ಭಾಲ್ಕಿ | ಬಸವಣ್ಣನವರ ಅವಹೇಳನ: ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಜಗತ್ತಿಗೆ ಸಮಾನತೆ, ಕಾಯಕ ಮತ್ತು ದಾಸೋಹದ ಸಂದೇಶ ಸಾರಿದ ವಿಶ್ವಗುರು ಬಸವಣ್ಣನವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಶೋಧಕ ರವಿ ಹಂಜ್ ಹಾಗೂ ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಸೋಮವಾರ ಮನವಿ ಸಲ್ಲಿಸಿದರು.

- Advertisement -

ನಗರದ ತಹಸೀಲ್ ಕಚೇರಿಯಲ್ಲಿ ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಗೌರವಾಧ್ಯಕ್ಷ ರಮೇಶ ಚಿದ್ರಿ ಹಾಗೂ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್ ನೇತೃತ್ವದಲ್ಲಿ ತಹಸೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಬಸವಣ್ಣನವರು ಜಗತ್ತಿಗೆ ಸಮಾನತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸಾರಿದ ಮಹಾನ್ ಚಿಂತಕರಾಗಿದ್ದಾರೆ. ಇಂತಹ ಮಹಾನ್ ವ್ಯಕ್ತಿತ್ವದ ಕುರಿತು ಅವಹೇಳನಕಾರಿ ಹೇಳಿಕೆ ನೀಡುವುದು ಸಮಾಜದ ಭಾವನೆಗಳಿಗೆ ಧಕ್ಕೆ ಉಂಟುಮಾಡುತ್ತದೆ. ಈ ಹಿನ್ನೆಲೆಯಲ್ಲಿ ರವಿ ಹಂಜ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಈ ಹೇಳಿಕೆಗಳ ಹಿಂದೆ ಇರುವವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮಹಾತ್ಮರು ಹಾಗೂ ಸಮಾಜ ಸುಧಾರಕರ ಕುರಿತು ಉದ್ದೇಶಪೂರ್ವಕವಾಗಿ ಅವಹೇಳನಕಾರಿ ಹೇಳಿಕೆ ನೀಡಿ ಪ್ರಚಾರ ಪಡೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಶೇಷ ಕಾನೂನು ರೂಪಿಸಬೇಕು. ಪತ್ರಿಕಾ ಸ್ವಾತಂತ್ರ್ಯದ ದುರುಪಯೋಗವಾಗದಂತೆ ಕ್ರಮ ವಹಿಸಬೇಕು ಹಾಗೂ ಈ ಪ್ರಕರಣದಲ್ಲಿ ವಿಶ್ವೇಶ್ವರ ಭಟ್ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

WhatsApp Image 2026 11 13 at 8.18.17 PM 12

ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ ರಮೇಶ ಚಿದ್ರಿ, ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್, ಸುದೀಪ ತೂಗಾವೆ, ಬಸವರಾಜ ಕಾರಬಾರಿ, ಜಗದೀಶ ಪಾಟೀಲ್, ಕಾಶಿನಾಥ ಚಳಕಾಪೂರೆ, ರಾಜು ಕುಂಬಾರ, ಸಂಗಮೇಶ ಮಾರ್ಗೆ, ವಿಷ್ಣು ದುರ್ವೆ, ಪ್ರಶಾಂತ ಹನುಮಶೆಟ್ಟಿ, ಮಹೇಶ ರಾಚೋಟೆ, ವೀರಶೆಟ್ಟಿ, ಬಸವರಾಜ, ಸಿದ್ಧಗೊಂಡ, ಶಿವಾಜಿ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ ದಕ್ಷಿಣ ಮಡಿವಾಳ ಸಮಾಜ ಸಂಘದ ನೂತನ ಅಧ್ಯಕ್ಷರಾಗಿ ರಾಜಕುಮಾರ ಆಯ್ಕೆ

WhatsApp Image 2026 11 23 at 7.41.16 PM
ಜಾಹೀರಾತು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

ಶಿವಮೊಗ್ಗ | 67 ಕ್ವಿಂಟಾಲ್ ಪಡಿತರ ಅಕ್ಕಿ ಕೊರತೆ: ಪರಿಶೀಲನೆಗೆ ಆಗ್ರಹ

ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಸಂಬಂಧಪಟ್ಟ ಆಹಾರ ಇಲಾಖೆಯ ಆಹಾರ ನಿರೀಕ್ಷಕರಾದ...

ಯುಪಿ ಚುನಾವಣೆ | ಎಸ್‌ಪಿ-ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಮಾತುಕತೆ ಆರಂಭ; 2-4 ದಿನಗಳಲ್ಲಿ ಅಂತಿಮ ನಿರ್ಧಾರ ಸಾಧ್ಯತೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಇಂಡಿಯಾ ಮೈತ್ರಿಕೂಟದ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600 ಕೋಟಿ ಕ್ಲಬ್ ಸೇರಿದ ದೇಶದ 5ನೇ ಸಿನಿಮಾ

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17...