ಭಾಲ್ಕಿ | ಮಹಿಳೆಯರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

Date:

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಸಮುಚ್ಛಯದಲ್ಲಿ ವಿದ್ಯಾರ್ಥಿಗಳು ರಕ್ಷಾ ಬಂಧನ ಅತ್ಯಂತ
ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು.

- Advertisement -

ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ದಿವ್ಯ ಸಾನ್ನಿಧ್ಯದಲ್ಲಿ ಶುಕ್ರವಾರ ನಡೆದ ರಕ್ಷಾ ಬಂಧನ
ಕಾರ್ಯಕ್ರಮಕ್ಕೆ ಸಾವಿರಾರೂ ವಿದ್ಯಾರ್ಥಿಗಳು ಸಾಕ್ಷಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ವಿದ್ಯಾರ್ಥಿನಿಯರು ಸಾಲಿನಲ್ಲಿ ನಿಂತು ವಿದ್ಯಾರ್ಥಿಗಳಿಗೆ ಮುಂಗೈಗೆ ಪವಿತ್ರ ರಾಖಿ ಕಟ್ಟಿ, ಸಿಹಿ ತಿನ್ನಿಸಿ ಶುಭ ಕೋರಿದರು. ವಿದ್ಯಾರ್ಥಿಗಳು ಕೂಡ ವಿದ್ಯಾರ್ಥಿನಿಯರಿಗೆ ಪಾದಗಳಿಗೆ ನಮಸ್ಕರಿಸಿ ಕೃತಜ್ಞತೆ ಸಲ್ಲಿಸಿದರು.

ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, “ರಕ್ಷಾ ಬಂಧನವು ಕೇವಲ ಅಣ್ಣ-ತಂಗಿಯರ ಹಬ್ಬ ಮಾತ್ರವಲ್ಲ, ಅದು ಇಡೀ ಸಮಾಜಕ್ಕೆ ಸುರಕ್ಷತೆ, ಸದಾಚಾರ ಮತ್ತು ಆಧ್ಯಾತ್ಮಿಕ ರಕ್ಷಣೆಯನ್ನು ನೀಡುವ ಒಂದು ಪವಿತ್ರ ಸಂಕಲ್ಪವಾಗಿದೆ. ಜಾತಿ, ಮತ ಭೇದವಿಲ್ಲದೆ ಇಡೀ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹೋದರತ್ವವನ್ನು ಮೂಡಿಸುವುದೇ ಇದರ ಮುಖ್ಯ ಉದ್ದೇಶ” ಎಂದರು.

WhatsApp Image 2026 08 28 at 6.40.59 PM

“ಸಮಾಜದಲ್ಲಿ ಪರಸ್ಪರ ಗೌರವ, ಪ್ರೀತಿ ಮತ್ತು ಸೋದರತ್ವವನ್ನು ಬೆಳೆಸುವ ಪವಿತ್ರ ಆಚರಣೆಯಾಗಿದೆ. ಪ್ರತಿಯೊಬ್ಬ ಮಹಿಳೆಯನ್ನು ಗೌರವದಿಂದ ಕಾಣುವುದು ಮತ್ತು ಅವರಿಗೆ ರಕ್ಷಣೆ ನೀಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂಬುದನ್ನು ಈ ಹಬ್ಬ ನಮಗೆ ನೆನಪಿಸುತ್ತದೆ” ಎಂದು ತಿಳಿಸಿದರು.

ಇದನ್ನೂ ಓದಿ : ವಚನ ಕಲ್ಯಾಣ | ಮಾಡುವ ಮಾಟವಿಲ್ಲದೆ ಮಾತಿಂಗೆ ಮಾತಾಡುವುದು ಅದೇತರ ಪೂಜೆ?

ಸಂಸ್ಥೆಯ ಮೇಲ್ವಿಚಾರಕಿ ಜಯಕ್ಕ ಗಾಂವಕರ್ ಪ್ರಾರ್ಥನೆ ಗೀತೆ ನಡೆಸಿ ಕೊಟ್ಟರು. ವಿದ್ಯಾರ್ಥಿಗಳು ಬಸವ ಗುರುವಿನ ಪೂಜೆ ನೆರವೇರಿಸಿದರು. ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...