ಬಸವಕಲ್ಯಾಣ | ಡಿಸೆಂಬರ್ 13ರಿಂದ ಮೂರು ಕುರ್‌ಆನ್ ಪ್ರವಚನ

Date:

ಬಸವಕಲ್ಯಾಣ ನಗರದಲ್ಲಿ ಡಿಸೆಂಬರ್ 13, 14 ಮತ್ತು 15ರಂದು ನಡೆಯಲಿರುವ 11ನೇ ವಾರ್ಷಿಕ ಸಾರ್ವಜನಿಕ ಕುರ್‌ಆನ್ ಪ್ರವಚನ ಕಾರ್ಯಕ್ರಮದ ಸಿದ್ಧತೆಗಳು ಆರಂಭಗೊಂಡಿದ್ದು, ಈ ಕುರಿತು ಇಲ್ಲಿನ ಬಿಕೆಡಿಬಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

- Advertisement -

ಸಭೆಯಲ್ಲಿ ಕಾರ್ಯಕ್ರಮದ ಯಶಸ್ವಿ ಆಯೋಜನೆ, ಸ್ವಾಗತ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಜವಾಬ್ದಾರಿಗಳ ಕುರಿತು ಚರ್ಚಿಸಲಾಯಿತು. ನಗರದ ಪ್ರಮುಖರ ಸಮ್ಮುಖದಲ್ಲಿ ಸರ್ವಾನುಮತದಿಂದ ಸ್ವಾಗತ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಡಾ. ಜಿ.ಎಸ್.ಭುರಾಳೆ ಅವರನ್ನು ಗೌರವಾಧ್ಯಕ್ಷರಾಗಿ, ಕೇಶಪ್ಪ ಬಿರಾದಾರ ಅವರನ್ನು ಅಧ್ಯಕ್ಷರಾಗಿ, ಮುಜಾಹಿದ್ ಪಾಷಾ ಖುರೇಶಿ ಅವರನ್ನು ಕಾರ್ಯಾಧ್ಯಕ್ಷರಾಗಿ, ಶಾಂತಲಿಂಗ ಮಠಪತಿ ಅವರನ್ನು ಕಾರ್ಯದರ್ಶಿಯಾಗಿ, ಸಂದೀಪ್ ಬೂಯೆ ಅವರನ್ನು ಜಂಟಿ ಕಾರ್ಯದರ್ಶಿಯಾಗಿ ಹಾಗೂ ರೇಖಾ ಹೋಸಮಣಿ ಅವರನ್ನು ಮಹಿಳಾ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ 11ನೇ ವಾರ್ಷಿಕ ಸಾರ್ವಜನಿಕ ಕುರ್‌ಆನ್ ಪ್ರವಚನ ಕಾರ್ಯಕ್ರಮದ ಪೋಸ್ಟರ್ ಅನಾವರಣಗೊಳಿಸಲಾಯಿತು.

ಸಭೆಯಲ್ಲಿ ಜಮಾತ್-ಎ-ಇಸ್ಲಾಮಿ ಹಿಂದ್ ಬಸವಕಲ್ಯಾಣ ಅಧ್ಯಕ್ಷ ಅಸ್ಲಂ ಜನಾಬ್, ಸದ್ಭಾವನಾ ಮಂಚ್ ಜಿಲ್ಲಾ ಅಧ್ಯಕ್ಷ ಗುರುನಾಥ್ ಗಡ್ಡೆ, ಬಿಡಿಪಿಸಿ ಮಾಜಿ ಅಧ್ಯಕ್ಷ ವೀರಣ್ಣ ಹಲಶೆಟ್ಟಿ, ಬಿಡಿಎ ಮಾಜಿ ಅಧ್ಯಕ್ಷ ಮೀರ್ ವಾರಿಸ್ ಅಲಿ, ಸಂದೀಪ್ ಬೂಯೆ ಮುಕಂದೆ, ಘೌಸ್ ಅಲಂಕಾರ್, ಅರ್ಷದ್ ಮಹಾಗಾವಿ, ವಕೀಲ ಸುಶೀಲ್ ಅವಸ್ತಿ, ಹುಜೂರ್ ಪಾಷಾ, ಅರ್ಫತ್ ಅಹ್ಮದ್, ಮೊಹಮ್ಮದ್ ಕುತುಬುದ್ದೀನ್, ಓಂ ಪಾಟೀಲ್, ಶಾಹಿದಾ ಬಾನು, ಖುರೇಶಿ, ಫರ್ಜಾನಾ ನಜ್ಮಿ ಭೋಸ್ಗೆ ಸೇರಿದಂತೆ ನಗರದ ಹಲವು ಗಣ್ಯರು ಉಪಸ್ಥಿತರಿದ್ದರು.

ನಗರದ ಸಭಾಭವನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಪ್ರವಚನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬೀದರ್‌ | ಶಾಹೀನ್ ಸಮೂಹದಿಂದ ₹22.42 ಕೋಟಿ ವಿದ್ಯಾರ್ಥಿವೇತನ ವಿತರಣೆ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಜೊತೆಗೆ ಪಾಲಕರು ಮತ್ತು ಶಿಕ್ಷಕರ ಪಾತ್ರವೂ...

ಬೀದರ್‌ | ಪರಿಸರ ಮಾಲಿನ್ಯದಿಂದ ಸಂತಾನೋತ್ಪತ್ತಿ ಸಾಮರ್ಥ್ಯಕ್ಕೆ ಅಪಾಯ: ಶಿವಗಂಗಾ ರುಮ್ಮಾ

ಪರಿಸರ ಮಾಲಿನ್ಯ, ರಾಸಾಯನಿಕಗಳ ಅತಿಯಾದ ಬಳಕೆ ಹಾಗೂ ಆಹಾರ ಪದ್ಧತಿಯಲ್ಲಿನ ಬದಲಾವಣೆಗಳು...

ಬೀದರ್‌ | ಸಾಹಿತಿಗಳು ಜನಜಾಗೃತಿಯ ಕುಲುಮೆ ಆರದಂತೆ ನೋಡಿಕೊಳ್ಳಲಿ: ಅಮೀನ್‌ ಮಟ್ಟು

‌ಬೀದರ್ (ಡಾ.ಭೀಮಣ್ಣ ಖಂಡ್ರೆ ವೇದಿಕೆ) : ಜನಜಾಗೃತಿಯ ಕುಲುಮೆ ಸದಾ ಉರಿಯುತ್ತಿರಬೇಕು....

ಯುಪಿ ಚುನಾವಣೆ 2027: ಸಣ್ಣ ಪಕ್ಷಗಳೊಂದಿಗೆ ಮೈತ್ರಿಗೆ ಅಖಿಲೇಶ್ ಚಿಂತನೆ; ಒಬಿಸಿ ಮತಗಳ ಕ್ರೋಢೀಕರಣಕ್ಕೆ ತಂತ್ರ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಭರ್ಜರಿ ಸಿದ್ಧತೆ...