ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಅಭಾವ ಹೆಚ್ಚಾಗಿರುವ ಮಧ್ಯೆ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ ಗ್ರಾಮದ ಎರಡು ಅಂಗನವಾಡಿ ಕೇಂದ್ರದಲ್ಲಿ 2 ಸಿಲಿಂಡರ್‌ಗಳು ಕಳ್ಳತನವಾಗಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೋಣೆಯಲ್ಲಿ ಎರಡು ಅಂಗನವಾಡಿ ಕೇಂದ್ರಗಳು ಒಂದೇ ಕಡೆ ಪ್ರತ್ಯೇಕವಾಗಿ ನಡೆಯುತ್ತಿದ್ದು, ಮಂಗಳವಾರ ರಾತ್ರಿ ಅಡುಗೆ ಕೋಣೆಯ ಬೀಗ ಮುರಿದು ಗ್ಯಾಸ್ ತುಂಬಿದ್ದ 2 ಸಿಲಿಂಡರ್‌ಗಳನ್ನು ಕಳ್ಳತನ ಮಾಡಿ, ಖದೀಮರು ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಕೇಂದ್ರಕ್ಕೆ ಬಂದಾಗ ಅಡುಗೆ ಕೋಣೆಯ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ. ಒಳಗೆ ಹೋಗಿ ನೋಡಿದಾಗ ಸಿಲಿಂಡರ್ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಭಾಲ್ಕಿ ತಾಲೂಕಿನ ಕೇಸರಜವಳಗಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಕೋಣೆಯ ಬೀಗ ಮುರಿದು ಒಂದು ಸಿಲಿಂಡರ್ ಕಳ್ಳತನವಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಬೀದರ್ | ಅಪರಾಧ ಕೃತ್ಯದಲ್ಲಿ ಭಾಗಿ : ಮತ್ತೆ ಇಬ್ಬರಿಗೆ ಗಡಿಪಾರು
ಪ್ರತ್ಯೇಕ ಘಟನೆ ಮೆಹಕರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕಳ್ಳರ ಪತ್ತೆಗೆ ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸುತ್ತಿದ್ದಾರೆ.




