ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಸವಲಿಂಗ ಸ್ವಾಮೀಜಿ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಪ್ರಾದೇಶಿಕ ಅರಣ್ಯ ವಲಯ, ಭಾಲ್ಕಿ ಹಾಗೂ ತಳವಾಡ(ಕೆ) ಚನ್ನಬಸವೇಶ್ವರ ಗುರುಕುಲ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
“ಪ್ರಕೃತಿಯ ಸಮತೋಲನವನ್ನು ಕಾಪಾಡಲು ಹಾಗೂ ಮುಂದಿನ ಪೀಳಿಗೆಗೆ ಸುಂದರ ಭೂಮಿಯನ್ನು ಉಡುಗೊರೆಯಾಗಿ ನೀಡಲು ವನ್ಯಜೀವಿಗಳ ರಕ್ಷಣೆ ಅತ್ಯಂತ ಅಗತ್ಯವಾಗಿದೆ. ಪರಿಸರ ಮತ್ತು ಜೀವವೈವಿಧ್ಯ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಪಾಲ್ಗೊಳ್ಳಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ಎಸ್., ವಲಯ ಅರಣ್ಯಾಧಿಕಾರಿ ಸಚಿನ್ ಪಾಟೀಲ್, ವಿವೇಕಾನಂದ ಬಿ., ಸೋಪಾನ, ಅಂಬಾದಾಸ, ಅಲಿಸಾಬ, ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಕಿರಣ ಸಜ್ಜನಶೆಟ್ಟಿ ಹಾಗೂ ಉಪ ಪ್ರಾಚಾರ್ಯ ಸುಧಾಕರ ಬಿರಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ : ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ
ಇದೇ ಸಂದರ್ಭದಲ್ಲಿ ವನ್ಯಜೀವಿ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ರಾಣಿ ಪಾಟೀಲ್ ನಿರೂಪಿಸಿದರು. ಮಹಾಲಿಂಗ ಖಂಡ್ರೆ ವಂದಿಸಿದರು.





