎಂದು ಹೇಳಿದರು.

ಸಂವಿಧಾನದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಆಯಾಮಗಳನ್ನು ಅಧ್ಯಯನ ಮಾಡುವ ಮೂಲಕ ನಮ್ಮ ಅರಿವಿನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಬೇಕು. ಸಮ ಸಮಾಜದ ನಿರ್ಮಾಣ, ಸಶಕ್ತ ಭಾರತದ ಕಟ್ಟುವಿಕೆ ಹಾಗೂ ಪ್ರಜಾಪ್ರಭುತ್ವದ ಮುನ್ನಡೆ ಸಂವಿಧಾನದ ಆಶಯಗಳಾಗಿವೆ. ಬಸವಾದಿ ಶರಣರ ವಚನಗಳ ತಾತ್ವಿಕ ಚಿಂತನೆಗಳು ಮತ್ತು ಸಂವಿಧಾನದ ಆಶಯಗಳು ಒಂದೇ ಆಗಿವೆ. ವಚನಕಾರರು ಪ್ರತಿಪಾದಿಸಿದ ವ್ಯಕ್ತಿ ಮೌಲ್ಯಗಳನ್ನು ಸಂವಿಧಾನವೂ ಎತ್ತಿಹಿಡಿದಿದೆ ಎಂದು ತಿಳಿಸಿದರು.

ಬಸವಕಲ್ಯಾಣದ ಅಕ್ಕಮಹಾದೇವಿ ಮಹಿಳಾ ಪದವಿ ಕಾಲೇಜಿನ ಉಪನ್ಯಾಸಕ ವೆಂಕಟರಾವ್ ಗುನಾಳೆ ವಿಶೇಷ ಉಪನ್ಯಾಸ ನೀಡಿ, “ಸಾಮಾಜಿಕ ನ್ಯಾಯ ಮತ್ತು ಸಮಾನತೆಯೇ ಸಂವಿಧಾನದ ಪ್ರಮುಖ ಆಶಯಗಳಾಗಿವೆ. ಸಂವಿಧಾನದ ಅಧ್ಯಯನದ ಮೂಲಕ ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಬೇಕಿದೆ. ದೇಶದ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸುವುದು ಸಂವಿಧಾನದ ಪರಿಕಲ್ಪನೆಯಾಗಿದೆ” ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಹಬಾಳ್ವೆ ಮತ್ತು ಸಮಾನತೆಯ ಆಶಯಗಳನ್ನು ಸಾಕಾರಗೊಳಿಸಲು ಭದ್ರ ಬುನಾದಿ ಹಾಕಿದ್ದಾರೆ. ದೇಶದ ಐಕ್ಯತೆ, ಭ್ರಾತೃತ್ವ, ಜಾತ್ಯತೀತತೆ ಮತ್ತು ಸಮಾಜವಾದದ ತಳಹದಿಯಾಗಿ ಸಂವಿಧಾನ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

WhatsApp Image 2026 11 23 at 7.41.16 PM 4
ಜಾಹೀರಾತು

ವೈಶಾಲಿ ಸಂವಿಧಾನದ ಪ್ರಸ್ತಾವನೆ ಓದಿದರು. ಭಾಗ್ಯಶ್ರೀ ಮತ್ತು ರೋಹಿಣಿ ಮಾತನಾಡಿದರು. ಬಿಡಿಪಿಸಿ ನಿರ್ದೇಶಕ ಬಸವರಾಜ ತೊಂಡಾರೆ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮವನ್ನು ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನದಾಸ್ ಅವರ ‘ಸಂವಿಧಾನ ಮತ್ತು ವಚನಗಳು’, ‘ಸಂವಿಧಾನ ಓದು’ ಹಾಗೂ ಡಾ. ಎಚ್.ಎಸ್. ಅನುಪಮಾ ಅವರ ‘ಸಂವಿಧಾನ ಮತ್ತು ಮಹಿಳೆ’ ಕೃತಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವ ಮೂಲಕ ಉದ್ಘಾಟಿಸಲಾಯಿತು.

ಬಿಡಿಪಿಸಿ ಸಹ ಕಾರ್ಯದರ್ಶಿ ಸುನಿಲಕುಮಾರ ರಾಯವಾಡೆ, ನಿರ್ದೇಶಕರಾದ ವೀರಣ್ಣ ಹಲಶೆಟ್ಟೆ, ಮಲ್ಲಿಕಾರ್ಜುನ ಚಿರಡೆ, ಶ್ರೀ ಬಸವೇಶ್ವರ ಪಿಜಿ ಕಾಲೇಜಿನ ಪ್ರಾಚಾರ್ಯೆ ಡಾ.ಶಾಂತಲಾ ಪಾಟೀಲ, ಅಕ್ಕಮಹಾದೇವಿ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯೆ ಮಾಯಾ ಮುರಾಳೆ, ಶ್ರೀ ಬಸವೇಶ್ವರ ಪಿಯು ಕಾಲೇಜಿನ ಪ್ರಾಚಾರ್ಯ ಡಾ.ರುದ್ರಮಣಿ ಮಠಪತಿ, ಐಕ್ಯೂಎಸಿ ಸಂಯೋಜಕ ಪವನ್ ಪಾಟೀಲ ಸೇರಿದಂತೆ ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂಗೀತಾ ಮಹಾಗಾವೆ ನಿರೂಪಿಸಿ ಪ್ರಾಸ್ತಾವಿಕ ಮಾತನಾಡಿದರು. ಗಂಗಾಧರ ಸಾಲಿಮಠ ಸ್ವಾಗತಿಸಿದರು. ಚೆನ್ನಬಸಪ್ಪ ವಂದಿಸಿದರು.

ಇದನ್ನೂ ಓದಿ : ಬೀದರ್ | ವಿಶ್ವದ ಶ್ರೇಷ್ಠ ಸಂವಿಧಾನ ನಮ್ಮ ದೇಶಕ್ಕೆ ಭದ್ರ ಬುನಾದಿ: ಈಶ್ವರ ಖಂಡ್ರೆ

WhatsApp Image 2026 11 13 at 8.18.17 PM 17
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನದ ಧ್ವನಿ ಜನರ ಧ್ವನಿಯಾಗಬೇಕು; ಅದರ ಆಶಯಗಳ ಸಾಕಾರಕ್ಕೆ ಜನಜಾಗೃತಿ ಅತ್ಯಗತ್ಯ: ಮಾಜಿ ಸಿಎಂ ಸಿದ್ದರಾಮಯ್ಯ

ಸಂವಿಧಾನ ಅಂಗೀಕಾರವಾಗಿ 77 ವರ್ಷಗಳು ಕಳೆದಿದ್ದರೂ ಅದರ ಆಶಯಗಳು ಸಂಪೂರ್ಣವಾಗಿ ಈಡೇರಿಲ್ಲ....

ಪಶುಸಂಗೋಪನೆ ಸಾಲ ವಿತರಣೆ ವಿಳಂಬಕ್ಕೆ ರೈತರ ಆಕ್ರೋಶ: 15 ದಿನಗಳ ಗಡುವು

ಪಶುಸಂಗೋಪನೆ ಸಾಲ ವಿತರಣೆಯಲ್ಲಿ ಎದುರಾಗಿರುವ ತಾಂತ್ರಿಕ ಗೊಂದಲ ಹಾಗೂ ವಿಳಂಬ ನೀತಿಯನ್ನು...

ಭದ್ರಾವತಿ | ಬಾಲ್ಯವಿವಾಹ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಘಟಿತ ಪ್ರಯತ್ನ ಅಗತ್ಯ: ಗಣ್ಯರ ಅಭಿಮತ

ಆಶ್ರಿತ ಸಂಸ್ಥೆ, ಶಿವಮೊಗ್ಗ ಹಾಗೂ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು...

ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ

ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದ ಅನುಭವ ಮಂಟಪದ ಆವರಣದಲ್ಲಿ ನವೆಂಬರ್ 28...