ಭಾಲ್ಕಿ | ಸಂಭ್ರಮದಿಂದ ಜರುಗಿದ ವರ್ಷಾವಾಸ ಕಾರ್ಯಕ್ರಮ

Date:

ಭಾಲ್ಕಿ ತಾಲೂಕಿನ ನುದನೂರು ಗ್ರಾಮದಲ್ಲಿ ಭೀಮರಾಜ್ ಸೇನೆ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ 5ನೇ ವರ್ಷದ ವರ್ಷಾವಾಸ ಕಾರ್ಯಕ್ರಮವನ್ನು ನ.8ರಂದು ಸಂಭ್ರಮದಿಂದ ಜರುಗಿತು.

- Advertisement -

ಭೀಮರಾಜ್ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜೇಶ್ ಕಾಂಬಳೆ ಮಾತನಾಡಿ, “ಬಡ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಮಕ್ಕಳನ್ನು ಮೊಬೈಲ್ ಬಳಕೆಯಿಂದ ದೂರವಿಟ್ಟು ಶಿಕ್ಷಣದ ಕಡೆಗೆ ಗಮನಹರಿಸುವಂತೆ ಪೋಷಕರು ನೋಡಿಕೊಳ್ಳಬೇಕು. ಪ್ರತಿಯೊಂದು ಕುಟುಂಬದಿಂದ ಕನಿಷ್ಠ ಒಬ್ಬರಾದರೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ...

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ ಬಲಿ ಕೇವಲ ಸೋಲಿನ ಸಂಕೇತವಲ್ಲ; ಆತ ಚಾರಿತ್ರಿಕವಾಗಿ ಪ್ರಭುತ್ವದ ವಂಚನೆಯನ್ನು ಬಯಲು ಮಾಡುವ ಜೀವಂತ ಪ್ರತಿರೋಧ. ಊರಿಗೆಲ್ಲ ದೀಪಾವಳಿಯು ಬೆಳಕಿನ ಸಂಭ್ರಮವಾದರೆ,...

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

ರಾಜ್ಯ ಅಧ್ಯಕ್ಷ ಶಿವಕುಮಾರ್ ಕಮಲಾಪುರೆ ಮಾತನಾಡಿ, “ಸಾಮಾಜಿಕ ಪರಿವರ್ತನೆಗೆ ಸಮಾಜದ ಒಗ್ಗಟ್ಟು ಅತ್ಯಗತ್ಯ. ದಲಿತ ಸಮಾಜದಲ್ಲಿ ಒಗ್ಗಟ್ಟಿನ ಕೊರತೆಯಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಪರಸ್ಪರ ದ್ವೇಷ, ಅಸೂಯೆ ಬೆಳೆಸಿಕೊಳ್ಳದೆ, ನಮ್ಮನ್ನು ನಾವು ಅರಿತುಕೊಂಡು ಸಂಘಟಿತರಾಗಿ ಮುನ್ನಡೆದಾಗ ಮಾತ್ರ ಸಮಾಜದ ವಿಕಾಸ ಸಾಧ್ಯ” ಎಂದು ಹೇಳಿದರು.

ಸಹ ಶಿಕ್ಷಕ ಮಂಜುನಾಥ ದುಬಲಗುಂಡಿ ಅವರು ಗೌತಮ ಬುದ್ಧರ ವಿಚಾರಧಾರೆ ಹಾಗೂ ವರ್ಷಾವಾಸ ಕಾರ್ಯಕ್ರಮದ ಮಹತ್ವ ತಿಳಿಸಿದ ಅವರು, ಆಷಾಢ ಮಾಸದಲ್ಲಿ ಭಿಕ್ಷುಗಳು ಒಂದೆಡೆ ಸೇರಿ ಧ್ಯಾನ, ದಮ್ಮ ಹಾಗೂ ಬುದ್ಧರ ತತ್ವಗಳ ಕುರಿತು ಚರ್ಚಿಸುವ ಮೂಲಕ ಆಧ್ಯಾತ್ಮಿಕ ಮತ್ತು ಸಾಮಾಜಿಕ ಅರಿವು ಬೆಳೆಸಿಕೊಳ್ಳುತ್ತಾರೆ ಎಂದು ತಿಳಿಸಿದರು.

WhatsApp Image 2026 10 10 at 7.46.08 PM 40

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆಣದೂರು ವೈಶಾಲಿನಗರ ಸಂಘರಕ್ಷಿತ ಭಂತೆ ವಹಿಸಿದ್ದರು. ನಾಗಾರ್ಜುನ ಪೂಜಾರಿ ಉದ್ಘಾಟಿಸಿದರು. ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಮ್ಮ ಗೋಖಲೆ, ಗ್ರಾಮ ಘಟಕದ ಅಧ್ಯಕ್ಷ ಅಶೋಕ್ ಪೂಜಾರಿ ಹಾಗೂ ಪ್ರಮುಖರಾದ ರಘು ಕಾಂಬಳೆ, ಪ್ರಹ್ಲಾದ, ಸುಧಾಕರ್ ಶರೀಕರ್, ಗಣಪತಿರಾವ್, ಪ್ರಜ್ವಲ್ ಶರೀಕ, ಅಂಬಿಕಾ, ರೇಣುಕಾ ಧನೂರ್, ಶಿವಲೀಲಾ, ರಾಜ್ಯಶ್ರೀ, ಸಕ್ಕುಬಾಯಿ, ಸುಧಾಕರ್ ಶರೀಕರ್ ಹಾಗೂ ಸುನಿಲ್ ಶರೀಕರ್ ಪ್ರಮುಖ ದಾನಿಗಳಾಗಿ ನೆರವು ನೀಡಿದರು.

ಕಾಶಿನಾಥ್ ಜೋಳದಪ್ಪ, ವಿಶ್ವನಾಥ್ ಪೂಜಾರಿ, ಶಿವರಾಜ್ ಜೋಳದಪ್ಪ, ಬಕ್ಕಪ್ಪ ಹಾಗೂ ನಾಗಾರ್ಜುನ ಪೂಜಾರಿ ಸೇರಿದಂತೆ ಭಜನಾ ತಂಡದವರು, ಗ್ರಾಮದ ಹಿರಿಯರು, ಮುಖಂಡರು, ಬೌದ್ಧ ಉಪಾಸಕ-ಉಪಾಸಕಿಯರು ಭಾಗವಹಿಸಿದ್ದರು.

ಇದನ್ನೂ ಓದಿ : ಬೀದರ್‌ | ಪ್ರತಿ ಟನ್‌ ಕಬ್ಬಿಗೆ ₹4,000 ಬೆಂಬಲ ಬೆಲೆ ನಿಗದಿಪಡಿಸಿ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ, ಶಾ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ: ಪ್ರಧಾನಿಯ ‘ವೈಚಾರಿಕ ನಕ್ಸಲರು’ ಹೇಳಿಕೆಗೆ ಬಘೇಲ್ ತಿರುಗೇಟು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ವಿರುದ್ಧ...

ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ದೊಡ್ಡ ಮುನಿಸೂ ಇಲ್ಲ,...

ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ಭಾರೀ ರಿಯಾಯಿತಿ: ಸಿಎಂ ಡಿ ಕೆ ಶಿವಕುಮಾರ್‌

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭೂಸ್ವಾಧೀನಕ್ಕೊಳಪಟ್ಟ ಜಮೀನಿನಲ್ಲಿ 2008ರ ಆಗಸ್ಟ್ 10ರ ಪೂರ್ವದಲ್ಲಿ...

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು ಜೀವವಿತ್ತ ದೀಪಾವಳಿ!

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ,...