ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವಮಂಟಪ ಉತ್ಸವ

Date:

ವಿಶ್ವಬಸವಧರ್ಮ ಅನುಭವಮಂಟಪ, ಬಸವಕಲ್ಯಾಣ ವತಿಯಿಂದ ನವೆಂಬರ್ 28 ಮತ್ತು 29ರಂದು 47ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ನಡೆಯಲಿದ್ದು, ಉತ್ಸವದ ಪೂರ್ವಭಾವಿ ಸಭೆ ಪೂಜ್ಯ ನಾಡೋಜ ಬಸವಲಿಂಗ ಪಟ್ಟದ್ದೇವರು ಹಾಗೂ ಪೂಜ್ಯ ಗುರುಬಸವ ಪಟ್ಟದ್ದೇವರ ದಿವ್ಯ ಸಾನ್ನಿಧ್ಯದಲ್ಲಿ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಜರುಗಿತು.

- Advertisement -

ಪೂಜ್ಯ ಬಸವಲಿಂಗ ಪಟ್ಟದ್ದೇವರು ಮಾತನಾಡಿ, “ಅನುಭವ ಮಂಟಪ ಉತ್ಸವ ರಾಷ್ಟ್ರೀಯ ಉತ್ಸವವಾಗಿ ಬೆಳೆಯಬೇಕು. ವಚನ ಸಾಹಿತ್ಯದ ರಕ್ಷಣೆಗಾಗಿ ಶರಣರು ಅಪಾರ ತ್ಯಾಗ ಮತ್ತು ಬಲಿದಾನ ಮಾಡಿದ್ದಾರೆ. ಅವರ ತ್ಯಾಗ, ಬಲಿದಾನವನ್ನು ಸ್ಮರಿಸುವುದರ ಜೊತೆಗೆ ಬಸವಕಲ್ಯಾಣವನ್ನು ಜಗತ್ತಿನ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕೇಂದ್ರವನ್ನಾಗಿ ಬೆಳೆಸಬೇಕಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಬಸವಾದಿ ಶರಣರ ಮೌಲ್ಯಗಳು ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿಯಾಗಿವೆ. ಶರಣರ ತತ್ವಾದರ್ಶಗಳ ಕುರಿತು ಚಿಂತನೆ, ಚರ್ಚೆ ಮತ್ತು ಸಂವಾದ ನಡೆಸುವ ವೇದಿಕೆಯಾಗಿ ಅನುಭವಮಂಟಪ ಉತ್ಸವ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.

ಉತ್ಸವದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಜಿಲ್ಲಾ ಉಸ್ತುವಾರಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಹಾಗೂ ಕಾರ್ಯಾಧ್ಯಕ್ಷರಾಗಿ ಬಸವಕಲ್ಯಾಣ ಶಾಸಕ ಶರಣು ಸಲಗರ ಅವರನ್ನು ನೇಮಕ ಮಾಡಲಾಯಿತು.

WhatsApp Image 2026 10 10 at 7.46.08 PM 8
ಜಾಹೀರಾತು

ಸ್ವಾಗತ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ಸಚಿವ ಈಶ್ವರ ಖಂಡ್ರೆ ಮಾತನಾಡಿ, “ಶರಣಕಮ್ಮಟ, ಅನುಭವಮಂಟಪ ಉತ್ಸವಕ್ಕೆ ಬಹುದೊಡ್ಡ ಇತಿಹಾಸವಿದೆ. ಬಸವಕಲ್ಯಾಣದ ಅಭಿವೃದ್ಧಿಗೆ ಶರಣಕಮ್ಮಟ ತಾಯಿಬೇರಿನಂತಿದ್ದು, ಪ್ರತಿವರ್ಷ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅನುಭವಮಂಟಪ ಉತ್ಸವದಲ್ಲಿ ಅರ್ಥಪೂರ್ಣ ಚರ್ಚೆ ಹಾಗೂ ಸಂವಾದಗಳು ನಡೆಯಬೇಕು” ಎಂದು ಆಶಿಸಿದರು.

ಚನ್ನಬಸವ ಪಟ್ಟದ್ದೇವರು ಶರಣಕ ಮ್ಮಟವನ್ನು ಆರಂಭಿಸಿದ್ದು, ಅವರಿಗೆ ಭೀಮಣ್ಣ ಖಂಡ್ರೆ ಅವರು ಸಹಕಾರ ನೀಡಿದ್ದರು. ಪೂಜ್ಯರ ಸಂಕಲ್ಪದಂತೆ ಶರಣ ಕಮ್ಮಟದ ಮೂಲಕ ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ರಚನೆ, ನೂತನ ಅನುಭವಮಂಟಪ ನಿರ್ಮಾಣ, ಶರಣರ ಸ್ಮಾರಕಗಳ ರಕ್ಷಣೆ ಹಾಗೂ ಪರುಷ ಕಟ್ಟೆಯ ಅಭಿವೃದ್ಧಿ ಸೇರಿದಂತೆ ಹಲವು ಕಾರ್ಯಗಳು ನಡೆಯುತ್ತಿವೆ ಎಂದರು.

“ಬಸವಲಿಂಗ ಪಟ್ಟದ್ದೇವರ ಅವಿರತ ಪ್ರಯತ್ನದಿಂದ ನೂತನ ಅನುಭವ ಮಂಟಪ ಸಾಕಾರಗೊಳ್ಳುತ್ತಿರುವುದು ಸಂತೋಷದ ಸಂಗತಿಯಾಗಿದೆ. ಬಸವಕಲ್ಯಾಣದ ಸಮಗ್ರ ಅಭಿವೃದ್ಧಿಗಾಗಿ ಯೋಜನೆ ರೂಪಿಸಲಾಗುತ್ತಿದೆ. ಅನುಭವಮಂಟಪದ ಕಟ್ಟಡ ಕಾಮಗಾರಿಗೆ ಹಣದ ಕೊರತೆ ಇಲ್ಲ. 2027ರ ಬಸವಜಯಂತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ, ನೂತನ ಅನುಭವಮಂಟಪವನ್ನು ಲೋಕಾರ್ಪಣೆಗೊಳಿಸುವ ಉದ್ದೇಶವಿದೆ” ಎಂದು ತಿಳಿಸಿದರು.

ಉತ್ಸವದ ಯಶಸ್ಸಿಗಾಗಿ ಬಸವರಾಜ ಧನ್ನೂರ, ನಿರ್ಮಲಾ ಶಿವಣಕರ, ಕುಪೇಂದ್ರ ಪಾಟೀಲ, ಡಾ. ಸಂಗೀತಾ ಮಂಠಾಳೆ, ಸಿದ್ಧಯ್ಯ ಕಾವಡಿಮಠ, ವಿಶ್ವನಾಥಪ್ಪ ಬಿರಾದಾರ, ರವೀಂದ್ರ ಕೊಳಕೂರು, ಸುಭಾಷ ನಾಗರಾಳೆ ಸೇರಿದಂತೆ ಹಲವರು ಸಲಹೆ-ಸೂಚನೆಗಳನ್ನು ನೀಡಿದರು.

WhatsApp Image 2026 10 10 at 6.59.42 PM 4
ಜಾಹೀರಾತು

ಸಭೆಯಲ್ಲಿ ಪೂಜ್ಯ ಶಿವಾನಂದ ಸ್ವಾಮಿಗಳು, ಮಹಾಲಿಂಗ ಸ್ವಾಮಿಗಳು, ಸಿದ್ಧಬಸವ ಸ್ವಾಮಿಗಳು, ಪ್ರಭುಲಿಂಗ ಸ್ವಾಮಿಗಳು, ಬಸವದೇವರು, ಸುಗುಣಾತಾಯಿ, ಹಾಲಮ್ಮತಾಯಿ ಹಾಗೂ ಶ್ರೀಶೈಲ ದೇವರು ಉಪಸ್ಥಿತರಿದ್ದರು. ಬಾಬು ವಾಲಿ ಸ್ವಾಗತಿಸಿದರು. ರಾಜು ಜುಬರೆ ನಿರೂಪಿಸಿದರು. ದೀಪಕ ಠಮಕೆ ವಂದಿಸಿದರು.

ಇದನ್ನೂ ಓದಿ : ಔರಾದ್‌ | ನೀರು, ಆರೋಗ್ಯ ಸೇವೆ ಪರಿಶೀಲನೆ; ಕಾರ್ಮಿಕರ ಸಮಸ್ಯೆ ಆಲಿಸಿದ ಸಿಇಒ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ ದೇಸೀ ತಳಿಗಳನ್ನು ಉಳಿಸಲು ಬದುಕನ್ನೇ ಮುಡಿಪಿಟ್ಟ ‘ಬೀಜಗಳ ಕಾವಲುಗಾರ’!

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ...

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...