ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

Date:

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ ಅಳವಡಿಸಿಕೊಂಡು ಎರಡು ಎಕರೆ ಜಮೀನಿನಲ್ಲಿ ಸಮೃದ್ಧ ಪಪ್ಪಾಯಿ ಬೆಳೆದು ₹25 ಲಕ್ಷ ಆದಾಯ ಗಳಿಸಿರುವ ಬಸವಕಲ್ಯಾಣ ತಾಲ್ಲೂಕಿನ ಇಸ್ಲಾಂಪುರ ಗ್ರಾಮದ ಯುವ ರೈತ ವೆಂಕಟರೆಡ್ಡಿ ವಿಠ್ಠಲರೆಡ್ಡಿ ಬೆಲ್ಲಂಕುಂಡಾ ಅವರ ಸಾಧನೆಗೆ ಹುಮನಾಬಾದ್ ಶಾಸಕ ಡಾ.ಸಿದ್ಧಲಿಂಗಪ್ಪ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -

ಗುರುವಾರ ರೈತ ವೆಂಕಟರೆಡ್ಡಿ ಅವರ ಪಪ್ಪಾಯಿ ತೋಟಕ್ಕೆ ಭೇಟಿ ನೀಡಿದ ಶಾಸಕರು, ಬೆಳೆ ಪದ್ಧತಿ, ಇಳುವರಿ ಹಾಗೂ ಮಾರುಕಟ್ಟೆ ವ್ಯವಸ್ಥೆಯ ಕುರಿತು ಮಾಹಿತಿ ಪಡೆದುಕೊಂಡರು. ಬರಗಾಲದಲ್ಲಿಯೂ ಕೃಷಿಯಲ್ಲಿ ಹೊಸ ಪ್ರಯೋಗಗಳ ಮೂಲಕ ಉತ್ತಮ ಆದಾಯ ಗಳಿಸಿರುವ ರೈತನ ಪ್ರಯತ್ನವನ್ನು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...
WhatsApp Image 2026 10 10 at 6.59.42 PM 1
ಜಾಹೀರಾತು

“ಕಳೆದ ವರ್ಷ ನವೆಂಬರ್‌ನಲ್ಲಿ 2 ಎಕರೆ ಜಮೀನಿನಲ್ಲಿ ಆರು ಅಡಿ ಅಂತರದಲ್ಲಿ ಸಾಲುಗಳ ನಡುವೆ ಎಂಟು ಅಡಿ ಅಂತರವಿಟ್ಟು ಒಟ್ಟು 2,000 ಪಪ್ಪಾಯಿ ಸಸಿಗಳನ್ನು ನಾಟಿ ಮಾಡಿದ್ದೇನೆ. ಪ್ರತಿ ಎಕರೆಗೆ ₹60 ಸಾವಿರದಂತೆ ಒಟ್ಟು ₹1.20 ಲಕ್ಷ ವೆಚ್ಚವಾಗಿದೆ. ಈಗಾಗಲೇ ₹25 ಲಕ್ಷ ಆದಾಯ ಗಳಿಸಿದ್ದೇನೆ. ಸಂಪೂರ್ಣ ಸಾವಯವ ಕೃಷಿ ಪದ್ಧತಿಯನ್ನು ಅನುಸರಿಸುತ್ತಿದ್ದು, ರಾಸಾಯನಿಕ ಗೊಬ್ಬರಗಳ ಬದಲಿಗೆ ದನ ಹಾಗೂ ಕುರಿಗಳ ಗೊಬ್ಬರ ಬಳಸುತ್ತಿದ್ದೇನೆ. ನೀರಿನ ಮಿತಬಳಕೆಗಾಗಿ ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದೇನೆ” ಎಂದು ರೈತ ವೆಂಕಟರೆಡ್ಡಿ ಶಾಸಕರಿಗೆ ವಿವರಿಸಿದರು.

ಪಪ್ಪಾಯಿ ಗಿಡಗಳು ಏಳನೇ ತಿಂಗಳಲ್ಲಿ ಹೂ ಬಿಟ್ಟಿದ್ದು, ಎಂಟನೇ ತಿಂಗಳಲ್ಲಿ ಕಾಯಿಗಳನ್ನು ನೀಡಿವೆ. ಪ್ರತಿ ಗಿಡದಲ್ಲಿ 40ರಿಂದ 80 ಕಾಯಿಗಳು ಬೆಳೆದಿದ್ದು, ಪ್ರತಿ ಗಿಡದಿಂದ 60ರಿಂದ 100 ಕೆ.ಜಿ.ವರೆಗೆ ಇಳುವರಿ ದೊರೆತಿದೆ ಎಂದು ಮಾಹಿತಿ ನೀಡಿದರು.

WhatsApp Image 2026 10 10 at 7.46.08 PM
ಜಾಹೀರಾತು

ವೆಂಕಟರೆಡ್ಡಿ ಅವರ ತೋಟಕ್ಕೆ ದೆಹಲಿ, ಮುಂಬೈ, ಹೈದರಾಬಾದ್ ಹಾಗೂ ಉತ್ತರ ಪ್ರದೇಶ ಸೇರಿದಂತೆ ವಿವಿಧ ಪ್ರದೇಶಗಳಿಂದ ವ್ಯಾಪಾರಿಗಳು ಆಗಮಿಸಿ ಪಪ್ಪಾಯಿ ಖರೀದಿಸುತ್ತಿದ್ದಾರೆ. ಪ್ರತಿ ಕೆ.ಜಿ. ಪಪ್ಪಾಯಿಗೆ ₹31ರಂತೆ ಬೆಲೆ ದೊರೆಯುತ್ತಿದ್ದು, ತೋಟಕ್ಕೇ ವ್ಯಾಪಾರಿಗಳು ಬಂದು ಖರೀದಿಸುತ್ತಿರುವುದರಿಂದ ಮಾರುಕಟ್ಟೆ ವ್ಯವಸ್ಥೆಯೂ ಅನುಕೂಲಕರವಾಗಿದೆ. ಕಷ್ಟಪಟ್ಟು ದುಡಿದರೆ ಭೂತಾಯಿ ಎಂದಿಗೂ ಕೈಬಿಡುವುದಿಲ್ಲ. ಪಪ್ಪಾಯಿ ಬೆಳೆಯಿಂದ ದೊರೆತ ಆದಾಯ ಇದಕ್ಕೆ ಸಾಕ್ಷಿಯಾಗಿದೆ ಎಂದು ರೈತ ಸಂತಸ ವ್ಯಕ್ತಪಡಿಸಿದರು.

“ಬರಗಾಲವಿದೆ ಎಂಬ ಕಾರಣಕ್ಕೆ ರೈತರು ಕೃಷಿಯಲ್ಲಿ ಹೊಸ ಪ್ರಯೋಗಗಳನ್ನು ಕೈಗೊಳ್ಳುವುದನ್ನು ನಿಲ್ಲಿಸಬಾರದು. ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು ಕಡಿಮೆ ನೀರಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಬೇಕು. ಅಧಿಕ ಇಳುವರಿ ಹಾಗೂ ಉತ್ತಮ ಆದಾಯ ಪಡೆಯಲು ಆಧುನಿಕ ಕೃಷಿ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು” ಎಂದು ಶಾಸಕ ಡಾ.ಸಿದ್ಧಲಿಂಗಪ್ಪ ಪಾಟೀಲ ರೈತರಿಗೆ ಸಲಹೆ ನೀಡಿದರು.

WhatsApp Image 2026 10 10 at 6.59.09 PM 1

ಇದನ್ನೂ ಓದಿ : ‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ಯುವ ರೈತ ವೆಂಕಟರೆಡ್ಡಿ ಅವರ ಸಾಧನೆ ಇತರ ರೈತರಿಗೂ ಪ್ರೇರಣೆಯಾಗಬೇಕು. ಕೃಷಿಯಲ್ಲಿ ವೈಜ್ಞಾನಿಕ ವಿಧಾನಗಳು, ನೀರಿನ ಸಮರ್ಪಕ ಬಳಕೆ ಹಾಗೂ ಸೂಕ್ತ ಬೆಳೆ ಆಯ್ಕೆಯ ಮೂಲಕ ಉತ್ತಮ ಆದಾಯ ಗಳಿಸಲು ಸಾಧ್ಯ ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.

MLA Dr Siddhalingappa Patil Visit To Venkatreddy Land 2
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...