ಬೀದರ್‌ | ಜಾತಿರಹಿತ, ಶೋಷಣೆರಹಿತ ಲಿಂಗಾಯತ ಧರ್ಮ : ಎಂ.ಬಿ.ಪಾಟೀಲ್

Date:

ವಿಶ್ವಗುರು ಬಸವಣ್ಣನವರ ವಿಚಾರಧಾರೆ, ಶರಣರ ವಚನ ಸಾಹಿತ್ಯ ಹಾಗೂ ಸಮಾನತೆಯ ಆಶಯಗಳಿಗೆ ಸಾಕ್ಷಿಯಾಗಿರುವ ಐತಿಹಾಸಿಕ ಬಸವಕಲ್ಯಾಣದಲ್ಲಿ ಲಿಂಗೈಕ್ಯ ಮಾತೆ ಮಹಾದೇವಿಯವರ ನೇತೃತ್ವದಲ್ಲಿ 2001ರಲ್ಲಿ ಆರಂಭವಾದ ಕಲ್ಯಾಣ ಪರ್ವವು 25ನೇ ವರ್ಷಕ್ಕೆ ಕಾಲಿಟ್ಟು ರಜತ ಮಹೋತ್ಸವ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಮೂಲಸೌಕರ್ಯ ಹಾಗೂ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

- Advertisement -

ಬಸವಕಲ್ಯಾದ ಬಸವ ಮಹಾಮನೆ ಆವರಣದಲ್ಲಿ ನಡೆದ ಎರಡನೇ ದಿನದ ಕಲ್ಯಾಣ ಪರ್ವದ ರಜತ ಮಹೋತ್ಸವದಲ್ಲಿ ಅವರು ಮಾತನಾಡಿ, “ಜಾತಿ, ವರ್ಗ ಹಾಗೂ ಲಿಂಗಭೇದಗಳನ್ನು ಮೀರಿ ಎಲ್ಲರಿಗೂ ಸಮಾನ ಗೌರವ, ಕಾಯಕಕ್ಕೆ ಘನತೆ ಮತ್ತು ದಾಸೋಹದ ಮೂಲಕ ಸಮಾಜದ ಒಳಿತನ್ನು ಸಾರಿದ ಬಸವಣ್ಣನವರ ಕ್ರಾಂತಿಕಾರಿ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

12ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ಹಾಗೂ ಅಲ್ಲಮಪ್ರಭುಗಳ ಅಧ್ಯಕ್ಷತೆಯಲ್ಲಿ ಮುನ್ನಡೆದ ಅನುಭವ ಮಂಟಪವು ಎಲ್ಲ ವರ್ಗಗಳ ಜನರ ಆಶೋತ್ತರಗಳಿಗೆ ಧ್ವನಿಯಾದ ವೈಚಾರಿಕ ವೇದಿಕೆಯಾಗಿತ್ತು. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಮುಕ್ತ ಚಿಂತನೆಯ ಆಶಯಗಳಿಗೆ ಶರಣರ ಪರಂಪರೆ ಭದ್ರ ಬುನಾದಿ ಹಾಕಿದ್ದು, ಇಂದಿಗೂ ನಮಗೆ ದಾರಿದೀಪವಾಗಿದೆ ಎಂದು ತಿಳಿಸಿದರು.

ಬಸವಣ್ಣನವರ ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ, ಮುಂದಿನ ಪೀಳಿಗೆಗೂ ಈ ಮಹಾನ್ ಪರಂಪರೆಯನ್ನು ಪರಿಚಯಿಸಿ ಸಮಾನತೆ ಮತ್ತು ಸಹಬಾಳ್ವೆಯ ಸಮಾಜ ನಿರ್ಮಿಸುವುದು ಎಲ್ಲರ ಹೊಣೆಗಾರಿಕೆಯಾಗಿದೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಬಳಿಕ ಸಿಖ್ ಮತ್ತು ಜೈನ್ ಧರ್ಮಗಳಿಗೆ ಮಾನ್ಯತೆ ದೊರೆತಿದ್ದರೂ, ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಜಾತಿರಹಿತ ಲಿಂಗಾಯತ ಧರ್ಮಕ್ಕೆ ಈವರೆಗೂ ಸ್ವತಂತ್ರ ಧರ್ಮದ ಮಾನ್ಯತೆ ಸಿಗದಿರುವುದು ಅಸಮಾಧಾನಕರ ಸಂಗತಿ ಎಂದು ಹೇಳಿದರು.

ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಬಸವಣ್ಣ ಹಾಗೂ ಬಸವಾದಿ ಶರಣರು ಸಾರಿದ ಸಮಾನತೆ, ಕಾಯಕ, ದಾಸೋಹ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಜಾತಿ, ಧರ್ಮ ಹಾಗೂ ವರ್ಗದ ಭೇದಭಾವಗಳನ್ನು ಮೀರಿ ಸಮಾನತೆಯ ಸಮಾಜ ನಿರ್ಮಿಸುವುದು ಶರಣರ ಆಶಯವಾಗಿದ್ದು, ಅವರ ವೈಚಾರಿಕ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದರು.

WhatsApp Image 2026 10 10 at 7.46.08 PM 23

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಏಕೆ ದೊರೆಯುತ್ತಿಲ್ಲ ಮತ್ತು ಇದಕ್ಕೆ ಕಾರಣಗಳೇನು ಎಂಬುದರ ಕುರಿತು ಗಂಭೀರ ಚರ್ಚೆ ನಡೆಯಬೇಕು. ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಮತ್ತೆ ಬಸವಕಲ್ಯಾಣದಿಂದಲೇ ಕ್ರಾಂತಿ ಆರಂಭವಾಗಬೇಕಿದೆ. ವಚನ ಸಾಹಿತ್ಯವನ್ನು ನಾಶಪಡಿಸಿದವರು ಹಾಗೂ ಬಸವಾದಿ ಶರಣರನ್ನು ಹತ್ಯೆಗೈದವರ ಕುರಿತು ಚಿಂತನೆ ನಡೆಸಬೇಕಿದೆ. ಬಸವಣ್ಣ, ಬುದ್ಧ ಮತ್ತು ಅಂಬೇಡ್ಕರ್ ಅವರು ನಮ್ಮ ಆದರ್ಶಗಳಾಗುವವರೆಗೆ ಹೋರಾಟ ಯಶಸ್ಸು ಕಾಣಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

WhatsApp Image 2026 10 25 at 9.12.58 PM 1

ಚಿಂತಕ ರಂಜಾನ್ ದರ್ಗಾ ಮಾತನಾಡಿ, ಬಸವಾದಿ ಶರಣರ ವಚನ ಸಾಹಿತ್ಯ ವಿಶ್ವಸಂಸ್ಕೃತಿಯಾಗಿದೆ. 12ನೇ ಶತಮಾನದ ಶರಣರಲ್ಲಿ ಬಹುತೇಕರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದರು. ಆದರೆ, ಪಟ್ಟಭದ್ರ ಹಿತಾಸಕ್ತಿಗಳು ಶರಣರನ್ನು ಕೊಲೆಗೈದು ಕೋಟ್ಯಂತರ ವಚನಗಳನ್ನು ಸುಡುವ ಮೂಲಕ ವಚನ ಸಾಹಿತ್ಯವನ್ನು ನಾಶಪಡಿಸಿದವು ಎಂದು ಹೇಳಿದರು.

ಮಾನವ ಬಂಧುತ್ವ ಮತ್ತು ಎಲ್ಲರನ್ನು ಒಳಗೊಳ್ಳುವ ಸಂಸ್ಕೃತಿ ಲಿಂಗಾಯತ ಧರ್ಮದಲ್ಲಿದೆ. ಜಗತ್ತಿನ ಅನೇಕ ವಿಶ್ವವಿದ್ಯಾಲಯಗಳಲ್ಲಿ ವಚನ ಸಾಹಿತ್ಯದ ಕುರಿತು ಸಂಶೋಧನೆಗಳು ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಕಾಯಕ ಜೀವಿಗಳಿಂದ ರಚನೆಯಾದ ವಚನ ಸಾಹಿತ್ಯ ಇಡೀ ವಿಶ್ವಕ್ಕೆ ಬೆಳಕಾಗಿದೆ ಎಂದರು.

WhatsApp Image 2026 10 10 at 6.59.31 PM 10

ಕಾರ್ಯಕ್ರಮದಲ್ಲಿ ಬಸವಧರ್ಮ ಪೀಠಾಧ್ಯಕ್ಷರಾದ ಮಾತೆ ಗಂಗಾದೇವಿ ಅವರು ಕಾರ್ಯಕ್ರಮದ ವಿಧಿವಿಧಾನಗಳನ್ನು ನೆರವೇರಿಸಿದರು. ಪೂಜ್ಯ ಮಹಾದೇಶ್ವರ ಸ್ವಾಮೀಜಿ ಅವರ ದಿವ್ಯ ನೇತೃತ್ವದಲ್ಲಿ ಹಾಗೂ ಪೂಜ್ಯ ಬಸವ ಹರಳಯ್ಯ ಸ್ವಾಮೀಜಿ ಅವರ ದಿವ್ಯ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗಿತು.

ಹುಲಸೂರಿನ ಶಿವಾನಂದ ಮಹಾಸ್ವಾಮೀಜಿ, ಪೂಜ್ಯ ಬಸವಯೋಗಿ ಸ್ವಾಮೀಜಿ , ಪೂಜ್ಯ ಅನಿಮಿಷಾನಂದ ಸ್ವಾಮೀಜಿ, ಶಾಸಕರಾದ ಶರಣು ಸಲಗರ, ಡಾ.ಶೈಲೇಂದ್ರ ಬೆಲ್ದಾಲೆ, ಡಾ.ಸಿದ್ದಲಿಂಗಪ್ಪ ಪಾಟೀಲ್‌, ಭೀಮರಾವ್‌ ಪಾಟೀಲ್‌, ಡಾ.ಚಂದ್ರಶೇಖರ್‌ ಪಾಟೀಲ್, ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಮಾಜಿ ಸಚಿವರಾದ ಎಚ್. ಆಂಜನೇಯ, ರಹೀಂ ಖಾನ್, ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್, ಬಸವರಾಜ ಬುಳ್ಳಾ, ಶಿವಶರಣಪ್ಪ ಹುಗ್ಗೆಪಾಟೀಲ, ಸುರೇಸ ಸ್ವಾಮಿ, ರವೀಂದ್ರ ಕೋಳಕೂರ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧಾರ : ಸಿ.ಸೋಮಶೇಖರ್‌

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...