ಬೀದರ್‌ | ತಳ ಸಮುದಾಯಗಳಿಗೆ ಅಸ್ಮಿತೆಯನ್ನು ರೂಪಿಸಿದ ಬಾಬಾಸಾಹೇಬ್‌ : ಶಿವಾಜಿ ಮೇತ್ರೆ

Date:

ನಮ್ಮ ದೇಶದ ತಳ ಸಮುದಾಯಗಳ, ಸಮಾಜದ ಅಂಚಿನಲ್ಲಿರುವ ಜನರಿಗೆ ಅಸ್ಮಿತೆಯನ್ನು ತಂದು ಕೊಟ್ಟಿದ್ದು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್‌ ಅಂಬೇಡ್ಕರ್ ಅವರು ಎಂದು ಕಲಬುರ್ಗಿಯ ನೂತನ ವಿದ್ಯಾಲಯ ಪಿಯು ಕಾಲೇಜು ಅಧ್ಯಾಪಕ ಡಾ.ಶಿವಾಜಿ ಮೇತ್ರೆ ಹೇಳಿದರು.

- Advertisement -

ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಅಂಬೇಡ್ಕರ್ ಚಿಂತನೆಯ ಆಯಾಮಗಳು ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಮಹತ್ವ ನೀಡಿ, ಆರ್ಥಿಕ ಸ್ವಾವಲಂಬನೆಗೆ ಆದ್ಯತೆ ಕೊಟ್ಟು, ಮಾನವೀಯತೆಯ ಪಾಠ ಕಲಿಸಿದ ಪ್ರಖರ ಚಿಂತಕರು. ಸಂವಿಧಾನದ ಮೂಲಕ ಜಾತ್ಯತೀತ, ಸಮಸಮಾಜ, ಸ್ವಾತಂತ್ರ್ಯ ಮನೋಧರ್ಮದ ಜಗತ್ತಿನ ನಿರ್ಮಾಣ ಮಾಡಿದ್ದಾರೆ. ಜಗತ್ತಿನ ಪ್ರಖ್ಯಾತ ಜ್ಞಾನಿಗಳಲ್ಲಿ ಅಂಬೇಡ್ಕರ್ ಅವರೂ ಒಬ್ಬರು. ಜಗತ್ತಿನ ಬಹುದೊಡ್ಡ ಬೌದ್ಧಿಕ ಚಿಂತಕರಾಗಿದ್ದರು” ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಭೀಮಾಶಂಕರ ಬಿರಾದಾರ ಮಾತನಾಡಿ, ʼಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರು ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಸಂಗತಿಗಳಿಗೆ ತಮ್ಮ ಚಿಂತನೆಗಳನ್ನು ಲೋಕಕ್ಕೆ ನೀಡುವ ಮೂಲಕ ಇಡೀ ಯುಗವನ್ನು ಪ್ರಜ್ಞಾಪೂರ್ವಕವಾಗಿ ಇಟ್ಟಿದ್ದಾರೆʼ ಎಂದರು.

ʼಅಂಬೇಡ್ಕರ್ ಅವರ ಬರಹಗಳ ಅನುಸಂಧಾನ ಸದ್ಯದ ಸಂದರ್ಭದಲ್ಲಿ ಹೆಚ್ಚು ಅಗತ್ಯವಾಗಿದೆ. ಈ ದೇಶದ ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಬಿಕ್ಕಟ್ಟುಗಳನ್ನು ಅರಿಯಲು ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ವೈಧಾನಿಕತೆಯಾಗಿ ಬೆಳೆಸಿಕೊಳ್ಳಬೇಕು. ಅವರು ಸಂವಿಧಾನದ ಮೂಲಕ ಮಾತನಾಡುವ, ಸಮಾನತೆಯ, ಸ್ವಾತಂತ್ರ್ಯದ ಹಕ್ಕನ್ನು ನೀಡಿದ ದಾರ್ಶನಿಕ. ಅವರು ಪ್ರಬುದ್ಧ ಭಾರತ ರೂಪಿಸಿದ ಶಿಲ್ಪಿʼ ಎಂದರು.

ಶ್ರೀ ಬಸವೇಶ್ವರ ಪಿಜಿ ಕಾಲೇಜು ಪ್ರಾಚಾರ್ಯೆ ಡಾ.ಶಾಂತಲಾ ಪಾಟೀಲ ಮಾತನಾಡಿ, ʼಡಾ.ಅಂಬೇಡ್ಕರ್ ಅವರು ಈ ಜಗದ ಬೆಳಕು. ಪ್ರಖರ ವೈಚಾರಿಕ ಚಿಂತಕರು. ಇಡೀ ಜಗತ್ತಿಗೆ ಮಾದರಿಯಾದವರು. ಅಸ್ಪೃಶ್ಯತಾ ವಿರೋಧಿ ಚಿಂತನೆ ಗಟ್ಟಿಯಾಗಿ ಹೇಳಿದವರುʼ ಎಂದರು.

ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಅಶೋಕ ರೆಡ್ಡಿ ಗದಲೇಗಾಂವ ಮಾತನಾಡಿ, ʼಬಾಬಾಸಾಹೇಬ್ ಅಂಬೇಡ್ಕರ್ ಅವರು ಬೌದ್ಧ ಚಿಂತನೆಯನ್ನು ಶಾಂತಿ, ಕಾರುಣ್ಯ ಮತ್ತು ಅಂತಃಕರಣದ ತತ್ವದಿಂದಾಗಿ ಒಪ್ಪಿ ಅಪ್ಪಿಕೊಂಡರು. ಮನುಷ್ಯತ್ವದ ಹುಡುಕಾಟ ಅವರ ಆಲೋಚನೆಗಳಲ್ಲಿ ಅಡಗಿದೆʼ ಎಂದರು.

ಇದನ್ನೂ ಓದಿ : ಭಾಲ್ಕಿ | ಅಂಬೇಡ್ಕರ್ ವಿಚಾರಧಾರೆ ಸಮಾಜಕ್ಕೆ ದಾರಿದೀಪ : ಬಸವರಾಜ ಮೊಳಕೀರೆ

ಕಾರ್ಯಕ್ರಮದಲ್ಲಿ ಶ್ರೀನಿವಾಸ ಉಮಾಪುರೆ, ವಿವೇಕಾನಂದ ಶಿಂಧೆ, ರೋಷನ್ ಬಿ, ಪ್ರಭಾಕರ ನೌವಗಿರೆ, ನಾಗರಾಜ್ ನಾಸೆ, ಪ್ರೇಮಲಾ ತಾಂಬೋಳೆ, ನೀಲಮ್ಮ ಮೊದಲಾದವರು ಇದ್ದರು. ಡಾ. ಬಸವರಾಜ ಖಂಡಾಳೆ ನಿರೂಪಿಸಿ ಸ್ವಾಗತಿಸಿದರು. ಗಂಗಾಧರ ಸಾಲಿಮಠ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಬೆಳೆಸಿಕೊಳ್ಳಲಿ ಕರೆ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ...

ಹುಮನಾಬಾದ್‌ | ಪಶು ಇಲಾಖೆ ವಾಹನ ನಿರ್ವಹಣೆ ವೆಚ್ಚದಲ್ಲಿ ಅಕ್ರಮ ಆರೋಪ: ತನಿಖೆಗೆ ಭೀಮರೆಡ್ಡಿ ಆಗ್ರಹ

ಹುಮನಾಬಾದ್ ತಾಲ್ಲೂಕಿನ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಸರ್ಕಾರದಿಂದ ಒದಗಿಸಿರುವ...

ಬೀದರ್‌ | ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿ, ಕಾಂಗ್ರೆಸ್ : ಆಪ್ ಶಾಸಕ ಅನಿಲ್ ಝಾ

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ....

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು...