ಭಾಲ್ಕಿ | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಲಾಠಿ ಜಾರ್ಜ್‌ ಖಂಡಿಸಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

Date:

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಎನ್‌ಎಸ್‌ಯುಐ (ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ) ಭಾಲ್ಕಿ ತಾಲೂಕು ಘಟಕದ ನೇತೃತ್ವದಲ್ಲಿ ಶುಕ್ರವಾರ ಭಾಲ್ಕಿ ನಗರದಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ವಿವಿಧ ಕಾಲೇಜುಗಳ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಸೇರಿದರು. ಅಲ್ಲಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ತಹಸೀಲ್ದಾರ್ ಕಚೇರಿವರೆಗೆ ನಡೆಯಿತು. ಮೆರವಣಿಗೆ ಉದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳು ಮೊಳಗಿದವು. ಬಳಿಕ ರಾಷ್ಟ್ರಪತಿಯವರ ಹೆಸರಿಗೆ ಬರೆದ ಮನವಿಯನ್ನು ಗ್ರೇಡ್–2 ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

‌ವಿದ್ಯಾರ್ಥಿ ಮುಖಂಡರು ಮಾತನಾಡಿ, “ದೇಶದ ವೈದ್ಯಕೀಯ ಶಿಕ್ಷಣ ಪ್ರವೇಶದ ಪ್ರಮುಖ ಪರೀಕ್ಷೆಯಾಗಿರುವ ನೀಟ್‌ಗೆ ಲಕ್ಷಾಂತರ ವಿದ್ಯಾರ್ಥಿಗಳು ಅಪಾರ ಶ್ರಮವಹಿಸಿ ಸಿದ್ಧತೆ ನಡೆಸುತ್ತಾರೆ. ಆದರೆ, ಪದೇ ಪದೇ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ನ್ಯಾಯಸಮ್ಮತತೆಯನ್ನು ಹಾಳು ಮಾಡಿವೆ. ಇದರಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡಕ್ಕೆ ಸಿಲುಕಿ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿಯುತ್ತಿದೆ” ಎಂದು ಹೇಳಿದರು.

WhatsApp Image 2026 07 24 at 6.52.27 PM

“ನೀಟ್‌ ಪರೀಕ್ಷಾ ಅಕ್ರಮದ ಕುರಿತು ನ್ಯಾಯಸಮ್ಮತ, ಪಾರದರ್ಶಕ ಹಾಗೂ ಕಾಲಮಿತಿಯೊಳಗಿನ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ನೀಟ್‌ ಪರೀಕ್ಷಾ ಅಕ್ರಮ ತಡೆಗಟ್ಟುವಲ್ಲಿ ವಿಫಲರಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದರು.

“ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ದೆಹಲಿ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದು ತೀವ್ರ ಖಂಡನೀಯ. ಪ್ರಜಾಪ್ರಭುತ್ವದಲ್ಲಿ ನ್ಯಾಯಕ್ಕಾಗಿ ಹೋರಾಡುವ ವಿದ್ಯಾರ್ಥಿಗಳ ಧ್ವನಿಯನ್ನು ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಒಪ್ಪಲಾಗದು. ನೀಟ್ ಪ್ರಶ್ನೆ ಪತ್ರಿಕಾ ಸೋರಿಕೆಯಾದ ಕಾರಣಕ್ಕೆ 20ಕ್ಕೂ ಅಧಿಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬಗಳಿಗೆ ನ್ಯಾಯ ಹಾಗೂ ಸೂಕ್ತ ಪರಿಹಾರ ಒದಗಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ : ವಿದ್ಯಾರ್ಥಿಗಳೇನೋ ಬೀದಿಯಲ್ಲಿದ್ದಾರೆ; ವಿಶ್ವದ ನಂ.1 ವಿದ್ಯಾರ್ಥಿ ಸಂಘಟನೆ ABVP ಎಲ್ಲಿದೆ?

ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ತಾಲೂಕು ಘಟಕ ಅಧ್ಯಕ್ಷ ಗಣೇಶ, ಉಪಾಧ್ಯಕ್ಷ ಅಜಯ ಟೊಣ್ಣೆ, ಕಾರ್ಯದರ್ಶಿ ರೋಹನ್ ಸಿಂಧೆ, ಜಿಲ್ಲಾ ಉಪಾಧ್ಯಕ್ಷ ಮಹಾದೇವ ಧುಮಾಳೆ, ಚೇತನ್ ಬಿರಾದರ್, ರಾಹುಲ್ ಮೇತ್ರೆ, ಶಿವಕುಮಾರ ರಾಜಭವನ, ಶಿವಕುಮಾರ ಮಡಿವಾಳ, ಗಜಾನಂದ ಚಳಕಾಪುರ, ಕನಕ ಬಿರಾದರ್‌, ಜಯಪಾಲ್‌ ಬೋರಾಳೆ, ಮಹಾಂತೇಶ ಮಾಂಜ್ರೆ ಸೇರಿದಂತೆ ಎನ್‌ಎಸ್‌ಯುಐ ಪದಾಧಿಕಾರಿಗಳು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

WhatsApp Image 2026 07 24 at 6.50.19 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...