ಭಾಲ್ಕಿ | ಬರಪೀಡಿತ ಜಿಲ್ಲೆ ಘೋಷಿಸಿ : 4ನೇ ದಿನಕ್ಕೆ ಕಾಲಿಟ್ಟ ಧರಣಿ, ರಸ್ತೆ ಮೇಲೆ ಸ್ನಾನ ಮಾಡಿದ ರೈತರು!

Date:

ಬೀದರ್‌ ಜಿಲ್ಲೆಯ ಉಳಿದ ನಾಲ್ಕು ತಾಲೂಕುಗಳನ್ನು ಬರಪೀಡಿತ ತಾಲೂಕಗಳ ಪಟ್ಟಿಗೆ ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಭಾಲ್ಕಿ ನಗರದ ಗಾಂಧಿ ವೃತ್ತ ಸಮೀಪದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಶುಕ್ರವಾರ 4ನೇ ದಿನಕ್ಕೆ ಕಾಲಿಟ್ಟಿದೆ.

- Advertisement -

ರೈತರ ಪ್ರತಿಭಟನೆ ಭಜನೆ, ಹಾಡು ಸೇರಿದಂತೆ ವಿಭಿನವಾಗಿ ನಡೆಯುತ್ತಿದ್ದು, ನಾಲ್ಕನೇ ದಿನಕ್ಕೆ ಕಾಲಿಟ್ಟಿರುವ ಶುಕ್ರವಾರ ಧರಣಿ ಸ್ಥಳದ ರಸ್ತೆ ಮೇಲೆ ಬೆಳಿಗ್ಗೆ ರಸ್ತೆ ಮೇಲೆ ಸ್ನಾನ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಬೇಡಿಕೆಗಳು ಈಡೇರುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಬೀದರ್‌ ಜಿಲ್ಲೆಯ ಬಸವಕಲ್ಯಾಣ, ಬೀದರ್‌, ಹುಮನಾಬಾದ್‌ ಹಾಗೂ ಚಿಟಗುಪ್ಪ ತಾಲೂಕು ಬರಪೀಡಿತ ಎಂದು ಘೋಷಿಸಲಾಗಿದೆ. ಉಳಿದ ತಾಲೂಕುಗಳಾದ ಔರಾದ್‌, ಕಮಲನಗರ, ಹುಲಸೂರ ಹಾಗೂ ಭಾಲ್ಕಿ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು. ಪ್ರತಿ ಎಕರೆಗೆ 50 ಸಾವಿರ ಪರಿಹಾರ ಧನ ನೀಡಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

WhatsApp Image 2026 09 04 at 2.38.07 PM
ಪ್ರತಿಭಟನಾಕಾರರ ಆರೋಗ್ಯ ತಪಾಸಣೆ ನಡೆಸಿದ ವೈದ್ಯಾಧಿಕಾರಿಗಳು

ಜಿಲ್ಲೆಯಲ್ಲಿ ಕಬ್ಬು ಬೆಳೆ ಪ್ರದೇಶ ಹೆಚ್ಚಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್‌ ಕಬ್ಬಿಗೆ 5 ಸಾವಿರ ದರ ನಿಗದಿಪಡಿಸಬೇಕು. ಬೆಳೆ ವಿಮೆ ಪಾವತಿಸಿದ ರೈತರಿಗೆ ತಕ್ಷಣವೇ ಪರಿಹಾರ ಧನ ಜಮೆ ಮಾಡುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಪರಿಹಾರಕ್ಕೆ ಆಗ್ರಹಿಸಿದರು. ವ್ಯಕ್ತಪಡಿಸಿದರು.

ಇದನ್ನೂ ಓದಿ : ಭಾಲ್ಕಿ ತಾಲೂಕಿನ ಮೆಹಕರ್ ಗ್ರಾಮದಲ್ಲಿ ಸೆ.8ರಂದು ಪ್ರಜಾ ಸೇವಾ ಅಭಿಯಾನಕ್ಕೆ ಚಾಲನೆ

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ ಸಂಘದ ಪ್ರಮುಖರಾದ ನಾಗಶೆಟ್ಟೆಪ್ಪ ಲಂಜವಾಡೆ, ಜೈರಾಜ್ ಕೊಳ್ಳಾ, ಕೆ.ಡಿ.ಗಣೇಶ, ಪಂಡರಿ ಮೇತ್ರೆ, ಶಿವಾಜಿ ಮೇತ್ರೆ, ವಿಜಯಕುಮಾರ್ ಕೊಣೆ, ಭದ್ರಿ ಪಾತ್ರೆ, ಓಂಪ್ರಕಾಶ, ಅಶೋಕ ಕಾರಬಾರಿ, ದೀಪಕ ಶಿಂಧೆ, ದಯಾನಂದ ಖಾಶೆಂಪುರ, ಮಲ್ಲಿಕಾರ್ಜುನ ಬಿರಾದಾರ, ಶಿವಲಿಂಗಯ್ಯ ಸ್ವಾಮಿ, ಸುಭಾಷ ಮಾಶೆಟ್ಟೆ, ಜಾಂಟಿ ವಲಾಂಡೆ ಹಾಗೂ ವೀರಶೆಟ್ಟಿ ಬಕ್ಕಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನೆಹರೂ–ಗಾಂಧಿ, ಯಾದವ್ ಕುಟುಂಬಗಳ ನಾಯಕತ್ವ ಬೇಡ’: ಒವೈಸಿ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ

ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು...

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...