ಬೀದರ್‌ | ನೀಟ್‌ ಪರೀಕ್ಷೆ ಸೋರಿಕೆ : ಎನ್‌ಟಿಎ ರದ್ದತಿಗೆ ಎನ್‌ಎಸ್‌ಯುಐ ಆಗ್ರಹ

Date:

ನೀಟ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬಸವಕಲ್ಯಾಣದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ತಾಲೂಕು ಘಟಕದಿಂದ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

- Advertisement -

ಬಸವಕಲ್ಯಾಣದ ಮಹಾತ್ಮ ಗಾಂಧಿ ವೃತ್ತದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದವರೆಗೆ ವಿದ್ಯಾರ್ಥಿಗಳು ಕಾಲ್ನಡಿಗೆಯ ಮುಖಾಂತರ ಪ್ರತಿಭಟನೆ‌ ಮೆರವಣಿಗೆ ನಡೆಸಿದರು. ಬಳಿಕ ಪ್ರಧಾನ ಮಂತ್ರಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ದತ್ತಾತ್ರೇಯ ಗಾದಾ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಒಕ್ಕೂಟದ ಮುಖಂಡರು ಮಾತನಾಡಿ, ʼಈಚೆಗೆ ದೇಶಾದ್ಯಂತ ನಡೆದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ದೊಡ್ಡ ಅನ್ಯಾಯವಾಗಿದೆ. ಈ ಘಟನೆಯು ದೇಶದ ಶಿಕ್ಷಣ ವ್ಯವಸ್ಥೆ ಮತ್ತು ಪರೀಕ್ಷಾ ಮಂಡಳಿಗಳ ಮೇಲಿನ ನಂಬಿಕೆಯನ್ನು ಸಂಪೂರ್ಣವಾಗಿ ಕುಂದಿಸಿದೆʼ ಎಂದು ಆರೋಪಿಸಿದರು.

ʼಎನ್‌ಟಿಎ ಸಂಸ್ಥೆಯು ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುವಲ್ಲಿ ಸತತವಾಗಿ ವಿಫಲವಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಭ್ರಷ್ಟ ವ್ಯವಸ್ಥೆಯ ವಿರುದ್ಧ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ವಿದ್ಯಾರ್ಥಿ ಹಕ್ಕುಗಳ ರಕ್ಷಣೆ ಹಾಗೂ ನ್ಯಾಯ ದೊರಕಿಸುವ ಉದ್ದೇಶದಿಂದ ಎನ್‌ಟಿಎ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕುʼ ಎಂದು ಒತ್ತಾಯಿಸಿದರು.

ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅನ್ಯಾಯವಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕುʼ ಎಂದು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ಬಿರುಗಾಳಿ ಸಹಿತ ಮಳೆ : ಮನೆಗೋಡೆ ಕುಸಿದು ಅಲೆಮಾರಿ ಮಕ್ಕಳಿಗೆ ಗಾಯ; ಎತ್ತು ಸಾವು

ಎನ್‌ಎಸ್‌ಯುಐ ತಾಲೂಕಾಧ್ಯಕ್ಷ ನರಸಪ್ಪಾ ನಿರೋಡೆ, ಪ್ರಧಾನ ಕಾರ್ಯದರ್ಶಿ ರೇವಣಸಿದ್ಧ ಹಾಲಿಂಗೆ, ಯುತ್ ಕಾಂಗ್ರೆಸ್ ಉಪಾಧ್ಯಕ್ಷ ಕಲ್ಯಾಣಿ ಪೂಜಾರಿಸೇರಿದಂತೆ ಒಕ್ಕೂಟದ ಪ್ರಮುಖರಾದ ಅಜಯ್ ಗುಡ್ಡೆ, ರಾಘವೇಂದ್ರ ಖಾನಾಪುರೆ, ಸುನಿಲ್ ಸಿಂಧೆ, ವಿಶಾಲ ಮಳಗೊಂಡ, ಓಂಪ್ರಕಾಶ್ ಮಡಿವಾಳ, ಆನಂದ್ ನಿರೋಡೆ, ಚೇತನ ಪಂಚಾಳ ಹಾಗೂ ಶ್ಯಾಮಸುಂದರ್ ಸಜ್ಜನ್ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...