ಬೀದರ್‌ | ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ವಿರೋಧ : ಬಸವಪ್ರಭು ಸ್ವಾಮೀಜಿ

Date:

ಬಸವಕಲ್ಯಾಣದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ನಡೆಸಲು ಕನೇರಿ ಮಠದ ಶ್ರೀಗಳಿಗೆ ನೈತಿಕ ಹಕ್ಕಿಲ್ಲ. ಜೂ.28ಕ್ಕೆ ನಡೆಯುವ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಅವಕಾಶ ನೀಡಲು ಬಿಡುವುದಿಲ್ಲ. ಈ ಕಾರ್ಯಕ್ರಮ ತಡೆಯೊಡ್ಡಲು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಬಸವಕಲ್ಯಾಣದ ಕಲ್ಯಾಣ ಮಹಾಮನೆಯ ಪೂಜ್ಯ ಸದ್ಗುರು ಬಸವಪ್ರಭು ಸ್ವಾಮೀಜಿ ತಿಳಿಸಿದ್ದಾರೆ.

- Advertisement -

“12ನೇ ಶತಮಾನದಲ್ಲಿ ವಿಶ್ವಗುರು ಬಸವಾದಿ ಶರಣರು ಸಾರಿದ ಸಮಾನತೆಯನ್ನು ವಿರೋಧಿಸಿ, ಕಲ್ಯಾಣ ನೆಲದಲ್ಲಿ ಅಂದು ಶರಣರ ಹತ್ಯಾಕಾಂಡ ನಡೆಸಿದ ವರ್ಣಾಶ್ರಮಿಗಳ ಸಂತತಿಯೇ ಇವರಾಗಿದ್ದಾರೆ. ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸಕ್ಕೆ ಕೈ ಹಾಕಿದ್ದಾರೆ. ಇಂಥವರಿಗೆ ಬಸವಕಲ್ಯಾಣದಲ್ಲಿ ಜೂ.28ಕ್ಕೆ ನಡೆಯುವ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಅವಕಾಶ ನೀಡಲು ಬಿಡುವುದಿಲ್ಲ” ಎಂದು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

“ಹಿಂದೂ ಧರ್ಮವೇ ಅಲ್ಲ; ಅದು ಜೀವನ ಪದ್ಧತಿಯಾಗಿದೆ. ವೈದಿಕ ಧರ್ಮವೇ ಹಿಂದೂ ಧರ್ಮವೆಂದು ವೈದಿಕ ಜನರನ್ನು ಮೂರ್ಖನಾಗಿಸುತ್ತ ಒಳಗೊಳಗೆ ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನವನ್ನು ವಿರೋಧಿಸುತ್ತ ಮತ್ತೊಮ್ಮೆ ಈ ದೇಶದಲ್ಲಿ ಮನು ಸಂಸ್ಕೃತಿ ಜಾರಿಗೆ ತರುವ ಹುನ್ನಾರ ಈ ಕಾರ್ಯಕ್ರಮದ ಹಿಂದೆ ಅಡಗಿದೆ. ಬಸವಣ್ಣನವರು ವೈದಿಕತೆಯಲ್ಲಿರುವ ವರ್ಣಾಶ್ರಮ ಪದ್ಧತಿಯನ್ನು ವಿರೋಧಿಸಿ ಅದರಿಂದ ಹೊರಬಂದು ಲಿಂಗಾಯತ ಧರ್ಮವನ್ನು ಸ್ಥಾಪಿಸಿದ್ದಾರೆ” ಎಂದು ಹೇಳಿದ್ದಾರೆ.

“900 ವರ್ಷದಿಂದ ಬಸವಣ್ಣನವರ ತತ್ವವನ್ನು ವಿರೋಧಿಸಿದವರು ಈಗ ಏಕಾಏಕಿಯಾಗಿ ಬಸವಣ್ಣನವರನ್ನು ಹಿಂದುತ್ವಕ್ಕೆ ತಳಕು ಹಾಕಿ ಬಸವಣ್ಣನವರ ವಚನವನ್ನು ತಪ್ಪು ತಪ್ಪಾಗಿ ಅರ್ಥೈಸುತ್ತಾ ಬಸವಣ್ಣನವರನ್ನು ಹಿಂದೂ ಧರ್ಮದ ಸುಧಾರಕ ಎಂದು ಬಿಂಬಿಸಲು ಹೊರಟಿರುವ ಇವರ ಜಾಣ ನಡೆಯನ್ನು ಲಿಂಗಾಯತ ಧರ್ಮಿಯರು, ಬಸವಾಭಿಮಾನಿಗಳು ಅರ್ಥಮಾಡಿಕೊಂಡು ಹೋರಾಟದಲ್ಲಿ ಭಾಗವಹಿಸಬೇಕು” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ : ಬೀದರ್‌ | JEE ಫಲಿತಾಂಶ : ಚನ್ನಬಸವೇಶ್ವರ ಗುರುಕುಲದ 64 ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹತೆ

ಬಸವತತ್ವ ಪ್ರಚಾರಕರನ್ನು ತಾಲಿಬಾನಿಗಳೆಂದು ಹೀಯಾಳಿಸುತ್ತ, ಬಸವತತ್ವ ಸ್ವಾಮಿಗಳನ್ನು ಹೊಡೆಯುವಂತೆ ತಮ್ಮ ಕಾರ್ಯಕರ್ತರಿಗೆ ಪ್ರಚೋದನೆ ನೀಡುವ ಕನೇರಿ ಸ್ವಾಮೀಜಿ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣದಲ್ಲಿ ಅ.24ರಿಂದ ʼಕಲ್ಯಾಣ ಪರ್ವʼ ರಜತ ಮಹೋತ್ಸವ

ವಿಶ್ವಗುರು ಬಸವಣ್ಣನವರ ತತ್ವ-ಸಿದ್ಧಾಂತಗಳು, ವಚನ ಸಾಹಿತ್ಯದ ಸಂದೇಶ ಹಾಗೂ ಶರಣರ ಸಮಾನತೆಯ...

‘ನೆಹರೂ–ಗಾಂಧಿ, ಯಾದವ್ ಕುಟುಂಬಗಳ ನಾಯಕತ್ವ ಬೇಡ’: ಒವೈಸಿ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ

ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು...

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...