ಬೀದರ್‌ | ಶಿಷ್ಟಾಚಾರ ಉಲ್ಲಂಘನೆ : ಡಿಎಚ್‌ಒ ಸೇರಿ ಇಬ್ಬರು ಅಧಿಕಾರಿಗಳು ಅಮಾನತು

Date:

ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಸರ್ಕಾರದ ಶಿಷ್ಟಾಚಾರ ನಿಯಮಗಳನ್ನು ಪಾಲಿಸುವಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನೀರಗುಡೆ ಹಾಗೂ ಬಸವಕಲ್ಯಾಣ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ ಮೈಲಾರೆ ಅವರನ್ನು ಅಮಾನತುಗೊಳಿಸಲಾಗಿದೆ.

- Advertisement -

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ PM-ABHIM ಯೋಜನೆಯಡಿ ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಸಂಬಂಧಿಸಿದ ಭೂಮಿಪೂಜೆ ಸಮಾರಂಭದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸುವಲ್ಲಿ ಹಾಗೂ ಶಿಷ್ಟಾಚಾರ ನಿಯಮಗಳನ್ನು ಪಾಲಿಸುವಲ್ಲಿ ಇಬ್ಬರೂ ಅಧಿಕಾರಿಗಳು ಕರ್ತವ್ಯ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಅಮಾನತು ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 10(1)(ಡಿ) ಅಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಹಾಗೂ ಶಿಸ್ತು ಪ್ರಾಧಿಕಾರಿ ಗುರುದತ್ತ ಹೆಗಡೆ ಅವರು ಸೆ.17ರಂದು ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇಬ್ಬರು ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪ, ಕರ್ತವ್ಯ ನಿರ್ಲಕ್ಷ್ಯ ಹಾಗೂ ಸರ್ಕಾರದ ಶಿಷ್ಟಾಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ಬಾಕಿ ಇರಿಸಲಾಗಿದೆ. ಅಮಾನತು ಅವಧಿಯಲ್ಲಿ ಜೀವನಾಂಶ ಭತ್ಯೆ ಪಡೆಯುವ ಉದ್ದೇಶಕ್ಕಾಗಿ ಡಾ.ಧ್ಯಾನೇಶ್ವರ ನೀರಗುಡೆ ಅವರ ಲೀನ್‌ ಅನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಹಾಗೂ ಡಾ.ಅಶೋಕ ಮೈಲಾರೆ ಅವರ ಲೀನ್‌ ಅನ್ನು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಖಾಲಿಯಿರುವ ಸಂಬಂಧಿತ ಹುದ್ದೆಗೆ ಸ್ಥಳಾಂತರಿಸಲಾಗಿದೆ.

WhatsApp Image 2026 09 17 at 6.40.49 AM 2
ಜಾಹೀರಾತು

ಇದನ್ನೂ ಓದಿ : ₹25 ಕೋಟಿ ವೆಚ್ಚದಲ್ಲಿ ಬೀದರ್ ಕೋಟೆ, ಪಾಪನಾಶ ಕೆರೆ ಅಭಿವೃದ್ಧಿ

ಅಮಾನತುಗೊಂಡ ಅಧಿಕಾರಿಗಳು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಅಮಾನತು ಅವಧಿಯಲ್ಲಿ ತಮ್ಮ ಕೇಂದ್ರ ಸ್ಥಾನವನ್ನು ತೊರೆಯಬಾರದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಒಂದೇ ಮತಗಟ್ಟೆಯಲ್ಲಿ ಶೇ. 62ರಷ್ಟು ಮತದಾರರ ಹೆಸರು ಡಿಲೀಟ್: ಚುನಾವಣಾ ಆಯೋಗಕ್ಕೆ ರಮೇಶ್ ಬಾಬು ದೂರು

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...

ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ....