ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ

Date:

ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದ ಅನುಭವ ಮಂಟಪದ ಆವರಣದಲ್ಲಿ ನವೆಂಬರ್ 28 ಮತ್ತು 29ರಂದು 47ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾಡೋಜ ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ನಡೆಯುವ ಉತ್ಸವವನ್ನು ನವೆಂಬರ್ 28ರಂದು ಬೆಳಿಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಉದ್ಘಾಟಿಸಲಿದ್ದಾರೆ. ತಾವು ಅಧ್ಯಕ್ಷತೆ ವಹಿಸಲಿದ್ದು, ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಮಹಾಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು, ಸಾಹಿತಿಗಳು ಹಾಗೂ ಚಿಂತಕರು ಭಾಗವಹಿಸಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಉತ್ಸವದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ತಾವು, ಕಾರ್ಯಾಧ್ಯಕ್ಷರಾಗಿ ಬಸವಕಲ್ಯಾಣ ಶಾಸಕ ಶರಣು ಸಲಗರ ಕಾರ್ಯನಿರ್ವಹಿಸುತ್ತಿದ್ದಾರೆ. ಉತ್ಸವಕ್ಕಾಗಿ ಶಿವಯೋಗಿ ಸಿದ್ಧರಾಮೇಶ್ವರರ ಹೆಸರಿನಲ್ಲಿ ವೇದಿಕೆ, ಮಹಾದಾಸೋಹಿ ಶರಣರ ಸ್ಮರಣಾರ್ಥ ಪ್ರಸಾದ ಮಂಟಪ ಹಾಗೂ ಸಿದ್ಧಗಂಗೆಯ ಶಿವಕುಮಾರ ಮಹಾಸ್ವಾಮಿಗಳ ಹೆಸರಿನಲ್ಲಿ ಮಹಾದ್ವಾರ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಕಳೆದ 47 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಶರಣ ಕಮ್ಮಟವು ಬಸವಣ್ಣನವರ ತತ್ವಾದರ್ಶಗಳನ್ನು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ವಚನ ಸಾಹಿತ್ಯವನ್ನು ಜನಮಾನಸಕ್ಕೆ ತಲುಪಿಸುವುದರ ಜತೆಗೆ ಶರಣರ ಸಮಾನತೆ, ಕಾಯಕ, ದಾಸೋಹ, ಸಾಮಾಜಿಕ ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು ಜನಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರಣೆ ನೀಡುತ್ತಿದೆ ಎಂದರು.

ಇಂದಿನ ಸಂಸತ್ತು ನವದೆಹಲಿಯಲ್ಲಿದ್ದರೆ, 12ನೇ ಶತಮಾನದಲ್ಲಿ ಶರಣರ ಅನುಭವ ಮಂಟಪ ಬಸವಕಲ್ಯಾಣದಲ್ಲಿತ್ತು. 770 ಅಮರಗಣಂಗಳ ಮೂಲಕ ಸಾಮಾಜಿಕ, ಧಾರ್ಮಿಕ ಹಾಗೂ ವೈಚಾರಿಕ ಚಿಂತನೆಗಳು ನಡೆಯುತ್ತಿದ್ದವು. ಬಸವಣ್ಣನವರು ಅನುಭವ ಮಂಟಪದ ಮೂಲಕ ಮಹತ್ವದ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ್ದರು ಎಂದು ಸ್ಮರಿಸಿದರು.

ಹಂಸಲೇಖ ಸೇರಿ ನಾಲ್ವರಿಗೆ ರಾಷ್ಟ್ರೀಯ ಪ್ರಶಸ್ತಿ

ಉತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ನಾಲ್ವರು ಸಾಧಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ʼಡಾ.ಚನ್ನಬಸವ ಪಟ್ಟದ್ದೇವರು ಅನುಭವ ಮಂಟಪ ಪ್ರಶಸ್ತಿʼ, ನವಲಿಂಗ ಶರಣರಿಗೆ ʼಬಸವ ಭಾಸ್ಕರʼ ರಾಷ್ಟ್ರೀಯ ಪ್ರಶಸ್ತಿ, ಮನೋವೈದ್ಯ ಡಾ. ಸಿ.ಆರ್.ಚಂದ್ರಶೇಖರ ಅವರಿಗೆ ʼಅನುಭವ ಮಂಟಪ ರಾಷ್ಟ್ರೀಯ ಪ್ರಶಸ್ತಿʼ ಹಾಗೂ ಡಾ.ಸಂತೋಷ ಹಾನಗಲ್ಲ ಅವರಿಗೆ ʼಡಾ.ಎಂ.ಎಂ.ಕಲಬುರಗಿ ಸಾಹಿತ್ಯ ಸಂಶೋಧನಾ ರಾಷ್ಟ್ರೀಯ ಪ್ರಶಸ್ತಿʼ ನೀಡಲಾಗುವುದು. ಮೊದಲ ಮೂರು ಪ್ರಶಸ್ತಿಗಳು ತಲಾ ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದ್ದು, ಸಾಹಿತ್ಯ ಸಂಶೋಧನಾ ಪ್ರಶಸ್ತಿಯು 50 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ವಿವರಿಸಿದರು.

ಅನುಭವ ಮಂಟಪ ಉತ್ಸವ ಯಾವುದೇ ವ್ಯಕ್ತಿ, ಜಾತಿ, ಧರ್ಮ ಅಥವಾ ಪಕ್ಷಕ್ಕೆ ಸೀಮಿತವಾದ ಉತ್ಸವವಲ್ಲ. ಇದು ಕನ್ನಡ ನಾಡಿನ ಹೆಮ್ಮೆಯ ಉತ್ಸವವಾಗಿದೆ. ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳು, ಮಠಾಧೀಶರು, ಸಮಾಜದ ಮುಖಂಡರು, ಚಿಂತಕರು ಹಾಗೂ ಭಕ್ತರು ಭಾಗವಹಿಸಿ ಉತ್ಸವ ಯಶಸ್ವಿಗೊಳಿಸಬೇಕು. ಉತ್ಸವಕ್ಕೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸ್ವರೂಪ ನೀಡಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಅನುಭವ ಮಂಟಪದ ಅಧ್ಯಕ್ಷ ನಾಡೋಜ ಬಸವಲಿಂಗ ಪಟ್ಟದ್ದೇವರು ಮಾತನಾಡಿ, “ಅನುಭವ ಮಂಟಪ ಉತ್ಸವ ಕೇವಲ ರಾಜ್ಯ ಮಟ್ಟಕ್ಕೆ ಸೀಮಿತವಾಗಬಾರದು. ರಾಷ್ಟ್ರಪತಿ, ಪ್ರಧಾನಮಂತ್ರಿ ಸೇರಿದಂತೆ ವಿಶ್ವದ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸುವಂತಹ ರಾಷ್ಟ್ರೀಯ ಉತ್ಸವವಾಗಿ ರೂಪುಗೊಳ್ಳಬೇಕು. ಆ ಮೂಲಕ ಬಸವಾದಿ ಶರಣರ ಋಣ ತೀರಿಸುವ ಕಾರ್ಯವಾಗಬೇಕು ಎಂಬುದು ನಮ್ಮ ಆಶಯವಾಗಿದೆ” ಎಂದರು.

ಪ್ರಜಾಪ್ರಭುತ್ವದ ಬೇರುಗಳನ್ನು ಅನುಭವ ಮಂಟಪದಲ್ಲಿ ಕಾಣಬಹುದು. ಮಹಿಳೆಯರಿಗೆ ಸಮಾನತೆ ಕಲ್ಪಿಸುವುದು, ಅಸ್ಪೃಶ್ಯತೆ, ಜಾತೀಯತೆ, ವರ್ಣಭೇದ ಹಾಗೂ ಸಾಮಾಜಿಕ ಅನಿಷ್ಟಗಳ ನಿವಾರಣೆಗೆ ಶರಣರು ಶ್ರಮಿಸಿದ್ದರು. ಸಮಸ್ತ ಮಾನವ ಕುಲ ಒಂದೇ ಎಂಬ ಸಂದೇಶವನ್ನು ಜಗತ್ತಿಗೆ ಸಾರಿದ್ದರು. ರೈತ, ದಲಿತ, ಬಂಡಾಯ ಹಾಗೂ ಮಹಿಳಾ ಚಳವಳಿಗಳಿಗೆ ಬಸವಣ್ಣನವರ ವಿಚಾರಧಾರೆ ಮೂಲ ಪ್ರೇರಣೆಯಾಗಿದೆ. ನೂತನ ಅನುಭವ ಮಂಟಪ ಲೋಕಾರ್ಪಣೆಗೊಂಡ ಬಳಿಕ ಸಚಿವ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಮಟ್ಟದ ಉತ್ಸವ ಆಯೋಜನೆಯಾಗುವ ವಿಶ್ವಾಸವಿದೆ. ಅಮೆರಿಕ, ಜರ್ಮನಿ, ಜಪಾನ್ ಸೇರಿದಂತೆ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಉತ್ಸವದ ಅಂಗವಾಗಿ ಮಹಾರಾಷ್ಟ್ರದ ದೇಗಲೂರಿನಿಂದ ಆರಂಭಗೊಂಡಿರುವ ಪಾದಯಾತ್ರೆಯಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ಕರ್ನಾಟಕದ ಭಕ್ತರು ಭಾಗವಹಿಸಿದ್ದಾರೆ. ಸುಮಾರು ಎರಡು ಸಾವಿರ ಪಾದಯಾತ್ರಿಗಳು ಶುಕ್ರವಾರ (ನ.27) ಸಂಜೆ ಬಸವಕಲ್ಯಾಣಕ್ಕೆ ಆಗಮಿಸಲಿದ್ದಾರೆ ಎಂದು ಡಾ. ಬಸವಲಿಂಗ ಪಟ್ಟದ್ದೇವರು ತಿಳಿಸಿದರು.

WhatsApp Image 2026 11 23 at 7.41.16 PM 3
ಜಾಹೀರಾತು

ಉತ್ಸವದ ಪೂರ್ವಭಾವಿಯಾಗಿ ನವೆಂಬರ್ 16ರಿಂದ ಬಸವಕಲ್ಯಾಣದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ‘ಜನಪದದಲ್ಲಿ ಬಸವ ದರ್ಶನ’ ಪ್ರವಚನ ಕಾರ್ಯಕ್ರಮ ಗುರುವಾರ ಮುಕ್ತಾಯಗೊಳ್ಳಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದಲೂ ಶರಣರು ಪಾದಯಾತ್ರೆ ಮೂಲಕ ಬಸವಕಲ್ಯಾಣಕ್ಕೆ ಆಗಮಿಸುವ ವಾತಾವರಣ ನಿರ್ಮಾಣವಾಗಬೇಕು ಎಂದು ಕರೆ ನೀಡಿದರು.

ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, “ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧಿಕಾರಾವಧಿಯಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಚಾಲನೆ ನೀಡಿ ಅನುದಾನ ಒದಗಿಸಲಾಗಿತ್ತು. ನಂತರದ ಸರ್ಕಾರಗಳ ಸಹಕಾರದಿಂದ ಕಾಮಗಾರಿ ಮುಂದುವರಿದಿದ್ದು, ಇದೀಗ ಪೂರ್ಣಗೊಳ್ಳುವ ಹಂತ ತಲುಪಿದೆ. ಆಕರ್ಷಕವಾಗಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪಕ್ಕೆ ಜನರು ಭೇಟಿ ನೀಡಿ ವೀಕ್ಷಿಸಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ : ಬೀದರ್ | ವಿಶ್ವದ ಶ್ರೇಷ್ಠ ಸಂವಿಧಾನ ನಮ್ಮ ದೇಶಕ್ಕೆ ಭದ್ರ ಬುನಾದಿ: ಈಶ್ವರ ಖಂಡ್ರೆ

ಪತ್ರಿಕಾಗೋಷ್ಠಿಯಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಭಾರತೀಯ ಬಸವ ಬಳಗದ ರಾಜ್ಯಾಧ್ಯಕ್ಷ ಬಾಬುವಾಲಿ, ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಬಸವರಾಜ ಧನ್ನೂರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಸುರೇಶ ಚನ್ನಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಸೇರಿದಂತೆ ಜೈರಾಜ ಖಂಡ್ರೆ, ಚಂದ್ರಶೇಖರ ಹೆಬ್ಬಾಳೆ, ಶಶಿಧರ ಕೋಸಂಬೆ ಇತರರು ಉಪಸ್ಥಿತರಿದ್ದರು.

WhatsApp Image 2026 11 13 at 8.18.17 PM 16
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಸಂವಿಧಾನವು ಪ್ರತಿಯೊಬ್ಬರ ಸಾಮಾಜಿಕ ಸಮಾನತೆಯ ದಾರಿದೀಪ : ಜಿಲ್ಲಾಧಿಕಾರಿ

ಸಮಾನತೆ, ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಪ್ರತಿಪಾದಿಸುವ...

ಶಿಕ್ಷಕರ ನೇಮಕಾತಿ ನಿಗದಿತ ವೇಳೆಗೆ ಪೂರ್ಣಗೊಳಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಜನವರಿಯೊಳಗೆ ಪರೀಕ್ಷಾ ಪ್ರಕ್ರಿಯೆ...

ವಿಜಯಪುರ |ಸಂವಿಧಾನ ಎಲ್ಲ ಭಾರತೀಯರ ಆಸ್ತಿ ;ಪ್ರೊ ಬಿ ಎಲ್ ಲಕ್ಕಣ್ಣನವರ

ಸಂವಿಧಾನ ಯಾವುದೇ ಧರ್ಮ ಅಥವಾ ಜನಾಂಗಕ್ಕೆ ಸೀಮಿತವಾದುದಲ್ಲ. ಅದು ಇಡೀ ಭಾರತೀಯರ...

ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ: ಸಿಎಂ ಡಿ ಕೆ ಶಿವಕುಮಾರ್

ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ ಹಕ್ಕು, ಗೌರವ,...