ಭಾಲ್ಕಿ | ದೇಶಕ್ಕೆ ಅನ್ನ ನೀಡುವ ರೈತನ ಪರಿಸ್ಥಿತಿ ಕಷ್ಟಕರ : ಇಳಕಲ್ ಶ್ರೀ

Date:

ʼಕೃಷಿ ನಮ್ಮ ಮೂಲ ಸಂಸ್ಕೃತಿಯಾಗಿದೆ. ಅದನ್ನು ಮರೆತಿರುವುದರಿಂದ ನಮ್ಮ ಬಾಳಿನಲ್ಲಿ ಅನೇಕ ಸಮಸ್ಯೆಗಳು ಉಂಟಾಗುತ್ತಿವೆ. ದೇಶಕ್ಕೆ ಅನ್ನ ನೀಡುವ ರೈತನ ಪರಿಸ್ಥಿತಿ ಅತ್ಯಂತ ಕಷ್ಟಕರವಾಗಿದೆ. ಇತ್ತೀಚಿನ ದಿನಮಾನಗಳಲ್ಲಿ
ರೈತನಿಗೆ ಹೆಣ್ಣು ಸಿಗುವುದು ಬಹಳ ಅಪರೂಪವಾಗಿದೆ ಎಂದು ಇಳಕಲ್ ಚಿತ್ತರಗಿ ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ ಹೇಳಿದರು.

- Advertisement -

ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ-2026, ಡಾ.ಚನ್ನಬಸವ ಪಟ್ಟದ್ದೇವರ 27ನೆಯ ಸ್ಮರಣೋತ್ಸವ ಮತ್ತು ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ತ ಹಿರೇಮಠ ಸಂಸ್ಥಾನ ಮತ್ತು ಅಮೃತ ಮಹೋತ್ಸವ ಸಮಿತಿಯಿಂದ ಬುಧವಾರ ಆಯೋಜಿಸಿದ್ದ ಸಾಧಕ ರೈತರ ಸನ್ಮಾನ
ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ...

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

ಪಶ್ಚಿಮ ಪದವೀಧರರ ಕ್ಷೇತ್ರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್ ಯತ್ನ;...

ಪಶ್ಚಿಮ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀಧರರ ಕ್ಷೇತ್ರವೀಗ ಬಿಜೆಪಿಯ...

ʼರೈತರು ನಮ್ಮ ದೇಶದ ಬೆನ್ನೆಲುಬು. ಅವರ ಪರಿಶ್ರಮದಿಂದಲೇ ನಮಗೆ ಅನ್ನ ದೊರೆಯುತ್ತದೆ. ಅವರ ಬೆವರ ಹನಿಯಿಂದ ನಾವು ಬದುಕುತ್ತಿದ್ದೇವೆ. ಅಧುನಿಕ ತಂತ್ರಜ್ಞಾನ ಎಷ್ಟೆ ಬೆಳೆದರೂ ಅನ್ನದ ಅಗಳನ್ನು ತಯಾರಿಸಲು ಸಾಧ್ಯವಿಲ್ಲ. ಅದು ರೈತನಿಂದಲೇ ಸಾಧ್ಯ. ತಂತ್ರಜ್ಞಾನ ಬೆಳೆದ ಹಾಗೆ ನಮ್ಮ ದೇಶದ ಯುವಕ ನೌಕರಿಗಳು ಕಡಿಮೆಯಾಗುತ್ತಿವೆ. ಅದಕ್ಕಾಗಿ ನಾವು ಕೃಷಿಯ ಕಡೆ ಗಮನ ಕೊಡಬೇಕಾಗಿದೆ. ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತರು ದೇಶದ 140 ಕೋಟಿ ಜನರಿಗೆ ಆಹಾರ ಪೂರೈಸುವ ಮೂಲಕ ಪ್ರಮುಖ ಪಾತ್ರ ವಹಿಸುತ್ತಿದ್ದಾರೆʼ ಎಂದರು.

ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು, ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳು, ಬಸವಲಿಂಗ ಮಹಾಸ್ವಾಮಿಗಳುಸಿದ್ಧಯ್ಯ ಕೋಟೆ, ಸಿದ್ಧಲಿಂಗ ಮಹಾಸ್ವಾಮಿಗಳು, ಚನ್ನಬಸವ ಮಹಾಸ್ವಾಮಿಗಳು, ಘನಲಿಂಗ ರುದ್ರಮುನಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಿಕೊಂಡಿದ್ದರು.

ಇದನ್ನೂ ಓದಿ : ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ದೇವನೂರ ಮಹಾದೇವ, ಅಕ್ಕಮಹಾದೇವಿ ಪ್ರಶಸ್ತಿಗೆ ಕೆ ನೀಲಾ ಭಾಜನ

ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಸಿದ್ರಾಮಪ್ಪ ಅಣದೂರೆ, ಮಲ್ಲಿಕಾರ್ಜುನ ಸ್ವಾಮಿ, ಪ್ರಮುಖರಾದ ಬಸವರಾಜ ದೇಶಮುಖ, ಡಾ.ವೈಜಿನಾಥ ಬುಟ್ಟೆ, ಬಂಡೆಪ್ಪ ಕಂಟೆ, ರವಿ ಮೀಸೆ, ಪ್ರಕಾಶ ಘೂಳೆ, ಸುನೀಲ ಮಾಳಗೆ ಸೇರಿದಂತೆ ಹಲವರು ಇದ್ದರು.
ಆರತಿ ಪಾತ್ರೆ ನಿರೂಪಿಸಿದರು. ಶಿಖರೇಶ್ವರ ಶೆಟಕಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಏರ್‌ಪೋರ್ಟ್‌ನಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ 3 ಗಂಟೆ ವಶಕ್ಕೆ, 50 ಸಾವಿರ ರೂ.ದಂಡ!

ಪ್ಯಾರಿಸ್‌ನಿಂದ ಹಿಂದಿರುಗುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಭಾನುವಾರ ದೆಹಲಿ...

SBI ಮೇಲೆ ಸೈಬರ್ ದಾಳಿ: ಸಾವಿರಾರು ಗ್ರಾಹಕರ ಸೂಕ್ಷ್ಮ ವಿವರ ಡಾರ್ಕ್ ವೆಬ್‌ನಲ್ಲಿ ಬಹಿರಂಗ!

ಭಾರತೀಯ ಸ್ಟೇಟ್ ಬ್ಯಾಂಕ್ (SBI) ಮೇಲೆ ಸೈಬರ್ ದಾಳಿ ನಡೆದಿದ್ದು, ಸುಮಾರು...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...

ಮತದಾರರ ಪಟ್ಟಿ ಪರಿಷ್ಕರಣೆ ಸಾಫ್ಟ್‌ವೇರ್‌ನಲ್ಲಿ 4 ಬದಲಾವಣೆ; ಮಹಾರಾಷ್ಟ್ರದ ಮನವಿಗೆ ಕೊನೆಗೂ ಒಪ್ಪಿದ ಚುನಾವಣಾ ಆಯೋಗ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಗೆ ಹೆಚ್ಚಿನ...