ಭಾಲ್ಕಿ | ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Date:

ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಭಾಲ್ಕಿ ತಾಲೂಕಿನ ವರವಟ್ಟಿ (ಬಿ) ಗ್ರಾಮದಲ್ಲಿ ಸೆ.7ರಂದು ರಾತ್ರಿ ನಡೆದಿದೆ.

- Advertisement -

ವರವಟ್ಟಿ (ಬಿ) ಗ್ರಾಮದ ಬೋಲಾನಂದ ಸ್ವಾಮಿ (45) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

ಮೃತ ರೈತ ಬೋಲಾನಂದ ಸ್ವಾಮಿ ಅವರು 2.38 ಎಕರೆ ಜಮೀನು ಹೊಂದಿದ್ದರು. ಕೃಷಿ ಚಟುವಟಿಕೆಗಳಿಗಾಗಿ ನಾವದಗಿ ಗ್ರಾಮದ ಪಿಕೆಪಿಎಸ್ ಬ್ಯಾಂಕ್‌ನಲ್ಲಿ ₹1 ಲಕ್ಷ ಸಾಲ ಪಡೆದಿದ್ದರು. ಅಲ್ಲದೆ, ಗ್ರಾಮದ ಖಾಸಗಿ ವ್ಯಕ್ತಿಗಳಿಂದಲೂ ₹4 ಲಕ್ಷ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬಂದಿರಲಿಲ್ಲ. ಇದರಿಂದ ಸಾಲ ತೀರಿಸುವುದು ಹೇಗೆ ಎಂಬ ಚಿಂತೆಗೆ ಒಳಗಾಗಿದ್ದ ರೈತ, ಸೆ.7ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಬೀದರ್‌ | ಜನರ ಮನೆ ಬಾಗಿಲಿಗೆ ಸರ್ಕಾರ, ಪ್ರಜಾ ಸೇವಕನಾಗಿ ಸೇವೆ : ಸಚಿವ ಈಶ್ವರ ಖಂಡ್ರೆ

ಈ ಕುರಿತು ಮೃತ ರೈತನ ಪತ್ನಿ ಭಾಗ್ಯಶ್ರೀ ನೀಡಿದ ದೂರಿನ ಮೇರೆಗೆ ಖಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಶಾಲಾ ಆವರಣದಲ್ಲಿ ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ; ಸ್ಥಳದಲ್ಲಿ ಮೂರು ಡೆತ್‌ನೋಟ್‌ಗಳು ಪತ್ತೆ

ರಾಷ್ಟ್ರ ರಾಜಧಾನಿ ದೆಹಲಿಯ ಕೃಷ್ಣ ನಗರ ಪ್ರದೇಶದಲ್ಲಿರುವ ಸರ್ವೋದಯ ಕನ್ಯಾ ವಿದ್ಯಾಲಯದ...

ಕಾಲದ ಹಾದಿಯಲ್ಲಿ ಅಮರ ಪ್ರೇಮ ಕಾವ್ಯ: ರಾಜೀವ್ ಜತೆಗಿನ ಮಧುರ ಒಡನಾಟ ನೆನೆದು ಭಾವುಕರಾದ ಸೋನಿಯಾ ಗಾಂಧಿ

ಬದುಕಿನ ಸಂಧ್ಯಾಕಾಲದಲ್ಲಿ ನಿಂತು ಹಿಂದಿನ ಸವಿ ನೆನಪುಗಳನ್ನು ಮೆಲುಕು ಹಾಕುವುದು ಒಂದು...

ಭಾಲ್ಕಿ | ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮ ಕೈಗೊಳ್ಳಲು ನಮ್ಮ ಕರ್ನಾಟಕ ಸೇನೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ಅಂಗಡಿ, ಮುಂಗಟ್ಟುಗಳು ಸೇರಿದಂತೆ ಎಲ್ಲ ವ್ಯಾಪಾರ ಸಂಸ್ಥೆಗಳು,...

ಈ ದಿನ ಸಂಪಾದಕೀಯ | ಅಮೆರಿಕದ ದಬ್ಬಾಳಿಕೆ-ಮೋದಿ ಸರ್ಕಾರದ ಮೌನ; ಭಾರತದ ಸಾರ್ವಭೌಮತ್ವಕ್ಕೆ ಶೋಭೆಯಲ್ಲ!

ತನ್ನ ಹಿತಾಸಕ್ತಿಗಾಗಿ ಭಾರತದ ಇಂಧನ, ವ್ಯಾಪಾರ ಹಾಗೂ ವಿದೇಶಾಂಗ ನೀತಿಗಳನ್ನು ನಿಯಂತ್ರಿಸಲು...