ಬೀದರ್‌ | ಅನುಭವ ಮಂಟಪ ಉತ್ಸವ : ನ.16ರಿಂದ 26ರವರೆಗೆ ‘ಜನಪದದಲ್ಲಿ ಬಸವ ದರ್ಶನ’ ಪ್ರವಚನ

Date:

ಬಸವಕಲ್ಯಾಣ: ನವೆಂಬರ್ 28 ಮತ್ತು 29ರಂದು ನಡೆಯಲಿರುವ 47ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ-2026ರ ಅಂಗವಾಗಿ ಆಯೋಜಿಸಲಾಗುವ ಪ್ರವಚನ ಕಾರ್ಯಕ್ರಮದ ಸೇವಾ ಸಮಿತಿ ಅಧ್ಯಕ್ಷರಾಗಿ ಶರಣ ಶಂಕರ್ ಕರಣೆ ಅವರನ್ನು ನೇಮಕ ಮಾಡಲಾಗಿದೆ.

- Advertisement -

ಬಸವಕಲ್ಯಾಣದ ಅನುಭವ ಮಂಟಪದ ಆವರಣದಲ್ಲಿ ಪೂಜ್ಯ ನಾಡೋಜ ಬಸವಲಿಂಗ ಪಟ್ಟದ್ದೇವರ ದಿವ್ಯ ಸಾನಿಧ್ಯದಲ್ಲಿ ನಡೆದ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಈ ನೇಮಕ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಬಸವಲಿಂಗ ಪಟ್ಟದ್ದೇವರು ಮಾತನಾಡಿ, “ಜಗತ್ತಿಗೆ ಪ್ರಪ್ರಥಮವಾಗಿ ಪ್ರಜಾಪ್ರಭುತ್ವದ ಸಂದೇಶ ಸಾರಿದ ವಿಶ್ವದ ಮೊದಲ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅನುಭವ ಮಂಟಪ ಹಾಗೂ ಬಸವಾದಿ ಶರಣರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಪ್ರತಿವರ್ಷ ನವೆಂಬರ್ ತಿಂಗಳ ಕೊನೆಯ ಶನಿವಾರ ಮತ್ತು ಭಾನುವಾರದಂದು ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ಆಚರಿಸಲಾಗುತ್ತಿದೆ” ಎಂದರು.

ಈ ಬಾರಿ ನವೆಂಬರ್ 16ರಿಂದ 26ರವರೆಗೆ ಬಸವಕಲ್ಯಾಣದ ಶ್ರೀ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ಧಾರವಾಡ ಜಿಲ್ಲೆಯ ಹಿರೇಹೊನ್ನಳ್ಳಿಯ ಚನ್ನಬಸವ ಸ್ವಾಮೀಜಿಯವರಿಂದ ‘ಜನಪದದಲ್ಲಿ ಬಸವ ದರ್ಶನ’ ಪ್ರವಚನ ಆಯೋಜಿಸಲಾಗಿದೆ. ಪ್ರವಚನಕಾರರು ಬಸವಾದಿ ಶರಣರ ಕುರಿತ ಜನಪದ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿದ್ದು, ನಾಡಿನಾದ್ಯಂತ ಯಶಸ್ವಿಯಾಗಿ ಪ್ರವಚನಗಳನ್ನು ನಡೆಸಿದ್ದಾರೆ. ಬಸವಕಲ್ಯಾಣದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರವಚನ ಆಲಿಸಬೇಕು ಎಂದು ಮನವಿ ಮಾಡಿದರು.

ಪ್ರವಚನ ಸೇವಾ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಂಕರ್ ಕರಣೆ ಅವರು ಕಾರ್ಯಕ್ರಮವನ್ನು ಸಂಘಟಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಯಶಸ್ವಿಗೊಳಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಂಕರ್ ಕರಣೆ ಮಾತನಾಡಿ, ಪೂಜ್ಯರು ವಹಿಸಿರುವ ಜವಾಬ್ದಾರಿಯನ್ನು ಅವರ ಆಶೀರ್ವಾದ ಹಾಗೂ ಎಲ್ಲರ ಸಹಕಾರದೊಂದಿಗೆ ಸಮರ್ಥವಾಗಿ ನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು.

WhatsApp Image 2026 11 13 at 8.18.17 PM

ಸಭೆಯಲ್ಲಿ ಪ್ರವಚನಕಾರ ಚನ್ನಬಸವಾನಂದ ಮಹಾಸ್ವಾಮೀಜಿ, ಅನುಭವ ಮಂಟಪದ ಸಂಚಾಲಕ ಶಿವಾನಂದ ಮಹಾಸ್ವಾಮೀಜಿ, ತಿಪ್ಪೇರುದ್ರ ಮಹಾಸ್ವಾಮೀಜಿ, ಬಸವ ದೇವರು, ಪ್ರಭುಲಿಂಗ ದೇವರು, ಅನುಭವ ಮಂಟಪದ ಮುಖ್ಯ ನಿರ್ವಾಹಕ ಅಶೋಕ್ ಕುಂಬಾರ್, ಗಂಗಾಧರ ಬಿರಾದರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ :

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ ಬೆಲೆ 20,000 ಗಡಿ ದಾಟುವ ಆತಂಕ

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ ಕೇಂದ್ರ!

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು ಸಂಸಾರ ʻಜಾಲವಾಡಗಿʼ

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು...

ಈ ದಿನ ಸಂಪಾದಕೀಯ | ನರಾಧಮ ಇಸ್ರೇಲಿನ ನೀಚ ಕೃತ್ಯಗಳು ಮತ್ತು ಮೋದಿ ಮೌನಕ್ಕೆ ಕೊನೆಯೇ ಇಲ್ಲವೇ?

ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ ಕುರಿತ ಭಾರತದ ನಿಲುವು ಅತ್ಯಂತ ನಿರಾಶಾಜನಕ. ಮೋದಿ...