ಬಸವಕಲ್ಯಾಣ | ಶಿಕ್ಷಕರು ಸಮಾಜದ ಅಭಿವೃದ್ಧಿಗೆ ಮೂಲಸ್ತಂಭ: ರವೀಂದ್ರ ಗಾಯಕವಾಡ

Date:

ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಜ್ಞಾನದ ಬೆಳಕು ಚೆಲ್ಲಿ, ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಶಿಕ್ಷಕರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಗೌರವಿಸುವ ಶಿಕ್ಷಕರ ದಿನಾಚರಣೆ ಅತ್ಯಂತ ಮಹತ್ವಪೂರ್ಣವಾಗಿದೆ ಎಂದು ಬಸವ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರವೀಂದ್ರ ಬಿ.ಗಾಯಕವಾಡ ಹೇಳಿದರು.

- Advertisement -

ಬಸವಕಲ್ಯಾಣದ ಬಸವ ಶಿಕ್ಷಣ ಸಂಸ್ಥೆಯ ಡಾ. ಅಂಬೇಡ್ಕರ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 65ನೇ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

“ಶಿಕ್ಷಕರು ಸಮಾಜದ ಅಭಿವೃದ್ಧಿಯ ಮೂಲಸ್ತಂಭವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಕರು ಮಾಡುತ್ತಿರುವ ಅಪ್ರತಿಮ ಶ್ರಮವನ್ನು ಗುರುತಿಸಿ, ಅವರನ್ನು ಪ್ರೋತ್ಸಾಹಿಸುವುದು ಸಮಾಜದ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ” ಎಂದು ಹೇಳಿದರು.

ಸಮಾರಂಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಹಾಗೂ ಡಾ. ಎಸ್.ರಾಧಾಕೃಷ್ಣನ್, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ವಿಶ್ವದ ಪ್ರಪ್ರಥಮ ಶಿಕ್ಷಕಿ ಮಹಾಮಾತೆ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಜೈಶೇನಪ್ರಸಾದ ಮಾತನಾಡಿದರು. ವಿದ್ಯಾರ್ಥಿನಿಯರಾದ ವಿದ್ಯಾ, ವಿಜಯಲಕ್ಷ್ಮೀ, ಗಾಯತ್ರಿ ಹಾಗೂ ಸಮೀಕ್ಷಾ ಅವರು ಶಿಕ್ಷಕರ ದಿನಾಚರಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಇದನ್ನೂ ಓದಿ : ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಅಮಾನತು

ವಿದ್ಯಾರ್ಥಿನಿಯರಾದ ಚಾಂದನಿ, ಸಮೀಕ್ಷಾ ಹಾಗೂ ಸಖುಬಾಯಿ ಸ್ವಾಗತ ಗೀತೆ ಹಾಡಿದರು. ಲಕ್ಷ್ಮೀ ಮತ್ತು ವರ್ಷಾ ಸ್ವಾಗತ ಭಾಷಣ ಮಾಡಿದರು. ಭಾಗ್ಯಶ್ರೀ ಹಾಗೂ ರಾಣಿ ನಿರೂಪಿಸಿದರು. ಸುದರ್ಶನ ವಂದನಾರ್ಪಣೆ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಹೊಂಡದಲ್ಲಿ ಮುಳುಗಿ ತಂದೆ, ಮಗ ಸಾವು

ಬಳ್ಳಾರಿ ನಗರದ ಕೋಟೆಯಲ್ಲಿರುವ ಹೊಂಡದಲ್ಲಿ ಮುಳುಗಿ ತಂದೆ ಮತ್ತು ಮಗ ಮಂಗಳವಾರ...

ಮೂರು ಮೈತೇಯಿ ಯುವಕರ ಹತ್ಯೆ ಖಂಡಿಸಿ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಐದು ಜಿಲ್ಲೆಗಳಲ್ಲಿ ಜನಜೀವನ ಸ್ತಬ್ಧ

ಕಾಂಗ್‌ಪೋಕ್ಪಿ ಜಿಲ್ಲೆಯ ಸುನುರೋಕ್ ಬೆಟ್ಟದ ಪ್ರದೇಶದಲ್ಲಿ ಅಕ್ಟೋಬರ್ 19 ರಂದು ಸೌದೆ...

SIR ವಿರುದ್ಧ ಜನತೆ| ಅ.23ರಂದು ಬೀದರ್‌ನಲ್ಲಿ ಪ್ರತಿಭಟನೆ, ತಿರಂಗಾ ಮೆರವಣಿಗೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ವಿರೋಧಿಸಿ, ಪ್ರಜಾಪ್ರಭುತ್ವದ ಮರುಸ್ಥಾಪನೆ...

ಏಷ್ಯನ್ ಪ್ಯಾರಾ ಗೇಮ್ಸ್: 5ನೇ ಸ್ಥಾನಕ್ಕೇರಿದ ಭಾರತ, 62 ಪದಕಗಳ ಸಾಧನೆಯೊಂದಿಗೆ ಅಥ್ಲೆಟಿಕ್ಸ್ ಕ್ರೀಡಾಪಟುಗಳ ಪರಾಕ್ರಮ

ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ 2026 ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು...