ಭಾಲ್ಕಿ | ಎಪ್ರಿಲ್‌ನಲ್ಲಿ ವಚನ ಜಾತ್ರೆ, ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ: ಕರಪತ್ರ ಬಿಡುಗಡೆ

Date:

ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು ಸಲ್ಲಿಸುತ್ತಿರುವ ಸೇವೆ ಅನುಪಮ. ಅಂತಹ ಪೂಜ್ಯರು 75ವಸಂತಗಳನ್ನು ಪೂರೈಸುತ್ತಿರುವುದು ಸಂತಸದ ಸಂಗತಿ. ಅವರ ಅಮೃತ ಮಹೋತ್ಸವ ಐತಿಹಾಸಿಕವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರು ಆಗಿರುವ ಈಶ್ವರ ಖಂಡ್ರೆ ಹೇಳಿದರು.

- Advertisement -

ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಹಿರೇಮಠ ಸಂಸ್ಥಾನ, ಅಮೃತ ಮಹೋತ್ಸವ ಸಮಿತಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಬಸವಣ್ಣನವರ ಜಯಂತ್ಯುತ್ಸವ, ವಚನ ಜಾತ್ರೆ-2026, ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೋತ್ಸವ ಮತ್ತು ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ʼಭಾಲ್ಕಿಯಲ್ಲಿ ಮುಂದಿನ ತಿಂಗಳು ಏಪ್ರಿಲ್‌ನಲ್ಲಿ ಮೂರು ದಿವಸ ಐತಿಹಾಸಿಕವಾಗಿ ಸಮಾರಂಭ ಜರುಗಲಿದೆ. ಈಗಾಗಲೇ ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು, ಸುತ್ತೂರು, ತುಮಕೂರು, ಆದಿಚಿಂಚನಗಿರಿ ಶ್ರೀ, ರವಿಶಂಕರ್ ಗುರೂಜಿ ಸೇರಿ ನಾಡಿನ ನಾನಾ ಮಠಾಧೀಶರು, ಗಣ್ಯರನ್ನು ಭೇಟಿಯಾಗಿ ಈ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ಬಸವಲಿಂಗ ಪಟ್ಟದ್ದೇವರು ಅನೇಕ ವಿಧಾಯಕ ಕಾರ್ಯಗಳ ಮೂಲಕ ಶ್ರೀಮಠದ ಕೀರ್ತಿ ರಾಜ್ಯ, ರಾಷ್ಟ್ರ ವ್ಯಾಪಿ ಪಸರಿಸುವ ಕೆಲಸ ಮಾಡಿದ್ದಾರೆ. ಪಕ್ಷಾತೀತ ಮತ್ತು ಜಾತ್ಯತೀತವಾಗಿ ಎಲ್ಲರೂ ಸೇರಿ ಐತಿಹಾಸಿಕವಾಗಿ ಆಚರಿಸೋಣ. ಎಲ್ಲರೂ ಭಾಗವಹಿಸುವ ನಿರೀಕ್ಷೆಯಿದೆʼ ಎಂದರು.

ಸಮಿತಿ ಗೌರವಾಧ್ಯಕ್ಷ, ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ, ʼನಾಡಿನಾದ್ಯಂತ ಬಸವತತ್ವ ಪ್ರಚಾರ ಮತ್ತು ಪ್ರಸಾರ ಮಾಡುವಲ್ಲಿ ಹಿರೇಮಠ ಸಂಸ್ಥಾನದ ಕೊಡುಗೆ ದೊಡ್ಡದಿದೆ. ಶತಾಯಷಿ ಚನ್ನಬಸವ ಪಟ್ಟದ್ದೇವರು ಅಪ್ಪಟ ಬಸವತತ್ವ ಅನುಯಾಯಿ ಆಗಿದ್ದರು. ಅವರ ದಾರಿಯಲ್ಲೇ ಪರಮ ಪೂಜ್ಯ ಡಾ.ಬಸವಲಿಂಗ ಪಟ್ಟದ್ದೇವರು ನಡೆದು ಈ ಭಾಗದ ಪ್ರಗತಿಗೆ ಶ್ರಮಿಸುತ್ತಿದ್ದಾರೆ. ಅವರ ಅಮೃತ ಮಹೋತ್ಸವ ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸೋಣʼ ಎಂದು ತಿಳಿಸಿದರು.

ಸಾನ್ನಿಧ್ಯ ವಹಿಸಿದ್ದ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ʼಭಕ್ತರ ಒತ್ತಾಸೆಗೆ ಮಣಿದು ಅಮೃತ ಮಹೋತ್ಸವ ಆಚರಿಸಿಕೊಳ್ಳಲು ಒಪ್ಪಿಗೆ ನೀಡಿದ್ದೇನೆʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಬಲಗೈ ಸಮುದಾಯದ ಹೋರಾಟಗಾರರ ಮೇಲೆ ಪ್ರಕರಣ : ಡಿವಿಪಿ ಖಂಡನೆ

ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಹಣಮಂತರಾವ ಚವ್ಹಾಣ, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ವಂಕೆ, ತಾಲೂಕು ಬಿಜೆಪಿ ಅಧ್ಯಕ್ಷ ವೀರಣ್ಣ ಕಾರಬಾರಿ, ಪ್ರಮುಖರಾದ ಝರೆಪ್ಪ, ಅಮರ ಜಲ್ದೆ, ಮಹಾದೇವ ಬೇಲೂರೆ, ಕಾಶಿನಾಥ ಲದ್ದೆ, ಪ್ರಶಾಂತ ಕೊಟಗೀರಾ, ದೀಪಕ ಸಿಂಧೆ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...