ಭಾಲ್ಕಿ | ವಿವಿಧೆಡೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ: ಎಸ್‌ಐಆರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಸೂಚನೆ

Date:

ಭಾಲ್ಕಿ ನಗರ ಸೇರಿದಂತೆ ತಾಲೂಕಿನ ಗಡಿಭಾಗದ ವಿವಿಧ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಭೇಟಿ ನೀಡಿ, ಮತದಾರರ ಸಮಗ್ರ ಪಟ್ಟಿಯ ತೀವ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿದರು.

- Advertisement -

ಕೊಂಗಳಿ ಹಾಗೂ ವಾಂಜರಖೇಡ ಗ್ರಾಮದ ಮತಗಟ್ಟೆಗಳಿಗೆ ಭೇಟಿ ನೀಡಿದ ಅವರು, ಮತಗಟ್ಟೆ ಅಧಿಕಾರಿಗಳಿಂದ ಎಸ್‌ಐಆರ್ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ಭಾಲ್ಕಿ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕ್ಷೇತ್ರದಲ್ಲಿ ಎಸ್‌ಐಆರ್ ಕಾರ್ಯವನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಈ ವೇಳೆ ಡಿಸಿ ಶಿಲ್ಪಾ ಶರ್ಮಾ ಅವರು ಮಾತನಾಡಿ, “ಮತಗಟ್ಟೆ ಅಧಿಕಾರಿಗಳು ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸಿ, ಶೀಘ್ರದಲ್ಲಿಯೇ ಶೇ 100ರಷ್ಟು ಪ್ರಗತಿ ಸಾಧಿಸಬೇಕು. ಪ್ರತಿಯೊಬ್ಬ ಅರ್ಹ ಮತದಾರರಿಗೂ ನಮೂನೆಗಳು ತಲುಪುವಂತೆ ನೋಡಿಕೊಳ್ಳಬೇಕು. ಯಾವುದೇ ಅರ್ಹ ವ್ಯಕ್ತಿಯ ಹೆಸರು ಮತಪಟ್ಟಿಯಿಂದ ಕೈತಪ್ಪದಂತೆ ಎಚ್ಚರ ವಹಿಸಬೇಕು. ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆ ಕಾಪಾಡುವ ಉದ್ದೇಶದಿಂದ ಪರಿಷ್ಕರಣೆ ಪ್ರಕ್ರಿಯೆಯ ಪ್ರತಿಯೊಂದು ಹಂತದ ಮಾಹಿತಿಯನ್ನು ಅಧಿಕೃತವಾಗಿ ಹಂಚಿಕೊಳ್ಳಬೇಕು” ಎಂದು ತಿಳಿಸಿದರು.

WhatsApp Image 2026 07 22 at 7.33.29 PM

ಭಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಉತ್ತಮ ಪ್ರಗತಿಯಲ್ಲಿದೆ. ಈಗಾಗಲೇ ಶೇ 80ರಷ್ಟು ಪರಿಷ್ಕರಣೆ ಪೂರ್ಣಗೊಂಡಿದ್ದು, ಹಲವು ಮತಗಟ್ಟೆಗಳು ಶೇ 100ರಷ್ಟು ಸಾಧನೆ ಮಾಡಿವೆ. ಉಳಿದ ಎಸ್‌ಐಆರ್ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಿ, ಎಲ್ಲ ಅರ್ಹ ಮತದಾರರ ಹೆಸರು ಮತಪಟ್ಟಿಯಲ್ಲಿ ಇರುವಂತೆ ಅಧಿಕಾರಿಗಳು ಖಚಿತಪಡಿಸಬೇಕು ಎಂದರು.

ಸಭೆಯಲ್ಲಿ ಜುಲೈ 1ರಿಂದ ರಾಜ್ಯದಲ್ಲಿ ಜಾರಿಗೊಂಡಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಯೋಜನೆ ಕುರಿತು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದರು. ಗ್ರಾಮೀಣ ಬಡ ಕಾರ್ಮಿಕರು ಉದ್ಯೋಗಕ್ಕಾಗಿ ನಗರಗಳಿಗೆ ವಲಸೆ ಹೋಗದಂತೆ ಯೋಜನೆಯಡಿ ಎನ್‌ಎಂಆರ್ ಸೃಜಿಸಿ, ಗ್ರಾಮದಲ್ಲಿಯೇ ಕೂಲಿ ಕೆಲಸ ಒದಗಿಸುವಂತೆ ಗ್ರಾಮ ಪಂಚಾಯತ್‌ ಅಧಿಕಾರಿ, ಸಿಬ್ಬಂದಿಗೆ ಸೂಚಿಸಿದರು.

ಇದನ್ನೂ ಓದಿ : ಬೀದರ್‌ | ರೈತರ ಸಾಲ ಮನ್ನಾ, ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹಿಸಿ ಕನ್ನಡ ಸೇನೆ ಪ್ರತಿಭಟನೆ

ಈ ಸಂದರ್ಭದಲ್ಲಿ ಭಾಲ್ಕಿ ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೆರೆ, ಮತದಾರರ ನೋಂದಣಾಧಿಕಾರಿ ಶಂಕರ ಖಡಿ, ಸಂಜುಕುಮಾರ ಭೈರೆ, ಅಹ್ಮದ್ ಮುಲ್ಲಾ, ನವನಾಥ ಬೋಲ್ಸುರೆ, ಶ್ರೀನಾಥ್, ವಿದ್ಯಾಸಾಗರ ಕಾಂಬಳೆ, ನಂದಿಕಿಶೋರ್ ಮುಳೆ, ವಹೀದ್, ಶ್ರೀಕಾಂತ್ ಪಾಟೀಲ್ ಸೇರಿದಂತೆ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...