ಬೀದರ್‌ | ಸಾಂಸ್ಕೃತಿಕ ಶ್ರೀಮಂತಿಕೆಯ ನೆಲ ಕಲ್ಯಾಣ : ಡಾ.ಸುಷ್ಮಾ ಎಚ್.

Date:

ಕಲ್ಯಾಣ ಕರ್ನಾಟಕ ಸಾಂಸ್ಕೃತಿಕವಾಗಿ ಶ್ರೀಮಂತಿಕೆ ಹೊಂದಿರುವ ನೆಲ. ಅದರಲ್ಲೂ ಬಸವಕಲ್ಯಾಣವು ವಚನ ಸಾಹಿತ್ಯದ ಮೂಲಕ ಹೊಸ ಆಲೋಚನೆಗಳು ಕಟ್ಟಿಕೊಟ್ಟ ಸ್ಥಳ ಎಂದು ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಾಫ್ಟ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಿರ್ದೇಶಕಿ ಡಾ.ಸುಷ್ಮಾ ಎಚ್.ಹೇಳಿದರು.

- Advertisement -

ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ ಐಕ್ಯುಎಸಿ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ‘ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಶಿಕ್ಷಣ ‘ ಕುರಿತ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಎಷ್ಟೆಲ್ಲ ಹೊಸ ಚಿಂತನೆಗಳು ವಚನಕಾರರು ಅಂದಿನ ಕಾಲದಲ್ಲಿಯೇ ಕಟ್ಟಿಕೊಟ್ಟಿದ್ದಾರೆ ಎಂಬುದೇ ನಮಗೆ ಬೆರಗಿನ ಸಂಗತಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ಕಲ್ಯಾಣ ಮೊದಲ ಸಂಸತ್ತಿನ ಪರಿಕಲ್ಪನೆ ನೀಡಿದ ನೆಲ. ಸಮಾನತೆ, ಸ್ವಾತಂತ್ರ್ಯ, ಮಹಿಳಾ ಅಸ್ತಿತ್ವಕ್ಕೆ ಆದ್ಯತೆ ನೀಡಿದ ಇಲ್ಲಿ , ಬಸವಣ್ಣನವರು ಇಡೀ ಕೌಶಲ್ಯ ಹೊಂದಿದವರನ್ನು ಅನುಭವ ಮಂಟಪದಲ್ಲಿ ಸೇರಿದ್ದರು. ವಚನಕಾರರದು ಬೌದ್ಧಿಕ, ಆಧ್ಯಾತ್ಮಿಕ ಮತ್ತು ವೈಚಾರಿಕ ಕೌಶಲ್ಯವಾಗಿತ್ತು. ಕೌಶಲ್ಯಾಧಾರಿತ ಶಿಕ್ಷಣ ಈ ಕಾಲಕ್ಕೆ ತುಂಬಾ ಮಹತ್ವ ಪಡೆದಿದೆ. ಇಂದು ವಿಕಸಿತ ಭಾರತದ ಕಲ್ಪನೆಯನ್ನು ಸಾಧಿಸಲು ದಾರಿಯಾಗಿದೆ. ತಂತ್ರಜ್ಞಾನ ಮತ್ತು ಕೌಶಲ್ಯಗಳ ಅಭಿವೃದ್ಧಿಯಿಂದ ಸಾಮಾಜಿಕ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯ” ಎಂದರು.

ವಾಣಿಜ್ಯ ವಿಷಯದ ವ್ಯಾಪ್ತಿ ದೊಡ್ಡದು. ಬ್ಯಾಂಕಿಂಗ್, ಆರ್‌ಬಿಐ, ಐಟಿ, ಅಂತರರಾಷ್ಟ್ರೀಯ ಆರ್ಥಿಕತೆ ಸೇರಿ ಹಲವು ರಂಗಗಳಲ್ಲಿ ವಿದ್ಯಾರ್ಥಿಗಳು ಹೊಸ ಅವಕಾಶ ಪಡೆಯುವ ಸಾಧ್ಯತೆಗಳಿವೆ. ಈ ಎಲ್ಲ ಸಂಗತಿಗಳು ಇಲ್ಲಿ ವಿದ್ಯಾರ್ಥಿಗಳಿಗೆ ತಿಳಿಸಿ ಕೊಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಭೀಮಾಶಂಕರ ಬಿರಾದಾರ ಮಾತನಾಡಿ, “ಓದು-ಅಧ್ಯಯನದ ಜೊತೆಗೆ ತಂತ್ರಜ್ಞಾನದ ಅರಿವು ಮತ್ತು ಹೊಸ ಕೌಶಲಗಳನ್ನು ಕಲಿಯುವುದು ಈ ಕಾಲದ ಅನಿವಾರ್ಯವಾಗಿದೆ. ಮಾನವಿಕ ಅಧ್ಯಯನಗಳು ಮನುಷ್ಯ ಜಗತ್ತಿನ ವ್ಯವಹಾರ ಹಾಗೂ ಸಮಾಜದ ಗ್ರಹಿಕೆಗೆ ದಾರಿಯಾಗಿದೆ. ಲೋಕ ವ್ಯವಹಾರದ ಅರಿವಿಗಾಗಿ ತಂತ್ರಜ್ಞಾನ ಮತ್ತು ಕೌಶಲಗಳನ್ನು ಕಲಿಯಬೇಕು” ಎಂದರು.

ಇದನ್ನೂ ಓದಿ : ದೆಹಲಿಯಲ್ಲಿ ರಾಹುಲ್ ಗಾಂಧಿ ಬಂಧನಕ್ಕೆ ಈಶ್ವರ ಖಂಡ್ರೆ ಖಂಡನೆ

ಬಸವೇಶ್ವರ ಪಿಜಿ ಪ್ರಾಚಾರ್ಯೆ ಡಾ.ಶಾಂತಲಾ ಪಾಟೀಲ, ಪ್ರಿಯಾ ಚೌಹಾಣ್, ಗುರುದೇವಿ ಕಿಚಡೆ, ನಾಗರಾಜ್ ನಾಸೆ, ಕೃಷ್ಣ ಗೌಳಿ, ಅಶೋಕ ರೆಡ್ಡಿ ಗದಲೇಗಾಂವ, ಪ್ರಭಾಕರ ನೌಗಿರೆ, ಶೃತಿ ನೀಲಮಠ, ನಾಗವೇಣಿ ವಟಗೆ ಅನೇಕರಿದ್ದರು. ಐಕ್ಯುಎಸಿ ಸಂಯೋಜಕ ಪವನ್ ಪಾಟೀಲ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಗಂಗಾಧರ ಸಾಲಿಮಠ ನಿರೂಪಿಸಿದರು. ರೋಷನ್ ಬಿ. ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಬೆಟ್‌ನಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ: ಜಲಪ್ರಳಯದ ಬೆನ್ನಲ್ಲೇ ಚೀನಾಗೆ ಮತ್ತೊಂದು ಆಘಾತ

ಚೀನಾದ ಟಿಬೆಟ್ ಭಾಗದಲ್ಲಿ ಗುರುವಾರ ರಾತ್ರಿ 7.0 ತೀವ್ರತೆಯ ಭಾರಿ ಭೂಕಂಪ...

ಕಲಬುರಗಿ | ಬಸ್‌ನಲ್ಲಿ ಮರೆತು ಹೋಗಿದ್ದ ಚಿನ್ನಾಭರಣ ಮರಳಿಸಿದ ಚಾಲಕ, ನಿರ್ವಾಹಕ

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ...