ಭಾಲ್ಕಿ | ಮಕ್ಕಳಲ್ಲಿ ಶಿಕ್ಷಣದ ಜತೆಗೆ ಸಂಸ್ಕಾರ ಬೆಳೆಸಿ

Date:

ಮಕ್ಕಳನ್ನು ಬಾಲ್ಯದಿಂದಲೇ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಬೆಳೆಸಿ ದೇಶದ ಉತ್ತಮ ನಾಗರಿಕರನ್ನಾಗಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.

- Advertisement -

ಭಾಲ್ಕಿ ಪಟ್ಟಣದ ಲೆಕ್ಚರ್ ಕಾಲೋನಿಯ ಖಡಕೇಶ್ವರ ಪ್ರೌಢ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಅಂತರ ಶಾಲಾಮಟ್ಟದ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮದ  ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿ, ʼಕಳೆದ ಮುರ್ನಾಲ್ಕು ದಶಕಗಳಿಂದ ಖಡಕೇಶ್ವರ ಶಿಕ್ಷಣ ಸಂಸ್ಥೆ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ಉತ್ತಮ ಸಂಸ್ಕಾರ, ಶಿಸ್ತು ಮತ್ತು ಬದ್ಧತೆ ಮೂಲಕ ವಿಶಿಷ್ಟ ಶಿಕ್ಷಣ ನೀಡುತ್ತಿದೆ. ದೇಶದ ಭವಿಷ್ಯ ಆಗಿರುವ ಮಕ್ಕಳಲ್ಲಿ ಅದ್ಭುತ ಶಕ್ತಿ ಅಡಗಿರುತ್ತದೆ ಅದನ್ನು ಗುರುತಿಸುವ ಕೆಲಸ ಆಗಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ʼವಿದ್ಯಾರ್ಥಿಗಳು ಶರೀರ, ಮನಸ್ಸು ಮತ್ತು ಆತ್ಮವನ್ನು ಶುದ್ಧವಾಗಿರಿಸಿಕೊಂಡರೆ ಬದುಕು ಸುಂದರವಾಗಿ ರೂಪಗೊಳ್ಳಲು ಸಾಧ್ಯವಾಗುತ್ತದೆ. ಓದಿನ ಜತೆಗೆ ಒಂದಿಷ್ಟು ಸಮಯ ಪೂಜೆ, ಜಪ, ಧ್ಯಾನಕ್ಕೆ ಮೀಸಲಿಡಿರುವುದರಿಂದ ದೈವಿ ಶಕ್ತಿ ಹೆಚ್ಚಿಸುತ್ತದೆ. 
ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ದಡ್ಡರಾಗಿರುವುದಿಲ್ಲ. ಶಿಕ್ಷಕರಾದವರೂ ಅವರಲ್ಲಿನ ಪ್ರತಿಭೆಯನ್ನು ಪತ್ತೆ ಹಚ್ಚುವ ಕೆಲಸ ಮಾಡಬೇಕುʼ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ ಮಾತನಾಡಿ, ʼಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ರಸಪ್ರಶ್ನೆ ಸ್ಪರ್ಧೆ ಅತ್ಯಂತ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಸ್ಮಾರ್ಟ್ವರ್ಕ್ ಮೂಲಕ ಕಲಿಕೆಯ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು.  ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಆರಂಭಕ್ಕೆ ದಿನಗಣನೇ ಶುರುವಾಗಿದ್ದು ವಿದ್ಯಾರ್ಥಿಗಳು ಮೊಬೈಲ್, ಟಿವಿ ನೋಡುವುದನ್ನು ಕಡಿಮೆ ಮಾಡಿ ಓದಿನ ಕಡೆಗೆ ಹೆಚ್ಚಿನ ಗಮನ ನೀಡಿ ಪರೀಕ್ಷೆಯನ್ನು ಭಯಮುಕ್ತರಾಗಿ ಎದುರಿಸಿ ತಾಲೂಕಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಬೇಕುʼ ಎಂದು ತಿಳಿಸಿದರು.

ಮುಖ್ಯಗುರು ಆನಂದ ಕಲ್ಯಾಣೆ ಮಾತನಾಡಿ, ʼಮಕ್ಕಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಭಯ ಹೋಗಲಾಡಿಸುವ ಆಶಯದೊಂದಿಗೆ ಕಳೆದ ಐದು ವರ್ಷಗಳಿಂದ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗುತ್ತಿದೆ. ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಗುತ್ತದೆʼ ಎಂದರು.

ಸಂಸ್ಥೆಯ ಕೋಶಾಧ್ಯಕ್ಷ ಪ್ರಭುರಾಜ ಧೂಪೆ, ನಿರ್ದೇಶಕ ಅಶೋಕ ಲೋಖಂಡೆ, ಸಾಫ್ಟ್ವೇರ್ ಎಂಜಿನಿಯರ್ ಮಹಾದೇವ ಜ್ಯೋತೆಪ್ಪ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಸುಧೀರ ನಾಯಕ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ : ಪಾಪನಾಶ ದೇವಸ್ಥಾನ ಅಭಿವೃದ್ಧಿಗೆ ಈಶ್ವರ-ಸಾಗರ ಖಂಡ್ರೆ ಕೊಡುಗೆ ಶೂನ್ಯ : ಭಗವಂತ ಖೂಬಾ

ಸಿಆರ್‌ಪಿ ಪ್ರಭು ಡಿಗ್ಗೆ, ಶಿಕ್ಷಕರಾದ ಉದಯಕುಮಾರ ಜೋಶಿ, ಪ್ರಕಾಶ ರುದನೂರೆ, ಅಂಜಲಿ ಜೋಶಿ, ಶುಭಂ ರಾಯವಾಡೆ ಇದ್ದರು. ಮುಖ್ಯಗುರು ಆನಂದ ಕಲ್ಯಾಣೆ ಸ್ವಾಗತಿಸಿದರು. ದಿಲೀಪ ಘಂಟೆ ನಿರೂಪಿಸಿದರು. ಜಯಪ್ರಕಾಶ ಸಹಾನೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು...

ಬೀದರ್‌ | ಐತಿಹಾಸಿಕ ಕರೇಜ್ ಅಭಿವೃದ್ಧಿಗೆ ಬುಡಾ ಕೈಜೋಡಿಸಲಿ

ಬೀದರ್‌ ನಗರದಲ್ಲಿರುವ ಐತಿಹಾಸಿಕ ಕರೇಜ್ ಜಲವ್ಯವಸ್ಥೆಯನ್ನು ಸಂರಕ್ಷಿಸಿ, ಅಂತರ್ಜಲ ಮರುಪೂರಣ ಹಾಗೂ...

ಬೀದರ್‌ | ʼಯುವ ಸೌರಭʼ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭೆ ಅನಾವರಣ

ವಿದ್ಯಾರ್ಥಿಗಳಲ್ಲಿರುವ  ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ....

ಬಸವಕಲ್ಯಾಣ | ಕಿಟ್ಟಾ ಗ್ರಾಮದ 20 ಬಡ ಕುಟುಂಬಗಳಿಗೆ ನಿವೇಶನ ನೀಡಲು ಆಗ್ರಹ

ಬಸವಕಲ್ಯಾಣ ತಾಲ್ಲೂಕಿನ ಕಿಟ್ಟಾ ಗ್ರಾಮದ ಸರ್ವೆ ನಂ. 249ರಲ್ಲಿ ಸುಮಾರು 20...