ಬಸವಕಲ್ಯಾಣ | ಕೃಷಿ, ಪರಿಸರ ಸಾಹಿತ್ಯದ ಭಾಗವಾಗಲಿ

Date:

ಪರಿಸರ ಪ್ರಜ್ಞೆ ಇಂದಿನ ಅಗತ್ಯವಾಗಿದ್ದು, ಕೃಷಿ ಮತ್ತು ಪರಿಸರಕ್ಕೆ ಸಂಬಂಧಿಸಿದ ವಿಷಯಗಳು ಸಾಹಿತ್ಯದಲ್ಲಿ ಹೆಚ್ಚು ಪ್ರತಿಫಲಿಸಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ಸಿ.ಬಿ. ಪರತಾಪುರೆ ಹೇಳಿದರು.

- Advertisement -

ಬಸವಕಲ್ಯಾಣ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾನುವಾರ ಬಸವಕಲ್ಯಾಣ ರೀಡರ್ಸ್ ಕ್ಲಬ್ ಉದ್ಘಾಟಿಸಿ ಅವರು ಮಾತನಾಡಿ, “ನಾಶವಾಗುತ್ತಿರುವ ಮಣ್ಣಿನ ಸತ್ವವನ್ನು ಉಳಿಸುವ ಸವಾಲು ಇಂದು ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಹೀಗಾಗಿ ಪರಿಸರ ಅಧ್ಯಯನವು ಓದಿನ ಭಾಗವಾಗಬೇಕು. ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ ಮತ್ತು ಪರಿಸರ ಸೇರಿದಂತೆ ವಿವಿಧ ಕ್ಷೇತ್ರಗಳ ಕೃತಿಗಳನ್ನು ಓದುವುದರಿಂದ ಜ್ಞಾನ ಸಂಪತ್ತು ವೃದ್ಧಿಯಾಗುತ್ತದೆ. ನಿರಂತರ ಅಧ್ಯಯನವು ವ್ಯಕ್ತಿಯ ಬೆಳವಣಿಗೆಗೆ ಪೂರಕವಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಡಾ.ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನದ ಅಧ್ಯಕ್ಷ ಎಸ್.ಜಿ. ಹುಡೇದ ಮಾತನಾಡಿ, “ವಚನ ಸಾಹಿತ್ಯ ಸೇರಿದಂತೆ ಯಾವುದೇ ಪ್ರಕಾರದ ಓದು ವ್ಯಕ್ತಿಯಲ್ಲಿ ವೈಚಾರಿಕ ಚಿಂತನೆಯನ್ನು ಬೆಳೆಸಬೇಕು. ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಓದಿನಿಂದ ವಿಮುಖರಾಗುತ್ತಿರುವುದು ದುರಂತದ ಸಂಗತಿ. ಮೌಲಿಕ ಕೃತಿಗಳ ಅಧ್ಯಯನದಿಂದ ಮಾನವೀಯ ಮೌಲ್ಯಗಳು ಬೆಳೆಯುತ್ತವೆ” ಎಂದರು.

ನಿವೃತ್ತ ಶಿಕ್ಷಕ ಭೀಮಾಶಂಕರ ಮಾಶಾಳಕರ ಮಾತನಾಡಿ, “ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಪುಸ್ತಕಗಳು ತಲೆಮಾರಿನಿಂದ ತಲೆಮಾರಿಗೆ ಜ್ಞಾನವನ್ನು ತಲುಪಿಸಲು ಸಹಕಾರಿಯಾಗಿವೆ. ಮನುಷ್ಯನ ಜೀವನದಲ್ಲಿ ಓದು ಮಹತ್ವದ ಪಾತ್ರ ವಹಿಸುತ್ತದೆ” ಎಂದರು.

WhatsApp Image 2026 10 10 at 7.46.08 PM 14

ಉಪನ್ಯಾಸಕ ಡಾ.ಭೀಮಾಶಂಕರ ಬಿರಾದಾರ ಮಾತನಾಡಿ, “ಗಂಭೀರ ಓದು ವ್ಯಕ್ತಿಯನ್ನು ಹಲವು ನಂಬಿಕೆಗಳು ಮತ್ತು ಆವರಣಗಳಿಂದ ಮುಕ್ತಗೊಳಿಸಿ ಸ್ವತಂತ್ರ ಚಿಂತನೆಗೆ ಪ್ರೇರೇಪಿಸುತ್ತದೆ. ಜಗತ್ತನ್ನು ಗ್ರಹಿಸಲು, ಸ್ವವಿಮರ್ಶೆ ಮಾಡಿಕೊಳ್ಳಲು, ಅನುಭವದ ವ್ಯಾಪ್ತಿಯನ್ನು ವಿಸ್ತರಿಸಲು ಹಾಗೂ ಅರಿವನ್ನು ಹೆಚ್ಚಿಸಿಕೊಳ್ಳಲು ಓದು ಸಹಕಾರಿಯಾಗಿದೆ” ಎಂದು ಹೇಳಿದರು.

“ಓದು ಒಂದು ಅನುಭವದ ಪಯಣ. ಲೇಖಕ ಮತ್ತು ಓದುಗನ ಅನುಭವಗಳು ಭಾವಲೋಕದಲ್ಲಿ ಬೆರೆತು ಸಾಮಾಜಿಕವಾಗಿ ತೆರೆದುಕೊಳ್ಳುತ್ತವೆ. ಪಠ್ಯದ ನಿಕಟ ಓದು ಹೊಸ ತಿಳುವಳಿಕೆ ಮೂಡಿಸುತ್ತದೆ. ವಿವಿಧ ಸಿದ್ಧಾಂತಗಳೊಂದಿಗೆ ಸಂವಾದ ನಡೆಸುವ ಮೂಲಕ ನಮ್ಮ ಆಲೋಚನೆಗಳಿಗೆ ತಾತ್ವಿಕ ಚೌಕಟ್ಟು ರೂಪಿಸಿಕೊಳ್ಳಲು ಓದು ನೆರವಾಗುತ್ತದೆ” ಎಂದು ವಿವರಿಸಿದರು.

WhatsApp Image 2026 10 10 at 6.59.42 PM 8
ಜಾಹೀರಾತು

ಬಸವಕಲ್ಯಾಣ ರೀಡರ್ಸ್ ಕ್ಲಬ್ ಅಧ್ಯಕ್ಷ ಡಾ. ಶ್ರೀಕಾಂತ ಚೌಹಾಣ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಡಾ.ಶಿವಾಜಿ ಮೇತ್ರೆ, ಡಾ.ಪ್ರವೀಣಕುಮಾರ್ ಕಮಠಾಣೆ, ಶರಣು ಗವಳಿ, ಉದ್ಧವರಾವ್ ಉಪಾಸೆ, ಭೀಮಾಶಂಕರ ಪೂಜಾರಿ, ಮಾರುತಿ ಕಾಳೆ, ಭೂಮಿಕಾ, ದತ್ತಾತ್ರೇಯ ಪವಾರ್, ಸಚಿನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಚಂದ್ರಕಾಂತ ಅಕ್ಕಣ್ಣಾ ನಿರೂಪಿಸಿದರು. ಬಸವರಾಜ ಶೇರಿ ಸ್ವಾಗತಿಸಿದರು. ಡಾ.ಚಿತ್ರಶೇಖರ ಚಿರಳ್ಳಿ ವಂದಿಸಿದರು.

ಇದನ್ನೂ ಓದಿ : ಬೀದರ್‌ | ಜಗತ್ತಿನ ಮೊದಲ ಮಹಿಳಾ ತತ್ವಜ್ಞಾನಿ ಮಹಾದೇವಿಯಕ್ಕ: ಸಂತೋಷ ನಾಗರಾಳೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನಕ್ಕಾಗಿ ಸಮತಾ ಸೈನಿಕ ದಳ ಆಗ್ರಹ

ಶಹಾಪುರ ತಾಲೂಕಿನ ವಿವಿಧ ಗ್ರಾಮಗಳ ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನ...

ವಿಜಯಪುರ | 22ನೇ ಶರಣ ತತ್ವ ಕಮ್ಮಟಕ್ಕೆ ಸಚಿವ ಎಂ.ಬಿ ಪಾಟೀಲರಿಗೆ ಆಹ್ವಾನ

ವಿಜಯಪುರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ...

ಬೀಳಗಿ | ಛಾಯಾಗ್ರಾಹಕರಿಗಾಗಿ ಆಕಾಡೆಮಿ ಸ್ಥಾಪಿಸಲು ವಿಠ್ಠಲ ಹಿರೇಮಠ ಆಗ್ರಹ

ಛಾಯಾಗ್ರಾಹಕರ ವೃತ್ತಿ ಭದ್ರತೆ, ಕುಟುಂಬದ ಕಲ್ಯಾಣ ಹಾಗೂ ಸರಕಾರದ ಸೌಲಭ್ಯಗಳನ್ನು ಒದಗಿಸಲು...

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...