ಬಸವಕಲ್ಯಾಣ‌ | ಎಲ್‌ಕೆಜಿ, ಯುಕೆಜಿ ಅತಿಥಿ ಶಿಕ್ಷಕರ ವೇತನ ಬಿಡುಗಡೆಗೆ ಆಗ್ರಹ

Date:

ಕೆಕೆಆರ್‌ಡಿಬಿ ಯೋಜನೆಯಡಿ ಬಸವಕಲ್ಯಾಣ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳಿಗೆ ಬೋಧಿಸುವ ಅತಿಥಿ ಶಿಕ್ಷಕರು ಹಾಗೂ ಆಯಾಗಳಿಗೆ ಕಳೆದ ಎರಡು ವರ್ಷಗಳಿಂದ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

- Advertisement -

ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಲೋಕೆಶ ಮೋಳಕೆರೆ ನೇತೃತ್ವದಲ್ಲಿ ಅತಿಥಿ ಶಿಕ್ಷಕರು ಕಲಬುರಗಿಯ ಕೆಕೆಆರ್‌ಡಿಬಿ ಅಧೀನ ಕಾರ್ಯದರ್ಶಿ ಹೆಸರಿಗೆ ಬರೆದ ಮನವಿ ಪತ್ರ ಬಸವಕಲ್ಯಾಣ ತಹಸೀಲ್ದಾರ್ ದತ್ತಾತ್ರೇಯ ಗಾದಾ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಕಳೆದ ಎರಡು ವರ್ಷಗಳಿಂದ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕಿಯರು ಹಾಗೂ ಆಯಾಗಳು ಸೇವೆ ಸಲ್ಲಿಸುತ್ತಿದ್ದೇವೆ. ಆದರೆ ಇಲ್ಲಿಯವರೆಗೆ ವೇತನ ಬಿಡುಗಡೆ ಮಾಡದ ಹಿನ್ನೆಲೆ ತೀವ್ರ ಆರ್ಥಿಕ ಸಂಕಷ್ಟ ಉಂಟಾಗಿ ಕುಟುಂಬ ನಿರ್ವಹಣೆ ಹಾಗೂ ದೈನಂದಿನ ಜೀವನ ಸಾಗಿಸುವುದೇ ಕಷ್ಟಕರವಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಬಾಕಿ ವೇತನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಶಿಕ್ಷಣ ಸಚಿವರು, ಕೆಕೆಆರ್‌ಡಿಬಿ ಅಧ್ಯಕ್ಷರು ಹಾಗೂ ಬಸವಕಲ್ಯಾಣ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಸೂಕ್ತ ಸ್ಪಂದನೆ ದೊರೆತಿಲ್ಲ. ಈಗಲಾದರೂ ಶಿಕ್ಷಣ ಇಲಾಖೆ ಅಧಿಕಾರಿಗಳು, ಕೆಕೆಆರ್‌ಡಿಬಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು, ಕಳೆದ 2 ವರ್ಷಗಳಿಂದ ಬಾಕಿ ಇರುವ ಸಂಪೂರ್ಣ ವೇತನವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು. ಈ ಸಮಸ್ಯೆಯನ್ನು ಮತ್ತಷ್ಟು ವಿಳಂಬ ಮಾಡದೆ ಪರಿಹರಿಸಬೇಕು ಎಂದು ಆಗ್ರಹಿಸಿದರು.

ಬಾಕಿ ವೇತನ ಬಿಡುಗಡೆಗೆ ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ಅತಿಥಿ ಶಿಕ್ಷಕಿಯರು ಹಾಗೂ ಆಯಾಗಳೊಂದಿಗೆ ಶಾಂತಿಯುತ ಧರಣಿ ಸತ್ಯಾಗ್ರಹ ಸೇರಿದಂತೆ ಮುಂದಿನ ಹಂತದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ : ಕಲ್ಯಾಣ ಕರ್ನಾಟಕ | 4,904 ಅಂಗನವಾಡಿ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ: ಅಡುಗೆ ಕೋಣೆ, ಶೌಚಾಲಯ ಮರೀಚಿಕೆ

ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕರಾದ ಪದ್ಮಿನಿ ಎಸ್.ಕೆ., ಪೂಜಾ ಡಿ., ಪೂಜಾ ಎಸ್., ಸಂಗೀತಾ, ಶಿಲ್ಪಾ, ಮೀನಾಕ್ಷಿ ಎಸ್., ಶಶಿಕಲಾ, ರೇಷ್ಮಾ, ಮಂಗಳಾ, ಕೃಷ್ಣವೇಣಿ ಹಾಗೂ ಸುರೇಖಾ ಸೇರಿದಂತೆ ಆಯಾಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...