ಭಾಲ್ಕಿ | ಗಾಂಧೀಜಿ ಅಹಿಂಸಾ ತತ್ವ ಬದುಕಿನಲ್ಲಿ ಅನುಸರಿಸಿ : ಮಲ್ಲಿಕಾರ್ಜುನ ಹಲ್ಮಂಡಗೆ

Date:

ಭಾಲ್ಕಿಯ ನಿರ್ಮಲಾ ಹಲ್ಮಂಡಗೆ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಅವರ 157ನೇ ಜಯಂತಿ ಅಂಗವಾಗಿ ಶುಕ್ರವಾರ ಸ್ವಚ್ಛತಾ ಅಭಿಯಾನ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.

- Advertisement -

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛತೆಯ ಮಹತ್ವದ ಕುರಿತು ಜಾಗೃತಿ ಮೂಡಿಸಿದರು. ಮಕ್ಕಳು ಮಹಾತ್ಮ ಗಾಂಧೀಜಿ ಅವರ ವೇಷಭೂಷಣ ಧರಿಸಿ ಸಂಭ್ರಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು.

ಸಂಸ್ಥೆಯ ಸಂಸ್ಥಾಪಕ ಮಲ್ಲಿಕಾರ್ಜುನ ಹಲ್ಮಂಡಗೆ ಅವರು ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, “ಗಾಂಧೀಜಿ ಪ್ರತಿಪಾದಿಸಿದ ಅಹಿಂಸಾ ತತ್ವವನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬೇಕು” ಎಂದು ಹೇಳಿದರು.

Advertisements

ಇದನ್ನೂ ಓದಿ : ಬೀದರ್‌ | ಎಚ್‌ಐವಿ ಬಾಧಿತರು ಆತಂಕಕ್ಕೊಳಗಾಗದೆ ನಿಯಮಿತ ಔಷಧಿ ಸೇವಿಸಿ

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಅಮರ ಹಲ್ಮಂಡಗೆ, ಮೇಘಾ ಹಲ್ಮಂಡಗೆ, ಜಾಲಿಂದರ್ ಮೇತ್ರೆ, ಮೀನಾಕ್ಷಿ ಪಾಟೀಲ್, ಅಲ್ಪನಾ ಸೂರ್ಯನ್ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ? – ಭಾಗ 1

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...