ಭಾಲ್ಕಿ | ವಿಬಿ-ಜಿ ರಾಮ್ ಜಿ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮ

Date:

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ವಿಬಿ-ಜಿ ರಾಮ್ ಜಿ ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ಸ್ವಗ್ರಾಮದಲ್ಲಿಯೇ ಕೆಲಸ ಮಾಡಬೇಕು. ಕಾರ್ಮಿಕರು ಕೆಲಸಕ್ಕಾಗಿ ಬೇರೆ ಊರುಗಳಿಗೆ ವಲಸೆ ಹೋಗದೆ, ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸಿ ಉದ್ಯೋಗ ಪಡೆಯಬೇಕು ಎಂದು ಗ್ರಾಮ ಪಂಚಾಯಿತಿ ಕಾರ್ಮಿಕ ಮತ್ತು ಕಾಯಕ ಬಂಧುಗಳ ಅಭಿವೃದ್ಧಿ ಸಂಘದ ಅಧ್ಯಕ್ಷ ರಾಜಕುಮಾರ ಭಾವಿದೊಡ್ಡೆ ತಿಳಿಸಿದರು.

- Advertisement -

ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೇಗಂಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಾರ್ಮಿಕ ಮತ್ತು ಕಾಯಕ ಬಂಧುಗಳ ಅಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...
WhatsApp Image 2026 10 10 at 7.46.08 PM 9

ವಿಬಿ-ಜಿ ರಾಮ್ ಜಿ ಯೋಜನೆಯಡಿ ಕಾರ್ಮಿಕರು ಯಾವ ರೀತಿಯಲ್ಲಿ ಕೆಲಸ ಮಾಡಬೇಕು, ಕೆಲಸಕ್ಕೆ ಅನುಗುಣವಾಗಿ ಕೂಲಿ ಹಣ ಹೇಗೆ ನಿಗದಿಯಾಗುತ್ತದೆ ಎಂಬುದರ ಕುರಿತು ಕಾರ್ಮಿಕರಿಗೆ ಮಾಹಿತಿ ನೀಡಲಾಯಿತು. ನಿಗದಿತ ಮಾನದಂಡಗಳ ಪ್ರಕಾರ ಕೆಲಸ ನಿರ್ವಹಿಸಿದರೆ ಅದಕ್ಕೆ ಅನುಗುಣವಾಗಿ ಕೂಲಿ ದೊರೆಯುತ್ತದೆ. ಕಾರ್ಮಿಕರು ಸರಿಯಾಗಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಲಾಯಿತು.

ಕಾರ್ಮಿಕರು ಉದ್ಯೋಗಕ್ಕಾಗಿ ಬೇರೆ ಕಡೆಗಳಿಗೆ ತೆರಳುವ ಬದಲು ತಮ್ಮ ತಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಫಾರಂ ನಂ. 6 ಭರ್ತಿ ಮಾಡಿ ಸಲ್ಲಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ನಿಯಮಾನುಸಾರ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾರ್ಮಿಕರಿಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ  ಸಂಘದ ಅಧ್ಯಕ್ಷರಾಗಿ ಜ್ಯೋತಿ ಜಿತೇಂದ್ರ ಅವರೊಂದಿಗೆ ತೇಗಂಪುರ ಗ್ರಾಮದಲ್ಲಿ ಆಯ್ಕೆಯಾಗಿರುವುದಾಗಿ ತಿಳಿಸಲಾಯಿತು.

WhatsApp Image 2026 10 10 at 6.59.09 PM 4
ಜಾಹೀರಾತು

ಸಂಘದ ಉಪಾಧ್ಯಕ್ಷ ಪ್ರಕಾಶ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಸೇರಿದಂತೆ ಗ್ರಾಮ ಪಂಚಾಯಿತಿ ಕಾರ್ಮಿಕರು ಹಾಗೂ ಕಾಯಕ ಬಂಧುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್ ದಕ್ಷಿಣ ಕ್ಷೇತ್ರದಲ್ಲಿ 1 ಜಿ.ಪಂ. ಕ್ಷೇತ್ರವನ್ನಾದರೂ ಎಸ್‌ಸಿಗೆ ಮೀಸಲಿಡಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಜಂತರ್ ಮಂತರ್‌ ಪ್ರತಿಭಟನೆಗೆ ದೆಹಲಿ ಪೊಲೀಸರ ನಿರ್ಬಂಧ; AIDSO ಖಂಡನೆ!

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ನಿರ್ಬಂಧ ಹೇರಿರುವುದನ್ನು ವಿಜಯನಗರ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...