ಭಾಲ್ಕಿ ತಾಲೂಕಿನ ಗೊಂಡ (ಕುರುಬ) ನೌಕರರ ಸಂಘದ ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಶೈಕ್ಷಣಿಕ ಸಾಧನೆ ಮಾಡಿದ ಗೊಂಡ (ಕುರುಬ) ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ತಾಲೂಕಿನ ಗೊಂಡ (ಕುರುಬ) ಸಮಾಜದ ಅರ್ಹ ವಿದ್ಯಾರ್ಥಿಗಳು ಜೂನ್ 25 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಗೊಂಡ (ಕುರುಬ) ನೌಕರರ ಸಂಘದ ಅಧ್ಯಕ್ಷ ಅರ್ಜುನ ಸೂರ್ಯವಂಶಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ದೃಢೀಕೃತ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ ಕಾರ್ಡ್ ಹಾಗೂ ಇತ್ತೀಚಿನ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಲಗತ್ತಿಸಿ, ಪಾಟೀಲ ಆಸ್ಪತ್ರೆಯ ಹಿಂಭಾಗ, ಹೊಸ ಸರಾಫ್ ಬಜಾರ್‌ನಲ್ಲಿರುವ ಗೊಂಡ (ಕುರುಬ) ನೌಕರರ ಬ್ಯಾಂಕನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬೇಕು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಸೋರುವ ಕೊಠಡಿ, ಶಿಕ್ಷಕರ ಕೊರತೆ : ಆತಂಕದಲ್ಲಿ ಮಕ್ಕಳ ಕಲಿಕೆ!
ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೋಂದಣಿಗಾಗಿ ಸಂಘದ ಅಧ್ಯಕ್ಷ ಅರ್ಜುನ ಸೂರ್ಯವಂಶಿ (ಮೊ. 9741906754) ಹಾಗೂ ಕಾರ್ಯದರ್ಶಿ ಆನಂದ ಹಳೆಂಬರ (ಮೊ. 9620036706) ಅವರನ್ನು ಸಂಪರ್ಕಿಸಬಹುದು, ಮೊಬೈಲ್ ನಂಬರಗೆ ವಾಟ್ಸಾಪ್ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




