ಬಸವಕಲ್ಯಾಣ | ಬೌದ್ಧ ವಿಹಾರ, ಅಂಬೇಡ್ಕರ್ ಭವನಕ್ಕೆ 25 ಎಕರೆ ಜಮೀನು ನೀಡಲು ಆಗ್ರಹ

Date:

ಬಸವಕಲ್ಯಾಣ ನಗರದಲ್ಲಿ ಬೌದ್ಧ ವಿಹಾರ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ದಲಿತ ಸಮುದಾಯಕ್ಕೆ 25 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಬೇಕು ಎಂದು ಆಗ್ರಹಿಸಿ ದಲಿತ ಪ್ಯಾಂಥರ್ ಸಂಘಟನೆ ಮನವಿ ಮಾಡಿದೆ.

- Advertisement -

ಈ ಕುರಿತು ಸಂಘಟನೆಯ ಪದಾಧಿಕಾರಿಗಳು ಬುಧವಾರ ತಹಶೀಲ್ದಾರ್‌ ದತ್ತಾತ್ರೆಯ ಗಾದಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ...

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಮತ್ತು ಆದಾದ ಬಳಿಕ ಅದ್ದೂರಿಯಾಗಿ ಹಮ್ಮಿಕೊಳ್ಳುವ 'ಬೀಗರ ಊಟ' (ಬಾಡೂಟ) ಕೇವಲ ಸಂಪ್ರದಾಯವಾಗಿ ಉಳಿಯದೆ,...

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ;...

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ ಪ್ರಕ್ರಿಯೆಯಲ್ಲಿ ಕೇಂದ್ರಕ್ಕಿರುವ ಮೇಲುಗೈ ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುತ್ತಿದೆ ಎಂಬುದು ಸ್ಪಷ್ಟ. ಜಿಎಸ್‌ಟಿ ಜಾರಿಗೆ ಬಂದ ನಂತರ ರಾಜ್ಯಗಳು ತಮ್ಮ...

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ...

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...

ಬಸವಕಲ್ಯಾಣ ತಾಲ್ಲೂಕಿನಲ್ಲಿ ವಿವಿಧ ಸಮುದಾಯಗಳ ಮಹಾಪುರುಷರ ಹೆಸರಿನಲ್ಲಿ ವಿವಿಧ ಉದ್ದೇಶಗಳಿಗೆ ಎಕರೆಗಟ್ಟಲೆ ಸರ್ಕಾರಿ ಜಮೀನು ಮಂಜೂರು ಮಾಡಲಾಗಿದೆ. ಆದರೆ, ದಲಿತ ಸಮುದಾಯವು ಹಲವು ವರ್ಷಗಳಿಂದ ಇಲ್ಲಿ ನೆಲೆಸಿದ್ದು, ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಿಗೆ ಕೊಡುಗೆ ನೀಡುತ್ತಿದ್ದರೂ ಸಭೆ, ಸಾಮಾಜಿಕ, ಶೈಕ್ಷಣಿಕ ಹಾಗೂ ಯುವಜನರ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಲು ಸ್ವಂತ ಸ್ಥಳವಿಲ್ಲ. ಇದುವರೆಗೆ ಸರ್ಕಾರದಿಂದ ದಲಿತ ಸಮುದಾಯಕ್ಕೆ ಯಾವುದೇ ಜಮೀನು ಮಂಜೂರು ಮಾಡಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ತಥಾಗತ ಗೌತಮ ಬುದ್ಧರು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಾರಿದ ಸಮಾನತೆ, ಶಿಕ್ಷಣ, ಸ್ವಾಭಿಮಾನ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಲು ಸುಸಜ್ಜಿತ ಬೌದ್ಧ ವಿಹಾರ ಹಾಗೂ ಅಂಬೇಡ್ಕರ್ ಭವನದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಬಸವಕಲ್ಯಾಣ ನಗರದಲ್ಲಿ 25 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡುವಂತೆ ಸಂಘಟನೆ ಒತ್ತಾಯಿಸಿದೆ.

ಇದನ್ನೂ ಓದಿ : ಬೀದರ್‌ | ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಿಸಿಕೊಳ್ಳಲು ʼಅನ್ನ ಸೇವೆʼ ಮೊಬೈಲ್ ಆ್ಯಪ್

ಈ ಸಂದರ್ಭದಲ್ಲಿ ಕಲಬುರ್ಗಿ ವಿಭಾಗೀಯ ಅಧ್ಯಕ್ಷ ಗೌತಮ್ ಕಾಂಬಳೆ, ಬಸವಕಲ್ಯಾಣ ತಾಲೂಕು ಅಧ್ಯಕ್ಷ ರಾಜು ಸೂರ್ಯವಂಶಿ, ನಗರ ಘಟಕ ಅಧ್ಯಕ್ಷ ಅಮೂಲ ಶಿವಾಜಿ ಶಿಂಧೆ, ಉಪಾಧ್ಯಕ್ಷ ವಿಶಾಲ್ ಗಾಜರೆ, ಪ್ರಧಾನ ಕಾರ್ಯದರ್ಶಿ ಅಶ್ವಿನ ಸೂರ್ಯವಂಶಿ ಸೇರಿದಂತೆ ಸಂಘಟನೆಯ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಿಸಿಕೊಳ್ಳಲು ʼಅನ್ನ ಸೇವೆʼ ಮೊಬೈಲ್ ಆ್ಯಪ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿರುವ...

ಜೈಲಿನಲ್ಲಿರುವ ಪುನೀತ್ ಕೆರೆಹಳ್ಳಿ ವಿರುದ್ಧ ‘ಬಾಡಿ ವಾರೆಂಟ್’ ಜಾರಿ: ಕೋರ್ಟ್ ಈ ಆದೇಶ ನೀಡಿದ್ದೇಕೆ?

ಹಿಂದುತ್ವ ಕೋಮುವಾದಿ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ...