ಭಾಲ್ಕಿ | ಪರೀಕ್ಷೆ ಹಬ್ಬದಂತೆ ಸಂಭ್ರಮಿಸಿ : ಸಿ.ಜಿ.ಹಳ್ಳದ

Date:

ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಭಯವಿಲ್ಲದೆ, ಹಬ್ಬದಂತೆ ಸಂಭ್ರಮದಿಂದ ಆತ್ಮವಿಶ್ವಾಸದೊಂದಿಗೆ ಎದುರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ ಹೇಳಿದರು.

- Advertisement -

ಭಾಲ್ಕಿ ಪಟ್ಟಣದ ಪುರಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ 90+ ಶೇಕಡಾ ಫಲಿತಾಂಶ ಸಾಧಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

‘ಕಳೆದ ಸಾಲಿನಲ್ಲಿ ಜಿಲ್ಲೆಗೆ ಭಾಲ್ಕಿ ಪ್ರಥಮ ಸ್ಥಾನ ಪಡೆದರೂ 72 ಶೇಕಡಾ ಫಲಿತಾಂಶ ಮಾತ್ರ ಲಭಿಸಿತ್ತು. ಈ ವರ್ಷ ಶೇ90ಕ್ಕೂ ಹೆಚ್ಚು ಫಲಿತಾಂಶಕ್ಕಾಗಿ ಎಲ್ಲರೂ ಶ್ರಮಿಸಬೇಕು ‘ಎಂದು ಕರೆ ನೀಡಿದರು.

ನಿವೃತ್ತ ಮುಖ್ಯ ಶಿಕ್ಷಕ ಜಯರಾಜ್ ಧಾಬಶೆಟ್ಟಿ ಮಾತನಾಡಿ, ‘ವಿದ್ಯಾರ್ಥಿಗಳು ಓದು, ಬರವಣಿಗೆ, ಆಲಿಕೆ ಹಾಗೂ ಮಾತನಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಪಾಲಕರು ಮಕ್ಕಳನ್ನು ಮೊಬೈಲ್ ಮತ್ತು ಟಿವಿಯಿಂದ ದೂರವಿಡಬೇಕು’ ಎಂದರು.

ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ದತ್ತು ಕಾಟಕರ ಮಾತನಾಡಿ, ‘ಎಸ್.ಎಸ್.ಎಲ್.ಸಿ ಜೀವನದ ಮಹತ್ವದ ಘಟ್ಟವಾಗಿದ್ದು ಸಮಯ ಪಾಲನೆ ಅತಿ ಮುಖ್ಯ’ ಎಂದು ತಿಳಿಸಿದರು.

ನೋಡಲ್ ಅಧಿಕಾರಿ ಮಲ್ಲಿಕಾರ್ಜುನ್ ಕನ್ನಾಳೆ, ವಿಷಯ ಸಂಪನ್ಮೂಲ ವ್ಯಕ್ತಿ ಶಾಂತಿ ದೇಸಾಯಿ ಅವರು ಪರೀಕ್ಷೆ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲಿನಾಥ ಸಜ್ಜನ್, ಶಿಕ್ಷಕ ವಿಜಯಕುಮಾರ್ ಗೌಡಗಾಂವೆ, ಸಿ.ಆರ್.ಪಿ. ಚನ್ನಪ್ಪ ಸೇರಿದಂತೆ ಭಾಲ್ಕಿ ವಲಯದ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...

ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ...