ಭಾಲ್ಕಿ | ಶಿಕ್ಷಕರ ನೇಮಕಾತಿ ಸಿಇಟಿ ಕರಡು ನಿಯಮ ಪರಿಷ್ಕರಣೆಗೆ ಒತ್ತಾಯ

Date:

ಕರ್ನಾಟಕ ಸರ್ಕಾರವು ಶಿಕ್ಷಕರ ನೇಮಕಾತಿಗಾಗಿ ಪ್ರಸ್ತಾಪಿಸಿರುವ ಸಿಇಟಿ ಕರಡು ಅಧಿಸೂಚನೆಯಲ್ಲಿನ ಕೆಲವು ಕಠಿಣ ಷರತ್ತುಗಳನ್ನು ಪರಿಷ್ಕರಿಸಿ, ಎಲ್ಲ ಅರ್ಹ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸುವಂತೆ ಶಿಕ್ಷಕರ ಸಂಘ ಒತ್ತಾಯಿಸಿದೆ.

- Advertisement -

ಈ ಸಂಬಂಧ ಕರ್ನಾಟಕ ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ರಾಜ್ಯ ಭಾಷಾ ಅಲ್ಪಸಂಖ್ಯಾತ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದಿಂದ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ತಹಸೀಲ್ದಾರ್‌ ಮುಖಾಂತರ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಕರಡು ನಿಯಮಗಳಲ್ಲಿರುವ ಕೆಲವು ಷರತ್ತುಗಳು ಮರಾಠಿ, ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಹಾಗೂ ಗ್ರಾಮೀಣ ಹಿನ್ನೆಲೆಯ ಅಭ್ಯರ್ಥಿಗಳಿಗೆ ಅನ್ಯಾಯವಾಗುವ ಸಾಧ್ಯತೆ ಇದೆ. ಸಂವಿಧಾನದ 14, 16, 21-ಎ, 29 ಹಾಗೂ 30ನೇ ವಿಧಿಗಳ ಆಶಯಕ್ಕೆ ಅನುಗುಣವಾಗಿ ಎಲ್ಲ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸುವಂತೆ ಅಂತಿಮ ಅಧಿಸೂಚನೆಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು” ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

“ಸಿಇಟಿ ಪರೀಕ್ಷೆಯನ್ನು ಅಲ್ಪಸಂಖ್ಯಾತ ಭಾಷೆಗಳಲ್ಲಿಯೂ ನಡೆಸುವುದು, ಪಿಯುಸಿ ಅಂಕಗಳನ್ನು ಅರ್ಹತಾ ಮಾನದಂಡದಿಂದ ಕೈಬಿಡುವುದು, ವಯೋಮಿತಿಯನ್ನು 5 ವರ್ಷಗಳಷ್ಟು ಹೆಚ್ಚಿಸುವುದು, ಭಾಷಾ ವಿಷಯದ ಕಡ್ಡಾಯ ಕನಿಷ್ಠ ಅಂಕಗಳ ಷರತ್ತನ್ನು ತೆಗೆದುಹಾಕುವುದು, ಟಿಇಟಿ, ಸಿಇಟಿ, ಪಿಯುಸಿ, ಪದವಿ ಹಾಗೂ ಡಿ.ಇಡ್‌/ ಬಿ,ಇಡ್ ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸುವುದು ಹಾಗೂ ಯುಜಿಸಿ ಮಾನ್ಯತೆ ಪಡೆದ ಯಶವಂತರಾವ್ ಚವ್ಹಾಣ ಮುಕ್ತ ವಿಶ್ವವಿದ್ಯಾಲಯದ ಅಭ್ಯರ್ಥಿಗಳಿಗೆ ನ್ಯಾಯಸಮ್ಮತ ಅವಕಾಶ ಕಲ್ಪಿಸುವಂತೆ ಪ್ರಮುಖ ಬೇಡಿಕೆಗಳನ್ನು ಮಂಡಿಸಲಾಗಿದೆ.

ಕರಡು ಅಧಿಸೂಚನೆಯಲ್ಲಿನ ಕಠಿಣ ಷರತ್ತುಗಳನ್ನು ಯಥಾವತ್ತಾಗಿ ಜಾರಿಗೊಳಿಸಿದರೆ ಸಾವಿರಾರು ಅರ್ಹ, ಬಡ ಹಾಗೂ ಗ್ರಾಮೀಣ ಅಭ್ಯರ್ಥಿಗಳು ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ಸರ್ಕಾರವು ಕರಡು ನಿಯಮಗಳನ್ನು ಮರುಪರಿಶೀಲಿಸಿ ನ್ಯಾಯಸಮ್ಮತ ಹಾಗೂ ಸಮಾನ ಅವಕಾಶ ಕಲ್ಪಿಸುವ ಪರಿಷ್ಕೃತ ಅಂತಿಮ ಅಧಿಸೂಚನೆಯನ್ನು ಹೊರಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಬ್ರಿಮ್ಸ್‌ನಲ್ಲಿ ʼಮಮತೆಯ ತೊಟ್ಟಿಲುʼ ಉದ್ಘಾಟಿಸಿದ ಡಿಸಿ ಶಿಲ್ಪಾ ಶರ್ಮಾ

ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ದತ್ತಾತ್ರಿ ಕಾಟಕರ, ಡಾ.ಉದ್ದವ ಕನ್ಸೆ, ಡಾ.ಗುಂಡೆರಾವ ಶೇಡೋಳೆ, ಡಾ.ಶರದ ತುಕದೆ, ಉದಯಕಾಂತ ಹೆಂಬಾಡೆ, ತುಕರಾಮ ಮೊರೆ, ಸಂತೋಷ ಬಿರಾದಾರ, ಸಹದೇವ ಗೌಡಗಾಂವೆ, ಅಶೋಕ ಮಲ್ಲೇಶಿ, ವಿನಾಯಕ ನಿಟ್ಟೂರೆ, ಶಿವಾಜಿ ಬಿರಾದಾರ, ದಿಲೀಪ ಬಿರಾದಾರ, ಸಂಜು ಬಿರಾದಾರ, ಸುಧಾಕರ ಗಾಯಕವಾಡ, ಸತ್ಯವಾನ ಕಾಂಬಳೆ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...