ಬೀದರ್‌ | ʼಮೇಲಾಧಿಕಾರಿಗಳ ಕಿರುಕುಳದಿಂದ ನನ್ನ ಮಗ ಸಾವುʼ : ಮೃತ‌ ಮಹಾದೇವ ತಾಯಿ ಆರೋಪ

Date:

ʼಮೇಲಾಧಿಕಾರಿಗಳ ಕಿರುಕುಳ ಹಾಗೂ ಕೆಲಸದ ಒತ್ತಡದಿಂದ ನನ್ನ ಮಗ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆʼ ಎಂದು ಬುಧವಾರ (ಜೂ.3) ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಸವಕಲ್ಯಾಣ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಮಹಾದೇವ ಅವರ ತಾಯಿ ಆರೋಪಿಸಿದ್ದಾರೆ.

- Advertisement -

ಬಸವಕಲ್ಯಾಣ ತಾಲೂಕಿನ ಕಾಂಬಳೆವಾಡಿ ನಿವಾಸಿಯಾದ ಮಹಾದೇವ ಉದ್ದವ್ (30) ಬಾಗಿಲಿಗೆ ಬೀಗ ಹಾಕಿ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಕುರಿತು ಮೃತರ ತಾಯಿ ಜಾನಕಬಾಯಿ ನೀಡಿದ ದೂರಿನ ಮೇರೆಗೆ ಬಸವಕಲ್ಯಾಣ ತಾಲೂಕಿನ ಮಂಠಾಳ ಪೊಲೀಸ್ ಠಾಣೆಯಲ್ಲಿ ಯುಡಿಆರ್‌ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಒಂದು ವರ್ಷದ ಹಿಂದಷ್ಟೇ ಗ್ರಾಮ ಆಡಳಿತಾಧಿಕಾರಿಯಾಗಿ ಸೇವೆಗೆ ಸೇರಿ ಬಸವಕಲ್ಯಾಣದ ತಾಲ್ಲೂಕಿನ ಹಳ್ಳಿ ಮತ್ತು ಉಮಾಪೂರ ಗ್ರಾಮ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನನ್ನ ಮಗ ಮಹಾದೇವ, ಇತ್ತೀಚೆಗೆ ಮನೆಯಲ್ಲಿ ಸರಿಯಾಗಿ ಊಟ, ತಿಂಡಿ ಮಾಡದೇ ಒಬ್ಬಂಟಿಯಾಗಿ ಇರುತ್ತಿದ್ದನು. ನಾನು ವಿಚಾರಿಸಿದರೆ ʼನನಗೆ ಕೆಲಸದ ಒತ್ತಡ ಹೆಚ್ಚಾಗಿದ್ದು ಮತ್ತು ಮೇಲಾಧಿಕಾರಿಗಳು ಕಿರುಕುಳ ನೀಡುತ್ತಿದ್ದು, ಇದರಿಂದ ನನಗೆ ಬೇಸರ ಆಗುತ್ತಿದೆʼ ಎಂದು ಹೇಳುತ್ತಿದ್ದನು. ಹೀಗಾಗಿ ನನ್ನ ಮಹಾದೇವ ಮೇಲಾಧಿಕಾರಿಗಳ ಕಿರುಕುಳ ಹಾಗೂ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸಂಶಯ ಇದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಮೃತರ ತಾಯಿ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಸವಕಲ್ಯಾಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರು ಮನೆಗೆ ಕೊಂಡೊಯ್ದರು. ಬಳಿಕ ಶಾಸಕ ಶರಣು ಸಲಗರ ಅವರು ಕಾಂಬಳೆವಾಡಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

WhatsApp Image 2026 06 04 at 8.44.40 PM
ಶಾಸಕ ಶರಣು ಸಲಗರ ಮಾತನಾಡಿದರು.

ʼಮಹಾದೇವ ಸಾವಿಗೆ ನ್ಯಾಯ ಕೊಡಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡುವವರೆಗೂ ಅಂತ್ಯಕ್ರಿಯೆ ನಡೆಸುವುದಿಲ್ಲʼ ಎಂದು ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಸಂಘದವರು ಕೆಲಕಾಲ ಪಟ್ಟು ಹಿಡಿದರು.

ಬಳಿಕ ಶಾಸಕ ಶರಣು ಸಲಗರ ಮಾತನಾಡಿ, “ಒಬ್ಬ ಪ್ರತಿಭಾವಂತ ಅಧಿಕಾರಿಯಾಗಿದ್ದ ಮಹಾದೇವ ಅವರ ಸಾವು ಅತೀವ ನೋವು ತಂದಿದೆ. ಯಾರಾದರೂ ಕಿರುಕುಳ ನೀಡಿದರೆ ಆತ್ಮಹತ್ಯೆ ಒಂದೇ ಪರಿಹಾರವಲ್ಲ. ಮಹಾದೇವ ಅವರ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮಕೈಗೊಂಡು ಶಿಕ್ಷೆ ಕೊಡಿಸುವಂತೆ ಬರುವ ವಿಧಾನಸಭೆ ಅಧಿವೇಶನದಲ್ಲಿ ಧ್ವನಿ ಎತ್ತಿ ನ್ಯಾಯ ಕೊಡಿಸುವೆ. ಮೃತರ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸುವ ಜೊತೆಗೆ ಮೃತ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ” ಎಂದು ಹೇಳಿದರು.

ಈ ವೇಳೆ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಜಿಲ್ಲಾಧ್ಯಕ್ಷ ಬಬ್ರುವಾಹನ ಬೆಳಮಗಿ ಮಾತನಾಡಿ, ʼಸಹೋದ್ಯೊಗಿ ಮಹಾದೇವ ಅವರ ಸಾವು ತೀವ್ರ ನೋವು ತಂದಿದೆ. ಮೇಲಾಧಿಕಾರಿಗಳ ಕಿರುಕುಳ ಹಾಗೂ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದು ಮೇಲ್ನೋಟಕ್ಕೆ ಕಾಣಿಸುತ್ತಿದೆ ಎಂದು ಆರೋಪಿಸಿದ ಅವರು, ʼಕಳೆದ 1 ವರ್ಷದಲ್ಲಿ ರಾಜ್ಯದಲ್ಲಿ ಇದೇ ರೀತಿ ಸುಮಾರು 50 ಜನ ಗ್ರಾಮ ಆಡಳಿತ ಅಧಿಕಾರಿಗಳು ಕೆಲಸದ ಒತ್ತಡದಿಂದ ಮನನೊಂದು ಸಾವಿಗೆ ಶರಣಾಗಿದ್ದಾರೆ. ಮಹಾದೇವ ಸಾವಿಗೆ ಕಾರಣರಾದ ಮೇಲಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ಅಧಿಕಾರಿಗಳಿಂದಲೂ 50 ಲಕ್ಷ ಪರಿಹಾರ ಕೊಡಿಸಬೇಕು. ಮೃತ ಕುಟುಂಬಕ್ಕೆ ಸರ್ಕಾರದಿಂದ 1 ಕೋಟಿ ಪರಿಹಾರ ಘೋಷಿಸಬೇಕು” ಎಂದು ಆಗ್ರಹಿಸಿದರು.

ಈ ವೇಳೆ ಬಸವಕಲ್ಯಾಣ ಸಹಾಯಕ ಆಯುಕ್ತ ಪ್ರಕಾಶ ಕುದರಿ, ಬಸವಕಲ್ಯಾಣ ತಹಸೀಲ್ದಾರ್‌ ದತ್ತಾತ್ರೆಯ ಗಾದಾ, ಹುಲಸೂರ ತಹಸೀಲ್ದಾರ್‌ ಶಿವಾನಂದ ಮೇತ್ರೆ ಸೇರಿದಂತೆ ಗ್ರಾಮಾಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಸೇರಿದಂತೆ ಗ್ರಾಮಸ್ಥರು, ಕುಟುಂಬಸ್ಥರು ಅನೇಕರಿದ್ದರು.

ನಾಳೆ ಪ್ರತಿಭಟನೆ

ಗ್ರಾಮ ಆಡಳಿತ ಅಧಿಕಾರಿ ಮಹಾದೇವ ಉದ್ದವ ಅವರ ಆತ್ಮಹತ್ಯೆ ಘಟನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಜಿಲ್ಲಾ ಘಟಕದಿಂದ ನಾಳೆ (ಜೂ.5) ಬಸವಕಲ್ಯಾಣ ನಗರದ ತಹಸೀಲ್‌ ಕಚೇರಿ ಆವರಣದಲ್ಲಿ ಬೆಳಗ್ಗೆ 9ಗಂಟೆಯಿಂದ ಕಪ್ಪು ಬಟ್ಟೆ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಯಲಿದೆ.

ಇದನ್ನೂ ಓದಿ : ಬೀದರ್‌ | ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರಿಂದ ರಹೀಂ ಖಾನ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ

ಪ್ರತಿಭಟನೆಯಲ್ಲಿ ಸಂಘಟ ರಾಜ್ಯಾಧ್ಯಕ್ಷ ಯೋಗೇಶ ನಾಯಕ್, ಜಿಲ್ಲಾಧ್ಯಕ್ಷ ಬಬ್ರುವಾಹನ ಬೆಳಮಗಿ ಸೇರಿದಂತೆ ಜಿಲ್ಲೆಯ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...