ಬಸವಕಲ್ಯಾಣ | ʼSIRʼ ವಿರುದ್ಧ ಪ್ರತಿಭಟನೆ : ಮತದಾರರ ಹಕ್ಕು ರಕ್ಷಣೆಗೆ ಒತ್ತಾಯ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯನ್ನು ವಿರೋಧಿಸಿ ಶನಿವಾರ ಬಸವಕಲ್ಯಾಣದಲ್ಲಿ ವಿವಿಧ ಜನಪರ, ರೈತ, ವಿದ್ಯಾರ್ಥಿ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು.

- Advertisement -

ಜನಪರ ಸಂಘಟನೆಗಳ ಒಕ್ಕೂಟ ಕರ್ನಾಟಕ, ಎದ್ದೇಳು ಕರ್ನಾಟಕ, ಗ್ರಾಮ ಕ್ರಾಂತಿ ಸೇನೆ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ಹೊಸ ರೈತ ಸಂಘಟನೆ, ಭೀಮ್ ಆರ್ಮಿ, ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ), ವಾಯ್ಸ್ ಆಫ್ ಅಂಬೇಡ್ಕರ್, ಜಮಾತ್-ಎ-ಇಸ್ಲಾಮಿ-ಹಿಂದ್ ಬಸವಕಲ್ಯಾಣ, ಜಮಾತ್-ಎ-ಇಸ್ಲಾಮಿ-ಹಿಂದ್ ಹುಮನಾಬಾದ, ತೇಹರಿಕ್ ಟಿಪ್ಪು ಸುಲ್ತಾನ್, ಆದಿ ಜಾಂಬವ, ಎನ್‌ಎಸ್‌ಯುಐ, ಯೂತ್ ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಗರದ ಮಹಾತ್ಮ ಗಾಂಧೀಜಿ ವೃತ್ತದಿಂದ ಅಂಬೇಡ್ಕರ್‌ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಎಸ್‌ಐಆರ್ ವಿರುದ್ಧ ಘೋಷಣೆ ಕೂಗಲಾಯಿತು. ಬಳಿಕ ಮುಖ್ಯಮಂತ್ರಿ ಹಾಗೂ ರಾಜ್ಯ ಚುನಾವಣಾಧಿಕಾರಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಗ್ರೇಡ್-‌2 ತಹಸೀಲ್ದಾರ್‌ ರಮೇಶ ಬಾಬು ಅವರಿಗೆ ಸಲ್ಲಿಸಲಾಯಿತು.

ಎದ್ದೇಳು ಕರ್ನಾಟಕದ ಜಿಲ್ಲಾ ಸಂಯೋಜಕ ಸಂದೀಪ ಮುಕಿಂದೆ ಮಾತನಾಡಿ, “ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿಲ್ಲ. ಯಾವುದೇ ಅರ್ಹ ಮತದಾರನ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಅಥವಾ ಮತದಾರರ ಪಟ್ಟಿಯಿಂದ ಹೊರಗಿಡುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಆಗ್ರಹಿಸಿದರು.

“ಸಂವಿಧಾನವು ನಮಗೆ ನೀಡಿರುವ ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಮಹಿಳೆಯರು, ಕಾರ್ಮಿಕರು, ವಿದ್ಯಾರ್ಥಿಗಳು, ದಲಿತರು, ಅಲ್ಪಸಂಖ್ಯಾತರು ಹಾಗೂ ಸಮಾಜದ ಹಿಂದುಳಿದ ವರ್ಗಗಳ ಮತದಾನದ ಹಕ್ಕುಗಳಿಗೆ ಧಕ್ಕೆಯಾಗದಂತೆ ಚುನಾವಣಾ ಆಯೋಗ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಈ ಪ್ರತಿಭಟನೆ ಕೇವಲ ಒಂದು ಕಾರ್ಯಕ್ರಮವಲ್ಲ, ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ನಡೆಸುತ್ತಿರುವ ಜನಾಂದೋಲನದ ಭಾಗವಾಗಿದೆ” ಎಂದರು.

ಮುಖಂಡ ಸುರೇಶ ಮೋರೆ ಮಾತನಾಡಿ, “ಚುನಾವಣಾ ಆಯೋಗವು ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ, ಸಾರ್ವಜನಿಕರ ಪಾಲ್ಗೊಳ್ಳುವಿಕೆಯಿಂದ ಹಾಗೂ ಯಾವುದೇ ಅರ್ಹ ಮತದಾರನಿಗೆ ಅನ್ಯಾಯವಾಗದ ರೀತಿಯಲ್ಲಿ ನಡೆಸಬೇಕು” ಎಂದು ಒತ್ತಾಯಿಸಿದರು.

ಇದನ್ನೂಓದಿ : ಬೀದರ್ | ಎಸ್ಐಆರ್ ವಿರೋಧಿಸಿ ಬೃಹತ್ ಪ್ರತಿಭಟನೆ

ಪ್ರತಿಭಟನೆಯಲ್ಲಿ ಪ್ರಮುಖರಾದ ಇಕ್ರಾಮೋದ್ದಿನ್‌ ಖಾದಿವಾಲೆ, ಚೇತನ್‌ ಕಾಡೆ, ಎಂ.ಡಿ.ಜಾಬೇರ್, ರಿಯಾಜ್‌ ಪಟೇಲ್‌, ಅಸ್ಲಾಮ್‌ ಜನಾಬ್‌, ನಾಗೇಶ ಮೇತ್ರೆ, ಯುವರಾಜ ಭೆಂಡೆ, ನಿತ್ಯಾನಂದ ಮಂಠಾಳಕರ್‌, ಶಹೀದ್‌ ಪಾಶಾ, ಮಿರ್ಜಾ ಖಾಸೀಂ ಬೇಗ್‌ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

20 ತಿಂಗಳಲ್ಲಿ 20 ಮುಖ್ಯ ಚುನಾವಣಾಧಿಕಾರಿಗಳ ವರ್ಗಾವಣೆ: ಗ್ಯಾನೇಶ್ ಕುಮಾರ್ ದಾಖಲೆ!

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಆಡಳಿತದಲ್ಲಿ‌ ಚುನಾವಣಾ ಆಯೋಗವು ಭಾರೀ...

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...

ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ...

ಕಲಬುರಗಿ | ಸಿಇಸಿ ಜ್ಞಾನೇಶಕುಮಾರ ವಜಾಗೆ ಆಗ್ರಹಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ...