ಭಾಲ್ಕಿ | ಕರ್ನಾಟಕದಲ್ಲಿ ಎಂಇಎಸ್ ನಿಷೇಧಿಸಲು ಆಗ್ರಹ

Date:

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಕರ್ನಾಟಕ, ಕನ್ನಡ ಭಾಷೆ ಹಾಗೂ ಕನ್ನಡಿಗರ ಕುರಿತು ವಿವಾದಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ದಿನೇಶ್ ಮುದಾಳೆ ಸೇರಿದಂತೆ ಅವರ ಬೆಂಬಲಿಗರನ್ನು ಗಡಿಪಾರು ಮಾಡಬೇಕು ಎಂದು ತಾಲೂಕು ಕನ್ನಡ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

- Advertisement -

ಈ ಸಂಬಂಧ ತಾಲೂಕು ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಂಗಮೇಶ ಗುಮ್ಮೆ ನೇತೃತ್ವದಲ್ಲಿ ಪದಾಧಿಕಾರಿಗಳು ನಗರದ ತಹಸಿಲ್ ಕಚೇರಿಯಲ್ಲಿ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಸಾಮಾಜಿಕ ಜಾಲತಾಣಗಳಲ್ಲಿ ಕರ್ನಾಟಕ, ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಿರುವವರ ಚಟುವಟಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇಂತಹ ಹೇಳಿಕೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿ, ಕಾನೂನು ಉಲ್ಲಂಘನೆ ದೃಢಪಟ್ಟಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಕನ್ನಡ ನೆಲದಲ್ಲಿ ಜನಿಸಿ, ಇಲ್ಲಿನ ಸೌಲಭ್ಯಗಳನ್ನು ಪಡೆದುಕೊಂಡು ಕನ್ನಡ ನಾಡು, ನುಡಿ ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಮತ್ತು ಭಾಷೆಗಳ ನಡುವೆ ವೈಷಮ್ಯ ಬಿತ್ತುವುದು ಖಂಡನೀಯ. ಗಡಿ ಜಿಲ್ಲೆಗಳಾದ ಬೀದರ್ ಹಾಗೂ ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರು ಸಹೋದರರಂತೆ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಆದರೆ ಇಂತಹ ವ್ಯಕ್ತಿಗಳ ಹೇಳಿಕೆಗಳಿಂದ ಪರಸ್ಪರ ಸಾಮರಸ್ಯಕ್ಕೆ ಧಕ್ಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ದಿನೇಶ್ ಮುದಾಳೆ ಸೇರಿದಂತೆ ಇಂತಹ ಹೇಳಿಕೆ ನೀಡುವವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

WhatsApp Image 2026 10 10 at 7.46.08 PM 38

ಜಯ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಸಂತೋಷ ಬಿ.ಜಿ. ಪಾಟೀಲ್, ಮಾಳಸ್ಕಾಂತ ವಾಘೆ, ಸಂಗಮೇಶ ಭೂರೆ, ಚಂದ್ರಕಾಂತ ಮಲ್ಲಾರೆ, ಅಶೋಕ ಅಂಬಿಗರ, ನವನಾಥ ಕಲವಾಡಿ, ರಾಜಕುಮಾರ ದುರ್ವೆ, ವಿಷ್ಣು ದುರ್ವೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ವಿವಿ ನೂತನ ಮೌಲ್ಯಮಾಪನ ಕುಲಸಚಿವರಾಗಿ ರಾಜಕುಮಾರ್ ಮಾಲಿಪಾಟೀಲ ನೇಮಕ

ಬೀದರ್ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಹುದ್ದೆಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ...

ಬೀದರ್‌ | ವಚನ-ದಾಸ ಸಾಹಿತ್ಯದಲ್ಲಿ ಮೊಳಗಿದ ಬಂಡಾಯ ಧ್ವನಿ: ಸಚಿವ ಈಶ್ವರ ಖಂಡ್ರೆ

ಬಿ.ಶ್ಯಾಮಸುಂದರ್‌ ವೇದಿಕೆ : ಸಮಾಜೋಧಾರ್ಮಿಕ ಕ್ರಾಂತಿಯ ಮೂಲಕ ಹೊಸ ಚಿಂತನೆಗಳಿಗೆ ನಾಂದಿ...

ತುರ್ತು ಪರಿಸ್ಥಿತಿ ಒಂದು ದೊಡ್ಡ ತಪ್ಪು; ಇಂದಿರಾ ಗಾಂಧಿಗೂ ಪಶ್ಚಾತ್ತಾಪವಿತ್ತು: ಸೋನಿಯಾ ಗಾಂಧಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು1975ರಲ್ಲಿ ಜಾರಿಗೆ ತಂದಿದ್ದ ತುರ್ತು ಪರಿಸ್ಥಿತಿಯ...