ಭಾಲ್ಕಿ | ವಕೀಲರ ಹಿತರಕ್ಷಣಾ ಕಾಯ್ದೆ ತಕ್ಷಣ ಜಾರಿಗೆ ತರಲು ಆಗ್ರಹ

Date:

ರಾಜ್ಯದಲ್ಲಿ ಕರ್ತವ್ಯ ನಿರತ ವಕೀಲರ ಮೇಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ದೌರ್ಜನ್ಯ, ಹಲ್ಲೆ ಹಾಗೂ ಹತ್ಯೆ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿರುವ ಭಾಲ್ಕಿ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು, ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆ–2023 ಅನ್ನು ತಕ್ಷಣವೇ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿದ್ದಾರೆ.

- Advertisement -

ಭಾಲ್ಕಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಮಹೇಶ ರಾಚೋಟೆ ನೇತೃತ್ವದಲ್ಲಿ ಮಂಗಳವಾರ ನಗರದ ತಹಸೀಲ್ ಕಚೇರಿಯಲ್ಲಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಹಸಿವು, ಹಕ್ಕು ಮತ್ತು ‘ದೇವರ ಹೆಣ’

ಹಸಿದವನಿಗೆ ಮಾಂಸವನ್ನು ನಿರಾಕರಿಸುವುದು ಕೇವಲ ದ್ವೇಷವಲ್ಲ, ಅದು ತನ್ನ ಜಾತಿಯ ಪಾವಿತ್ರ್ಯವನ್ನು ಹಸಿದ ಹೊಟ್ಟೆಯ ಮೇಲೆ ಹೇರುವ ಕ್ರೌರ್ಯ. ಇಂದಿನ ಗೋರಕ್ಷಣೆಯ ರಾಜಕಾರಣ ಹಿನ್ನೆಲೆಯಲ್ಲಿ ಈ 'ದೇವರ ಹೆಣ' ಕಥೆಯ ಒಳನೋಟ ಇನ್ನಷ್ಟು...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೆ ವಕೀಲರ ಹಿತರಕ್ಷಣಾ ಕಾಯ್ದೆಯನ್ನು ಸರ್ಕಾರದ ಆರನೇ ಗ್ಯಾರಂಟಿ ಎಂದು ಘೋಷಿಸಿದ್ದರು. ಆದರೆ, ಇಂದಿಗೂ ಈ ಭರವಸೆ ಕೇವಲ ವೇದಿಕೆಗಳಿಗೆ ಸೀಮಿತವಾಗಿದ್ದು, ಕಾಯ್ದೆ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಿಲ್ಲ ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದರು.

Advertisements

ಕರ್ತವ್ಯ ನಿರತ ವಕೀಲರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದರೂ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ತಕ್ಷಣವೇ ಕಾಯ್ದೆಯನ್ನು ಜಾರಿಗೆ ತಂದು ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇತ್ತೀಚೆಗೆ ಬೆಂಗಳೂರಿನ ವೈಟ್‌ಫೀಲ್ಡ್‌ನ ವಕೀಲ ಮಂಜುನಾಥ್, ಅನ್ನಪೂರ್ಣೇಶ್ವರಿ ನಗರದ ವಕೀಲ ಶ್ರೀರಾಮ್ ಅವರ ಬರ್ಬರ ಹತ್ಯೆ ಹಾಗೂ ಗೌರಿಬಿದನೂರಿನ ವಕೀಲ ವೆಂಕಟ್ರಮಣ ಸನ್ನಕಿ ಅವರ ಮೇಲಿನ ಕೊಲೆ ಯತ್ನ ಪ್ರಕರಣಗಳನ್ನು ವಕೀಲರ ಸಂಘ ತೀವ್ರವಾಗಿ ಖಂಡಿಸಿದೆ.

WhatsApp Image 2026 10 10 at 7.46.08 PM 32

ವಕೀಲರ ಮೇಲಿನ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳಲ್ಲಿ ಆರೋಪಿಗಳಿಗೆ ತ್ವರಿತವಾಗಿ ಶಿಕ್ಷೆಯಾಗುವಂತೆ ವಿಶೇಷ ಶೀಘ್ರಗತಿ ನ್ಯಾಯಾಲಯ ಸ್ಥಾಪಿಸಬೇಕು. ಅಲ್ಲದೆ, ಹತ್ಯೆಗೀಡಾದ ವಕೀಲರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಮನವಿ ಒತ್ತಾಯಿಸಲಾಗಿದೆ.

ವಕೀಲರ ಸಂಘದ ಉಪಾಧ್ಯಕ್ಷ ಮಕರಂದ ಮಾನಕಾರಿ, ಪ್ರಧಾನ ಕಾರ್ಯದರ್ಶಿ ವಾಗೇಶ ಪಾಟೀಲ, ಜಂಟಿ ಕಾರ್ಯದರ್ಶಿ ನೀಲಕಂಠ ಬಿರಾದಾರ, ಬಾಬುರಾವ ಗಾಮಾ, ನಾಗನಾಥ ಸ್ವಾಮಿ, ಬಸವರಾಜ ಸಿರ್ಸಿ, ವಿಜಯಕುಮಾರ ಪಾಟೀಲ, ಅನಿಮೇಶ ಆನಂದವಾಡೆ, ಶ್ರೀಕಾಂತ ಬೊರಾಳೆ, ಸೂರ್ಯಕಾಂತ ಪಾಟೀಲ, ಸಂಜು ಭದಸಂಗೆ, ಶಿವಕುಮಾರ್ ಸಂಗೊಳಗೆ, ಮಹಾಂತೇಶ ಪಾಟೀಲ, ಶಿವಕುಮಾರ ಮಾನ್ಕರ್, ಶತ್ರುಘ್ನ, ವರ್ಷಾ ಬಿಡುವೆ, ಹುಮಾ ಮರ್ವೀಣ, ವಂದನಾ ಶರ್ಮಾ, ದಯಾನಂದ ಪವಾರ, ಅನಿಲ ಕಳಸೆ, ಅವಿನಾಶ ಬೋರಾಳೆ, ಸಂತೋಷ ನೆಲ್ವಾಡೆ, ಕೈಲಾಶ ಮಡ್ಡೆ, ಉತ್ತಮ ಪೂರಿ, ನಾಗರಾಜ ಸಿರಸಿ, ಚಂದ್ರಕಾಂತ ನೆಳಗೆ, ಗುರುನಾಥ ಚಲಾವಾ, ಸಾರಂಗ, ರಾಜಕುಮಾರ, ಮಹೇಶ ಪರಸಣ್ಣೆ, ಬಸವ ಪಾಟೀಲ, ತುಕಾರಾಮ, ಸಂದೀಪ ತೇಲಗಾಂಕರ, ಸದಾಶಿವ ತೂಕದೇ, ತಾನಾಜಿ ಸುತಾರ, ಎಂಡಿ ನವಾಜ, ಮಹೇಶ ಹೊಸಾಳೆ, ಪದ್ಮಾಕರ ಮಲ್ಲೇಶಿ, ಉಮೇಶ ಕಡಗಂಚಿ, ಸಿರಾಜ ಮುನ್ಶಿ, ವಿಜಯಕುಮಾರ ಬಿರಾದಾರ, ಇಂದ್ರಶೆನ ಬಿರಾದಾರ, ಸಿದ್ಧರಾಮ ಪಾಟೀಲ, ಮಾಲೆ ಸೇರಿದಂತೆ ನೂರಾರು ವಕೀಲರು ಭಾಗವಹಿಸಿದ್ದರು.

WhatsApp Image 2026 10 10 at 6.59.42 PM 16
ಜಾಹೀರಾತು

ಇದನ್ನೂ ಓದಿ : ಈ ದಿನ ಸಂಪಾದಕೀಯ | ಕಬ್ಬು ಬೆಳೆಗಾರರ ಬಿಕ್ಕಟ್ಟನ್ನು ಬಗೆಹರಿಸಲಿ; ಆಗದಿದ್ದರೆ, ಅಧಿಕಾರ ಬಿಟ್ಟು ತೊಲಗಲಿ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಯೂ ಒಂದು ಅರ್ಥವ್ಯವಸ್ಥೆ: ಸುಪ್ರೀಂ ಕೋರ್ಟ್‌!

ಪ್ರತಿಭಟನೆಗಳು ಎಂದರೆ ಬರೀ ರಸ್ತೆ ತಡೆ, ಘೋಷಣೆಗಳು ಮತ್ತು ವ್ಯಾಪಾರ-ವಹಿವಾಟಿಗೆ ಧಕ್ಕೆ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ ಕಟ್ಟಿ ಉತ್ತರ ಕೊಟ್ಟಿದ್ದು ಹೇಗೆ?

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು...

ದಾವಣಗೆರೆ | ಹಾಲು,ಮೊಸರು ದರ ಏರಿಕೆ ಅವೈಜ್ಞಾನಿಕ: ಬೆಲೆ ಇಳಿಕೆಗೆ ಸಿಪಿಐ ಆಗ್ರಹ

ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಏರಿಸಿರುವ ಹಾಲು ಮತ್ತು ಮೊಸರಿನ ಬೆಲೆಯನ್ನು ಕೂಡಲೇ...

ಹೈಕೋರ್ಟ್ ತೀರ್ಪು ಬರುವವರೆಗೆ ಸೋನಮ್ ವಾಂಗ್‌ಚುಕ್ ಶಾಲೆಯ ಚಟುವಟಿಕೆ ತಡೆಗೆ ಲಡಾಖ್ ಆಡಳಿತ ಆದೇಶ

ಪರಿಸರ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರ 'ಹಿಮಾಲಯನ್...